ಒತ್ತಡದಿಂದ ಪಾರಾಗಲು ಯೋಗ ಸಹಕಾರಿ
Team Udayavani, Jul 6, 2019, 3:00 AM IST
ದೊಡ್ಡಬಳ್ಳಾಪುರ: ಪೊಲೀಸ್ ಇಲಾಖೆ ಸಿಬ್ಬಂದಿ ಸದಾ ಒತ್ತಡದಲ್ಲಿ ಕೆಲಸ ಮಾಡುವಾಗ ಮಾನಸಿಕವಾಗಿ ಒಂದಿಷ್ಟು ವಿಚಲಿತ ರಾಗುವುದು ಸಾಮಾನ್ಯ. ಆದರೆ ಮಾನಸಿಕ ಒತ್ತಡದಿಂದ ಹೊರಬರುವ ಸುಲಭ ವಿಧಾನ ಯೋಗದ ಅಭ್ಯಾಸ ಮಾಡುವುದು ಎಂದು ಮಾನಸಿಕ ರೋಗ ತಜ್ಞೆ ಡಾ.ಸಹೇನಬೇಗಂ ಹೇಳಿದರು.
ನಗರದ ಕನ್ನಡ ಜಾಗೃತ ಭವನದಲ್ಲಿ ಪೊಲೀಸ್ ಸಿಬ್ಬಂದಿಗಾಗಿ ನಡೆದ ಮಾನಸಿಕ ಒತ್ತಡ ನಿವಾರಣೆ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಶಾಂತಿಯುತ ಸಮಾಜ ನಿರ್ಮಾಣದಲ್ಲಿ ಪೊಲೀಸ್ ಸಿಬ್ಬಂದಿಯ ಪಾತ್ರ ಪ್ರಮುಖವಾಗಿದೆ. ಆದರೆ ಸದಾ ಕೆಲಸದ ಒತ್ತಡದಿಂದಾಗಿ ಮಾನಸಿಕವಾಗಿ ಕುಗ್ಗಿ ಹೋಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ವಾಗುತ್ತಿದೆ ಎಂದರು.
ಕೌಟುಂಬಿಕ ಸಮಸ್ಯೆಗಳು ಹಾಗೂ ಬಿಡುವಿಲ್ಲದ ಕೆಲಸಗಳು ನಮ್ಮ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತದೆ. ಇದರಿಂದಾಗಿ ಕೆಲಸದಲ್ಲಿ ನಿರಾಸಕ್ತಿ, ಕ್ರಿಯಾಶೀಲತೆ ಕಳೆದುಕೊಳ್ಳುವುದು, ಕುಟುಂಬದಲ್ಲಿ ಸದಾ ಕಿರಿಕಿರಿ ಅನುಭವಿಸುತ್ತಾರೆ. ಈ ಎಲ್ಲವುಗಳಿಂದ ಹೊರಬಂದು ನೆಮ್ಮದಿಯಾಗಿದ್ದರೆ ಮಾತ್ರ ದೈಹಿಕವಾಗಿಯೂ ಆರೋಗ್ಯವಾಗಿರಲು ಸಾಧ್ಯ ಎಂದು ತಿಳಿಸಿದರು.
ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಮಾನಸಿಕ ಕಿನ್ನತೆಗಳಿಂದ ಹೊರಬರುವ ಸರಳ ವ್ಯಾಯಾಮ, ಯೋಗಗಳನ್ನು ತಿಳಿಸಲಾಗುತ್ತಿದೆ. ಸಿಬ್ಬಂದಿ ಇವುಗಳನ್ನು ನಿಯಮಿತವಾಗಿ ಪಾಲಿಸಿಕೊಂಡು ಬಂದರೆ ವೃತ್ತಿ ಜೀವನದಲ್ಲಷ್ಟೇ ಅಲ್ಲದೇ ತಮ್ಮ ಕೌಟುಂಬಿಕ ಬದುಕಿನಲ್ಲೂ ನೆಮ್ಮದಿ ಕಂಡುಕೊಳ್ಳಬಹುದಾಗಿದೆ. ನಿವೃತ್ತಿ ನಂತರವೂ ಸಹ ಸುಖಕರ ಬದುಕು ನಡೆಸಲು ಸಾಧ್ಯ ಎಂದರು.
ಸರ್ಕಲ್ ಇನ್ಸ್‌ಪೆಕ್ಟರ್ ಜಿ.ಸಿದ್ದರಾಜು, ನಗರ ಪೊಲೀಸ್ ಠಾಣೆ ಸಬ್‌ಇನ್ಸ್‌ಪೆಕ್ಟರ್ ಕೆ.ವೆಂಕಟೇಶ್, ಅಪರಾಧ ವಿಭಾಗದ ಸಬ್ ಇನ್ಸ್‌ಪೆಕ್ಟರ್ ರಂಗನಾಥ್, ರಾಜಾನುಕುಂಟೆ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಪ್ರದೀಪ್ ಪೂಜಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.