ಝೀಕಾ; ಭಯಬೇಡ, ಎಚ್ಚರಿಕೆ ಇರಲಿ


Team Udayavani, Nov 4, 2023, 3:13 PM IST

ಝೀಕಾ; ಭಯಬೇಡ, ಎಚ್ಚರಿಕೆ ಇರಲಿ

ದೇವನಹಳ್ಳಿ: ಝೀಕಾ ವೈರಸ್‌ಬಗ್ಗೆ ಜಿಲ್ಲೆಯ ಜನ ಆತಂಕ ಪಡಬಾರದು. ವೈರಸ್‌ ಸೋಂಕಿನ ಬಗ್ಗೆ ಭಯ ಬೇಡ, ಎಚ್ಚರವಿರಲಿ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಜನರಿಗೆ ಮಾಹಿತಿ ನೀಡಿದೆ.

ಚಿಕಬಳಾಪುರ ಜಿಲ್ಲೆಯ ಶಿಡ್ಡಘಟ್ಟ ತಾಲೂಕಿನ ತಲಕಾಯಲ ಬೆಟ್ಟದ ವ್ಯಾಪ್ತಿಯಲ್ಲಿ ಝೀಕಾ ವೈರಸ್‌ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಮತ್ತು ಕುಟುಂಬ ಇಲಾಖೆ ಮುಂಜಾಗ್ರತ ಕ್ರಮ ಚುರುಕಾಗಿ ಕೈಗೊಳ್ಳುತ್ತಿದೆ. ಇಂತಹ ಪ್ರಕರಣ ಬಾರದಂತೆ ಹೆಚ್ಚು ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮುಂದಾಗಿದೆ.

ನಿಗಾ: ಝೀಕಾ ವೈರಸ್‌ ಜಿಲ್ಲೆಯಲ್ಲಿ ಇದುವರೆಗೂ ಪತ್ತೆಯಾಗಿಲ್ಲ. ಜನ ಯಾವುದೇ ಕಾರಣಕ್ಕೂ ಆತಂಕಪಡುವಂತಿಲ್ಲ. ಎಚ್ಚರವಹಿಸಿ, ಸೊಳ್ಳೆಗಳು ಉತ್ಪತ್ತಿಯಾಗದಂತೆ ನೋಡಿಕೊಳ್ಳಬೇಕು. ಮನೆ ಸುತ್ತ ಸ್ವತ್ಛತೆಗೆ ಆದ್ಯತೆ ನೀಡಿ. ಪಕ್ಕದ ಜಿಲ್ಲೆ ಆಗಿರುವುದರಿಂದ ಹೆಚ್ಚಿನ ನಿಗಾವಹಿಸಬೇಕು. ಮಲೇರಿಯಾ, ಡೆಂ à, ಚಿಕೂನ್‌ ಗುನ್ಯಾ, ಹರಡುವ ಸೊಳ್ಳೆಗಳ ನಿಯಂತ್ರಣ ಕ್ರಮಗಳನ್ನೇ ಝೀಕಾ ವೈರಸ್‌ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಕಡ್ಡಾಯವಾಗಿ ಪಾಲಿಸಬೇಕು.

ರಕ್ತ ಪರೀಕ್ಷೆ ಮಾಡಿಸಿ: ರೋಗದ ಲಕ್ಷಣ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು 2 -7 ದಿನದವರೆಗೆ ಇರುತ್ತದೆ. ಗರ್ಭಿಣಿಯರು ವಿಶೇಷವಾಗಿ ಎಚ್ಚರಿಕೆ ವಹಿಸಬೇಕು. ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ರೋಗ ಲಕ್ಷಣ ಕಂಡು ಬಂದಲ್ಲಿ ಹತ್ತಿರದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರನ್ನು ಸಂಪರ್ಕಿಸಿ ಎಂದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸ್ವಚ್ಛತೆ ಕಾಪಾಡಿ: ಸೊಳ್ಳೆಗಳು ಸಾಮಾನ್ಯವಾಗಿ ಸಂತಾನೋತ್ಪತ್ತಿ ಮಾಡುವುದು. ಮನೆ ಸುತ್ತಲೂ ನೀರು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಪ್ರತಿಯೊಬ್ಬ ವ್ಯಕ್ತಿಯೂ ಮುನ್ನೆಚ್ಚರಿಕೆ ತೆಗೆದುಕೊಂಡರೆ ವೈರಸ್‌ ಹರಳುವ ಸಾಧ್ಯತೆ ಕಡಿಮೆಯಾಗುತ್ತದೆ. ಝೀಕಾ ವೈರಸ್‌ ತಡೆಗಟ್ಟಲು ನೀರು ಶೇಖರಣ ಪರಿಕರ ಮುಚ್ಚಳದಿಂದ ಮುಚ್ಚಿಡಬೇಕು ಮತ್ತು ವಾರಕೊಮ್ಮೆ ಸ್ವತ್ಛಗೊಳಿಸಿ ಮನೆ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆ-ಚಿಕಿತ್ಸೆ ಉಚಿತ: ರೋಗದ ಲಕ್ಷಣ ಕಂಡು ಬಂದವರ ರಕ್ತ ಮಾದರಿ ಹಾಗೂ ಮೂತ್ರದ ಮಾದರಿ ಸಂಗ್ರಹಿಸಿ ಪರೀಕ್ಷಿಸುವ ಮೂಲಕ ಪತ್ತೆ ಹಚ್ಚಬಹುದು.

ಸೋಂಕು ಕಾಣಿಸಿಕೊಂಡವರಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಝೀಕಾ ವೈರಸ್‌ ಸೋಂಕಿನ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಬಳಸುವುದು. ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವುದು. ಮನೆ ಒಳಾಂಗಣ ಮತ್ತು ಹೊರಾಂಗಣ ಸ್ವತ್ಛವಾಗಿ ಇಡುವುದು ಹೀಗೆ ಅನೇಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೆ ವೈರಸ್‌ ಅನ್ನು ಬರೆದಂತೆ ನೋಡಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸುತ್ತಿದ್ದಾರೆ.

ಝೀಕಾ ಸೋಂಕಿನ ಲಕ್ಷಣಗಳು ಏನೇನು?: ಕಣ್ಣು ಕೆಂಪಾಗುವಿಕೆ, ತಲೆನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು. ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು. ಇಂತಹ ಲಕ್ಷಣ ಕಾಣಿಸಿಕೊಂಡವರು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತೆರಳಿ ಚಿಕಿತ್ಸೆ ಪಡೆಯಬೇಕು. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆ ಗಾತ್ರದಲ್ಲಿ ಕಡಿಮೆ (ಮೈಕೊ›à ಸೆಫಾಲಿ) ಬೆಳವಣಿಗೆಗೆ ದೋಷ ಕಂಡು ಬರಬಹುದು. ದೇವನಹಳ್ಳಿ ತಾಲೂಕಿನ ವಿಜಯಪುರದಿಂದ ಶಿಡ್ಡಘಟ್ಟಕ್ಕೆ 14 ಕಿ.ಮೀ. ಹಾಗೂ ತಲಕಾಯಲ ಬೆಟ್ಟಕ್ಕೆ 22 ಒಟ್ಟು 36ಕಿ.ಮೀ. ಆಗುತ್ತದೆ. ಅದಕ್ಕಾಗಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಝೀಕಾ ವೈರಸ್‌ ಪತ್ತೆಯಾಗಿಲ್ಲ. ಯಾರಿಗಾದರೂ ಝೀಕಾ ವೈರಸ್‌ ಲಕ್ಷಣ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಯಾರೂ ಭಯಪಡುವಂತಿಲ್ಲ. – ಸುನೀಲ್‌ ಕುಮಾರ್‌, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ‌

-ಎಸ್.ಮಹೇಶ್‌

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.