ಯಾಂತ್ರಿಕ ಬದುಕಿನಿಂದ ನೆಮ್ಮದಿ ಭಂಗ
•ಶ್ರಾವಣ ಪ್ರಯುಕ್ತ ಗವಿಮಠದಲ್ಲಿ ಸಿದ್ಧಾಂತ ಶಿಖಾಮಣಿ-ವಚನ ಸಾಹಿತ್ಯ ಉಪನ್ಯಾಸ ಕಾರ್ಯಕ್ರಮ
Team Udayavani, Aug 17, 2019, 10:18 AM IST
ಬಸವಕಲ್ಯಾಣ: ನಗರದ ಗವಿಮಠದಲ್ಲಿ ನಡೆದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಎಂಬಿಬಿಎಸ್ ಪ್ರವೇಶ ಪಡೆದ ಬಸವರಾಜ ಶಿಕಾನಪುರೆ ಅವರನ್ನು ಸನ್ಮಾನಿಸಲಾಯಿತು.
ಬಸವಕಲ್ಯಾಣ: ಪ್ರಸ್ತುತ ದಿನಗಳಲ್ಲಿ ನಾವು ಯಾಂತ್ರಿಕ ಜೀವನದಿಂದ ಶಾಂತಿ-ನೆಮ್ಮದಿ ಕಳೆದು ಕೊಂಡು ಎಲ್ಲವೂ ಇದ್ದು ಏನೂ ಇಲ್ಲದಂತಹ ಹಂತಕ್ಕೆ ಬಂದು ತಲುಪಿದ್ದೇವೆ ಎಂದು ನಗರಸಭೆ ಆಯುಕ್ತ ಸುರೇಶ ಬಬಲಾದ ಹೇಳಿದರು.
ನಗರದ ಗವಿಮಠದಲ್ಲಿ ಶ್ರೀ ಘನಲಿಂಗ ರುದ್ರಮುನಿ ಶಿವಾಚಾರ್ಯ ಗವಿಮಠ ಟ್ರಸ್ಟ್, ಶ್ರೀಮದ್ವೀರಶೈವ ಸದ್ಭೋಧನ ಸಂಸ್ಥೆ ಮತ್ತು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸಹಯೋಗದಲ್ಲಿ ಶ್ರಾವಣಮಾಸ ನಿಮಿತ್ತ ಹಮ್ಮಿಕೊಂಡಿದ್ದ ಸಿದ್ಧಾಂತ ಶಿಖಾಮಣಿ ಹಾಗೂ ವಚನ ಸಾಹಿತ್ಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೀವನದಲ್ಲಿ ಉತ್ಸಾಹ- ನೆಮ್ಮದಿ ಬರಬೇಕಾದರೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಅವಶ್ಯವಾಗಿದೆ ಎಂದರು.
ಸಿಪಿಐ ಮಲ್ಲಿಕಾರ್ಜುನ ಯಾತನೂರ ಮಾತನಾಡಿ, ಸಿದ್ಧಾಂತ ಶಿಖಾಮಣಿ ಉಪದೇಶ ಕೇಳುವುದೇ ಭವ್ಯವಾಗಿದೆ. ಹುಮನಾಬಾದ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಸಿದ್ಧಾಂತ ಶಿಖಾಮಣಿ ಕುರಿತು ಒಂದು ತಿಂಗಳು ಶ್ರೀ ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯರು ನೀಡಿರುವ ಉಪದೇಶ ಇಂದಿಗೂ ಮರೆತಿಲ್ಲ ಎಂದರು.
ಸಾನ್ನಿಧ್ಯ ವಹಿಸಿದ್ದ ಗವಿಮಠದ ಶ್ರೀ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಆಶೀರ್ವಚನ ನೀಡಿ, ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರು ಅಗಸ್ತ್ಯರಿಗೆ ಬೋಧಿಸಿದ ಸಿದ್ಧಾಂತ ಶಿಖಾಮಣಿಯಲ್ಲಿ ಆಚಾರ ಪರಮೊ ಧರ್ಮ ಎಂದು ಉಪದೇಶಿಸಿದ್ದಾರೆ. ಅಂದರೆ ಪರಿಶುದ್ಧವಾದ ನಡೆ- ನುಡಿಯೇ ಶ್ರೇಷ್ಠ ಧರ್ಮ ಎಂದು ಹೇಳಿದ್ದಾರೆ. ಅದೇರೀತಿ ವಚನ ಸಾಹಿತ್ಯದಲ್ಲಿ ಶಿವಶರಣರು ಆಚಾರವೇ ಸ್ವರ್ಗ ಅನಾಚಾರವೇ ನರಕ ಎಂದು ಹೇಳಿದ್ದಾರೆ. ಈ ತತ್ವಗಳನ್ನು ಎಲ್ಲರೂ ಸರಿಯಾಗಿ ಅರಿತು ಅವುಗಳಂತೆ ಬದುಕು ಸಾಗಿಸಿದರೆ ಬದುಕೇ ಸ್ವರ್ಗವಾಗುತ್ತದೆ ಎಂದು ಸಲಹೆ ನೀಡಿದರು.
ಶಿಕ್ಷಕ ನಾಗೇಂದ್ರ ಬಿರಾದಾರ್ ವಿಶೇಷ ಉಪನ್ಯಾಸ ನೀಡಿದರು. ಟ್ರಸ್ಟ್ ಕಾರ್ಯಾಧ್ಯಕ್ಷ ಶರಣಪ್ಪಾ ಬಿರಾದಾರ, ಸಂಸ್ಥೆ ಅಧ್ಯಕ್ಷ ಬಸವಂತಪ್ಪ ಲವಾಕೆ, ಅನೀಲ ಪಾಟೀಲ, ವಿಶ್ವನಾಥ ಬಿರಾದಾರ, ಗುರುಲಿಂಗಯ್ಯ ಕಳಗಿಮಠ ಮಲ್ಲಿಕಾರ್ಜುನ ಅಲಶೆಟ್ಟೆ, ಬಾಬುರಾವ್ ಚಳಕಾಪೂರೆ, ಮಲ್ಲಿಕಾಜುನ ನಂದಿ, ಪ್ರೊ| ದಯಾನಂದ ಶೀಲವಂತ, ರೇವಣಸಿದ್ಧಯ್ಯ ಮಠಪತಿ, ವೀರಶೆಟ್ಟಿ ಪಾಟೀಲ, ಕಾಶೀನಾಥ ಕಡಗಂಚೆ, ಶೇಖರ ವಸ್ತ್ರದ, ಲೋಕೇಶ ಮಠ, ಸಿದ್ರಾಮಯ್ಯ ಹಿರೇಮಠ ಮತ್ತಿತರರು ಇದ್ದರು. ಪ್ರೊ| ಸೂರ್ಯಕಾಂತ ಶೀಲವಂತ ಸ್ವಾಗತಿಸಿದರು. ಶಿಕ್ಷಕ ಮಲ್ಲಿಕಾರ್ಜುನ ಆಲಗೂಡೆ ನಿರೂಪಿಸಿದರು. ಕಾಶೀನಾಥ ಸ್ವಾಮಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ
Udupi: ಗೀತಾರ್ಥ ಚಿಂತನೆ 142: “ಧೀರ’ ಯಾರು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.