ನಿರಂತರ ಜ್ಯೋತಿ ಅನುಷ್ಠಾನ
•ಸಿಎಂ ವಾಸ್ತವ್ಯ ಮಾಡುವುದರಿಂದ ಕಾಮಗಾರಿ ತೀವ್ರ-ಗ್ರಾಮಸ್ಥರಲ್ಲಿ ಖುಷಿ
Team Udayavani, Jun 22, 2019, 10:08 AM IST
ಬಸವಕಲ್ಯಾಣ: ಉಜಳಂಬ ಗ್ರಾಮದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ನಿರಂತರ ಜ್ಯೋತಿ ಕಾಮಗಾರಿ ಕೈಗೊಳ್ಳಲಾಗಿದೆ.
ವೀರಾರೆಡ್ಡಿ ಆರ್.ಎಸ್.
ಬಸವಕಲ್ಯಾಣ: ಉಜಳಂಬ ಗ್ರಾಮ ಪಂಚಾಯಿತಿಯು ನಿರಂತರ ಜ್ಯೋತಿ ಯೋಜನೆಗೆ ಆಯ್ಕೆಯಾಗಿ ಕೆಲವು ವರ್ಷಗಳೇ ಕಳೆದಿದ್ದವು. ಆದರೆ ಅಧಿಕಾರಿಗಳ ನಿರ್ಲಕ್ಷವೋ ಅಥವಾ ತಾಂತ್ರಿಕ ಕಾರಣವೊ ನಿರಂತರ ಜ್ಯೋತಿ ಯೋಜನೆ ಬೆಳಕು ಮಾತ್ರ ಬಹುತೇಕ ಗ್ರಾಮಗಳಲ್ಲಿ ಇಂದಿಗೂ ಪ್ರಕಾಶಿಸಲು ಸಾಧ್ಯವಾಗಿಲ್ಲ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲು ಉಜಳಂಬಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಸಂಬಂಧ ಪಟ್ಟ ಇಲಾಖೆಯಿಂದ ನನೆಗುದಿಗೆ ಬಿದ್ದ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಈಗ ತೀವ್ರಗತಿಯಲ್ಲಿ ನಡೆಯುತ್ತಿದೆ. ಉಜಳಂಬ ಗ್ರಾಮದ ತುಂಬೆಲ್ಲಾ ವಿದ್ಯುತ್ ಕಂಬಗಳು ಹಾಗೂ ತಂತಿ ಜೋಡಣೆ ಕಾಮಗಾರಿ ಭರದಿಂದ ಸಾಗಿದೆ. ಇದು ಗ್ರಾಮಸ್ಥರು, ವೃದ್ಧರು, ಮಹಿಳೆಯರು ಹಾಗೂ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸ ಮೂಡಿಸುವಂತೆ ಮಾಡಿದೆ. 2015-16ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಯೋಜನೆಯಲ್ಲಿ ಬಸವಕಲ್ಯಾಣ ತಾಲೂಕಿನ 180 ಹಳ್ಳಿಗಳನ್ನು ನಿರಂತರ ಜ್ಯೋತಿ ಯೋಜನೆಯಡಿ ಆಯ್ಕೆ ಮಾಡಿ, 2019ರ ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ಟೆಂಡರ್ ಪ್ರಕಾರ ಕಾಮಗಾರಿ ಮುಗಿಸಬೇಕಾಗಿತ್ತು. ಆದರೆ ಟೆಂಡರ್ ಪಡೆದ ಗುತ್ತಿಗೆದಾರರ ಸಮಸ್ಯೆಯಿಂದ ಕೇವಲ ಮಂಠಾಳ, ಮುಡಬಿ ಮತ್ತು ಭೋಸ್ಗಾ ಗ್ರಾಮಗಳಲ್ಲಿ ನಿರಂತರ ಜ್ಯೋತಿ ಯೋಜನೆಯ ಕಾಮಗಾರಿ ಪೂರ್ಣಗೊಂಡಿದ್ದು, ಉಳಿದ ಗ್ರಾಮಗಳಲ್ಲಿ ಕಾಮಗಾರಿಗಳು ಕೊನೆಯ ಹಂತದಲ್ಲಿವೆ ಎಂದು ಸಂಬಂಧ ಪಟ್ಟ ಇಲಾಖೆ ಎಇಇ ಅಧಿಕಾರಿ ಗಣಪತಿ ಟಿ. ಮೈನಾಳೆ ತಿಳಿಸಿದ್ದಾರೆ.
ಉಜಳಂಬ ಗ್ರಾಮದಲ್ಲಿ ನಿರಂತರ ಜ್ಯೋತಿ ಯೋಜನೆ ಕಾಮಗಾರಿಯು ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ಮಾಡಲು ಬರುತ್ತಿರುವ ಹಿನ್ನೆಲೆಯಲ್ಲಿ ಆರಂಭಗೊಂಡಿದ್ದು, ಗ್ರಾಮಸ್ಥರಿಗೆ ಇನ್ನುಮುಂದೆ ಗ್ರಾಮದಲ್ಲಿ ನಿರಂತರವಾಗಿ ವಿದ್ಯುತ್ ಇರುತ್ತದೆ ಎಂದು ಗ್ರಾಮಸ್ಥರು ಖುಷಿಯಲ್ಲಿದ್ದಾರೆ.
ಆದರೆ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿ ಕೇವಲ ಸಿಎಂ ಬಂದು ಹೋಗುವವರೆಗೆ ಮಾತ್ರ ನಡೆಯುತ್ತಿದೆಯೊ ಅಥವಾ ಕೆಲಸ ಪೂರ್ಣಗೊಳಿಸಿ ಗ್ರಾಮದಲ್ಲಿ ನಿರಂತರ ವಿದ್ಯುತ್ ಇರುವಂತೆ ಮಾಡುತ್ತಾರೊ ಎಂಬುದು ಸಿಎಂ ಬಂದು ಹೋದ ಮೇಲೆ ಗೊತ್ತಾಗಲಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ. ಒಟ್ಟಿನಲ್ಲಿ ಮುಖ್ಯಮಂತ್ರಿ ಬರುವ ಮುನ್ನವೇ ಉಜಳಂಬ ಗ್ರಾಮಸ್ಥರ ಬೇಡಿಕೆಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ಮುತರ್ಜಿ ವಹಿಸಿ ಒಂದೊಂದಾಗಿ ಬಗೆಹರಿಸುತ್ತಿರುವುದು ಎಲ್ಲರ ಗಮನ ಸೆಳೆಯುವಂತೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.