ಮತ ಚಲಾವಣೆ ಜಾಗೃತಿಗಾಗಿ ವಿಭಿನ್ನ ಕಾರ್ಯಕ್ರಮ

ಸಹಾಯಕ ಆಯುಕ್ತರ ನೇತೃತ್ವದಲ್ಲಿ ವಿವಿಧ ಚಟುವಟಿಕೆ

Team Udayavani, Apr 13, 2019, 10:49 AM IST

13-April-4

ಬಸವಕಲ್ಯಾಣ: ಮತದಾನ ಜಾಗೃತಿ ಅಭಿಯಾನ ಮಾಡುವ ಸ್ವೀಪ್‌ ತಂಡದ ಜೊತೆಗೆ ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವಾರ.

ಬಸವಕಲ್ಯಾಣ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಜಿಲ್ಲಾಡಳಿತ ನೀಡಿದ ಚಟುವಟಿಕೆ ಜೊತೆಗೆ, ಪ್ರಥಮ ಬಾರಿಗೆ ಮತ
ಚಲಾಯಿಸುವ ಯುವಕರಿಗೆ ಮತದಾನದ ಮಹತ್ವ ತಿಳಿಸಲು ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವಾರ ನೇತೃತ್ವದಲ್ಲಿ ವಿವಿಧ ಚಟುವಟಿಕೆ ಹಮ್ಮಿಕೊಳ್ಳುವ ಮೂಲಕ ವಿಭಿನ್ನವಾಗಿ ಮತದಾನ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.

ಮತದಾನ ಜಾಗೃತಿ ಮೂಡಿಸಲು ನಗರಸಭೆ ಹಾಗೂ ತಾಲೂಕು ಆಡಳಿತ ಸಂಯುಕ್ತಾಶ್ರಯದಲ್ಲಿ 15ರನ್ನು ಜನ ಒಳಗೊಂಡ ಸ್ವೀಪ್‌ ತಂಡ ರಚಿಸಲಾಗಿದ್ದು, ತಂಡದ ಪ್ರತಿಯೊಬ್ಬರಿಗೂ ನೀಡಿದ ಟೀ ಶರ್ಟ್‌ ಮೇಲೆ ಮತದಾನ ಮಾಡಿ ಪ್ರಜಾಪ್ರಭುತ್ವ ಬಲಪಡಿಸಿ ಎಂದು ನಮೂದಿಸಲಾಗಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮತದಾನದ ಮಹತ್ವ ಮತ್ತು ಉದ್ದೇಶ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದೇ ಸ್ವೀಪ್‌ ಟೀಂ ಮೂಲ ಉದ್ದೇಶವಾಗಿದೆ.

ನಗರದ ಪ್ರತಿಯೊಂದು ಬಡಾವಣೆಯ ಅಂಗಡಿ ಮತ್ತು ಮನೆಗಳಿಗೆ ತೆರಳಿ ಕಡ್ಡಾಯ ಮತದಾನದ ಭಿತ್ತಿಚಿತ್ರಗಳನ್ನು ಅಂಟಿಸಲಾಗಿದೆ. ಮತ್ತು ಮಸೀದಿ,
ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ಏ.23ರಂದು ತಪ್ಪದೆ ಮತದಾನ ಮಾಡಲು ಹೇಳಬೇಕು ಎಂದು ಮೌಲಾನಾ ಮತ್ತು ಅರ್ಚಕರಿಗೆ ಸೂಚನೆ ನೀಡಲಾಗಿದೆ.

ಈಗಾಗಲೇ ಕೋಟೆಯಿಂದ ರಾಷ್ಟ್ರೀಯ ಹೆದ್ದಾರಿ ಬಂಗ್ಲಾ ವರೆಗೆ ಬೈಕ್‌ ರ್ಯಾಲಿ ನಡೆಸಲಾಗಿದೆ. ಗುರುವಾರ ರಾತ್ರಿ ಮಹಿಳೆಯರಿಂದ ಕ್ಯಾಂಡಲ್‌ ಮಾರ್ಚ್‌ ನಡೆಸಲಾಗಿದೆ. ಪ್ರಥಮ ಬಾರಿಗೆ ಮತದಾನ ಹಕ್ಕು ಚಲಾಯಿಸುವ ಶಾಲಾ-ಕಾಲೇಜುಗಳಲ್ಲಿ ಮತದಾನದ ಬಗ್ಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಮತದಾನದ ಅರಿವು ಮೂಡಿಸಲಾಗುತ್ತಿದೆ.

ಇನ್ನು ಲೋಕಸಭೆ ಚುನಾವಣೆ ಮತದಾನಕ್ಕೆ 10 ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಹೋಬಳಿ ಮಟ್ಟದಲ್ಲಿ ಬೈಕ್‌ ರ್ಯಾಲಿ ಸೇರಿದಂತೆ ವಿವಿಧ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. 14ರಂದು ಜಿಪಂ ಕ್ಷೇತ್ರವಾದ ಕೋಹಿನೂರ ಗ್ರಾಮದಲ್ಲಿ ಕುಸ್ತಿ ಪಂದ್ಯ ಏರ್ಪಡಿಸಲಾಗಿದೆ ಎಂದು ಸಹಾಯಕ ಆಯುಕ್ತ ಜ್ಞಾನೇಂದ್ರ ಕುಮಾರ ಗಂಗವಾರ ತಿಳಿಸಿದ್ದಾರೆ.

ಬಸವಕಲ್ಯಾಣ ತಾಲೂಕಿನಲ್ಲಿ ಕಳೆದ ಲೋಕಸಭೆ ಚುನಾವಣೆಗಿಂತ ಈ ಬಾರಿ ಹೆಚ್ಚು ಸಂಖ್ಯೆಯಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸುವ ನಿಟ್ಟಿನಲ್ಲಿ ಹಗಲು ರಾತ್ರಿ ವಿವಿಧ ಅಭಿಯಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಇತರರಿಗೆ ಮಾದರಿಯಾಗಿದೆ.

ಪ್ರತಿಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತ ಬರುತ್ತಿದೆ. ಆದ್ದರಿಂದ ಈ ವರ್ಷ ಯುವಕರಲ್ಲಿ ಮತ್ತು ಸಾರ್ವಜನಿಕರಲ್ಲಿ ಮತದಾನದ ಮಹತ್ವ ತಿಳಿಸುವ ಉದ್ದೇಶದಿಂದ ನಿತ್ಯ ಮತದಾನದ ಜಾಗೃತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
.ಜ್ಞಾನೇಂದ್ರಕುಮಾರ ಗಂಗವಾರ,
ಸಹಾಯಕ ಆಯುಕ್ತ, ಬಸವಕಲ್ಯಾಣ

ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

13-ghati-1

Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.