ಹೀಗಿದೆ ನೋಡಿ ಸರ್ಕಾರಿ ಆಸ್ಪತ್ರೆ
ಖಾಸಗಿ ಆಸ್ಪತ್ರೆ ಸರಿಗಟ್ಟುವ ಸೇವೆ •ಆಸ್ಪತ್ರೆ ಮುಡಿಗೆ ಕಾಯಕಲ್ಪ ಪ್ರಶಸ್ತಿ•ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ
Team Udayavani, May 9, 2019, 10:40 AM IST
ಬಸವನಬಾಗೇವಾಡಿ: ಪಟ್ಟಣದ ಸರಕಾರಿ ಆಸ್ಪತ್ರೆ ಹೊರ ನೋಟ.
ಬಸವನಬಾಗೇವಾಡಿ: ಸರಕಾರಿ ಆಸ್ಪತ್ರೆ ಅಂದಾಕ್ಷಣ ಹೆಚ್ಚಾಗಿ ಜನರು ಮೂಗು ಮುರಿಯುವುದೆ ಹೆಚ್ಚಾಗಿರುವ ಈ ದಿನದಲ್ಲಿ ಅದಕ್ಕೆ ವಿರುದ್ಧವಾಗಿ ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆ ಬಡವರ ಪಾಲಿನ ಸಂಜೀವಿನಿಯಾಗಿ ಹೊರ ಹೊಮ್ಮುತ್ತಿದೆ.
ಹೌದು ಇದು ಅಚ್ಚರಿ ಎನಿಸಿದರೂ ಸತ್ಯ. ಸ್ಥಳೀಯ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಅವರ ಮಾರ್ಗದರ್ಶನ, ಇಲ್ಲಿನ ವೈದ್ಯಾಧಿಕಾರಿಗಳ ಹಾಗೂ ಸಿಬ್ಬಂದಿಗಳ ನಿಸ್ವಾರ್ಥ ಸೇವೆಯಿಂದ ಬಡ ರೋಗಿಗಳ ಪಾಲಿಗೆ ಈ ಆಸ್ಪತ್ರೆ ಆಶಾಕಿರಣವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿನ ಸೌಲಭ್ಯಗಳು ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಸಿಗುತ್ತಿರುವುದು ಸಂತಸಕರ ಸಂಗತಿಯಾಗಿದೆ.
ಸೌಲಭ್ಯಗಳು: ಪಟ್ಟಣದ ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಸಿಜರಿಯನ್ ಶಸ್ತ್ರಚಿಕಿತ್ಸೆ, ಕಣ್ಣಿನ ಕಾಂಟ್ರ್ಯಾಕ್ಟ ಶಸ್ತ್ರ ಚಿಕಿತ್ಸೆ, ಆಯೂಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಸ್ಕೀಮ್, ತೀವ್ರ ನಿಗಾ ಘಟಕ, ಡಯಾಲಿಸಿಸ್ ಘಟಕ, ಟೆಲಿಮೆಡಿಸೆನ್, ಕಪ ಪರೀಕ್ಷಾ ಕೇಂದ್ರ, ಇ-ಹಾಸ್ಪಿಟಲ್, ಗಾರ್ಡ್‌ನ್, ಆಯೂಷ್ ಗಾರ್ಡನ್, ಪಾರ್ಕಿಂಗ್ ವ್ಯವಸ್ಥೆ, ರೋಗಿಗಳ ಸಂಬಂಧಿಕರಿಗೆ ವಿಶ್ರಾಂತಿ ಧಾಮ, ಕ್ಯಾಂಟೀನ್ ವ್ಯವಸ್ಥೆ, ನಂದಿನಿ ಮಿಲ್ಕ ಪಾರ್ಲರ್, ಹಾಪ್‌ಕಾಮ್ಸ್, ಶುದ್ಧ ಕುಡಿಯುವ ನೀರಿನ ಘಟಕದಿಂದ ರೋಗಿಗಳಿಗೆತುಂಬ ಅನುಕೂಲವಾಗುತ್ತಿದೆ.
ಆಸ್ಪತ್ರೆಗೆ ಪ್ರತಿ ನಿತ್ಯ 500ರಿಂದ 600 ಹೊರ ರೋಗಿಗಳು ಬರುತ್ತಾರೆ. ಪ್ರತಿ ತಿಂಗಳು 120ರಿಂದ 200ರವರೆಗೆ ಹೆರಿಗೆಯಾಗುತ್ತವೆ. ಪ್ರತಿ ತಿಂಗಳು 150ಕ್ಕೂ ಹೆಚ್ಚು ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಒಳ ರೋಗಿಗಳಿಗೆ ಅಗತ್ಯವಿರುವ ಸೌಲಭ್ಯಗಳು ಸೇರಿದಂತೆ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಲಾಗುತ್ತಿದೆ. ವಿದ್ಯುತ್ ಸರಬರಾಜು ನಿಂತು ಹೋದಲ್ಲಿ ಜನರೇಟರ್ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾರ್ವಜನಿಕ ಆಸ್ಪತ್ರೆಗಳಲ್ಲಿನ ಆರೋಗ್ಯ ಸೌಲಭ್ಯ, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ನೀಡುವ ಕಾಯಕಲ್ಪ ಪ್ರಶಸ್ತಿ ಈ ಬಾರಿ ಬಸವನಬಾಗೇವಾಡಿ ತಾಲೂಕಾಸ್ಪತ್ರೆಗೆ ಸಂದಿದ್ದು ಅತ್ಯಂತ ಸ್ತುತ್ಯರ್ಹವಾಗಿದೆ. ಸಿಬ್ಬಂದಿಗಳ ನಿಸ್ವಾರ್ಥ ಸೇವೆಗೆ ಈ ಪ್ರಶಸ್ತಿ ಪ್ರೋತ್ಸಾಹ ನೀಡಲು ಸಹಕಾರಿಯಾಗಿದೆ.
ವೈದ್ಯರ ಕೊರತೆ: ಚಿಕ್ಕ ಮಕ್ಕಳ ತಜ್ಞರು, ಕಿವಿ, ಮೂಗು, ಗಂಟಲು, ಚರ್ಮ ರೋಗ ಹಾಗೂ ಮಾನಸಿಕ ತಜ್ಞರ ಕೊರತೆ ಇದೆ. ಈ ವೈದ್ಯರು ಸರಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಿದರೆ ಸಾರ್ವಜನಿಕರಿಗೆ ಮತ್ತಷ್ಟು ಅನುಕೂಲವಾಗುತ್ತದೆ. ಆರೋಗ್ಯ ಸಚಿವರಾದ ಶಿವಾನಂದ ಪಾಟೀಲ ಅಗತ್ಯ ವೈದ್ಯರನ್ನು ನೇಮಿಸುವ ಮೂಲಕ ಮತ್ತಷ್ಟು ಸೌಲಭ್ಯಗಳು ಮುಂದಿನ ದಿನಗಳಲ್ಲಿ ದೊರಕಿಸಿ ಕೊಡಬೇಕೆಂಬುದು ನಾಗರಿಕರ ಆಶಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.