ಮತದಾನ ಅರಿವು ಮೂಡಿಸಿ: ಪ್ರಾಣೇಶ
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಹಾಸ್ಯ ಸಂಜೆ ಕಾರ್ಯಕ್ರಮ ಮತದಾನ ಜಾಗೃತಿ
Team Udayavani, Apr 6, 2019, 3:23 PM IST
ಬಸವನಬಾಗೇವಾಡಿ: ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಹಾಸ್ಯ ಸಂಜೆ ಕಾರ್ಯಕ್ರಮದಲ್ಲಿ ಗಂಗಾವತಿಯ ಹಾಸ್ಯ ಕಲಾವಿದ ಬಿ.ಪ್ರಾಣೇಶ ಮಾತನಾಡಿದರು.
ಬಸವನಬಾಗೇವಾಡಿ: ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಮತದಾನದ ಹಕ್ಕಿನ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಗಂಗಾವತಿ ಹಾಸ್ಯ ಕಲಾವಿದ ಬಿ.ಪ್ರಾಣೇಶ ಹೇಳಿದರು.
ಪಟ್ಟಣದ ವಿಜಯಪುರ ರಸ್ತೆಯ ವೀರಭದ್ರೇಶ್ವರ ನಗರದಲ್ಲಿರುವ ಪುರಸಭೆ ಉದ್ಯಾನದಲ್ಲಿ ವಿಜಯಪುರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಪುರಸಭೆ ಮತದಾನ ಜಾಗೃತಿಗೆ ಹಮ್ಮಿಕೊಂಡಿದ್ದ ಹಾಸ್ಯ ಸಂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೆಲವರು ನನ್ನದೊಂದು ಮತದಿಂದ ದೇಶಕ್ಕೆ ಹಾನಿ ಏನಾಗುತ್ತದೆ. ಎಂದು ಯೋಚಿಸಿ ಮತದಾನ ಮಾಡುವುದಿಲ್ಲ. ಪ್ರತಿಯೊಂದು ಮತವು ಕೂಡಾ ಅಮೂಲ್ಯ. ಒಂದು ಮತದಿಂದ ಮಾತ್ರ ದೇಶದ ಅಭಿವೃದ್ಧಿ ಅಡಗಿರುತ್ತದೆ. ಈ ನಿಟ್ಟಿನಲ್ಲಿ ತಮ್ಮ ಮತವನ್ನು ಕಡ್ಡಾಯವಾಗಿ ಚಲಾಯಿಸಿದಾಗ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ
ಎಂದರು.
ಐದು ವರ್ಷಕ್ಕೊಮ್ಮೆ ಬರುವ ಚುನಾವಣೆ ಮಹಾಪೂಜೆ ಇದ್ದ ಹಾಗೆ. ಈ ಪೂಜೆಯಲ್ಲಿ ಎಲ್ಲ ಮತದಾರರು ಭಾಗವಹಿಸುವ ಮೂಲಕ ಶೇ. 100 ಮತದಾನವಾಗುವಂತಾಗಬೇಕು. ಚುನಾವಣೆ
ಬಂತೆಂದರೆ ನಮಗೆ ಅದು ಪರೀಕ್ಷೆಯ ಕಾಲ ಇದ್ದ ಹಾಗೆ. ಆಸೆ ಆಮಿಷಗಳಿಗೆ ಒಳಗಾಗುವುದು ಅಪರಾಧ. ಮತವನ್ನು ಹಣಕ್ಕೆ ಮಾರಿಕೊಳ್ಳಬೇಡಿ. ದೇವರನ್ನು ಮೀರಿದ್ದು ದೇಶ. ದೇಶ ಸರ್ವರಂಗದಲ್ಲಿ ಪ್ರಗತಿ ಕಾಣಬೇಕು. ಸರಿಯಾದ ವ್ಯಕ್ತಿಗೆ ಮತ ಹಾಕಿದರೆ ದೇಶ ಸುಭದ್ರವಾಗುತ್ತದೆ. ದೇಶದ ಭವಿಷ್ಯ ನಿರ್ಧರಿಸುವ
ಮತದಾನ ದಿನದಂದು ಮೋಜು ಮಸ್ತಿಗಾಗಿ ಪ್ರವಾಸಕ್ಕೆ ತೆರಳದೇ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.
ಸಹಾಯಕ ಚುನಾವಣಾ ಅಧಿ ಕಾರಿ ಸಿದ್ದು ಹುಲ್ಲೊಳ್ಳಿ ಮಾತನಾಡಿ, ಮತದಾನ ನಮ್ಮ ಹಕ್ಕು ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಅಂಗವಿಕಲಮತದಾರರನ್ನು ಮತಗಟ್ಟೆಗೆ ಕರೆತರಲು ವಾಹನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರ, ತಾಪಂ ಇಒ ಬಿ.ಜೆ. ಇಂಡಿ, ಅಂಗನವಾಡಿ ಮೇಲ್ವಿಚಾರಕಿ ಆರ್.ಎಸ್. ವಾಸನದ, ವೆಂಕಟೇಶ, ಕಂದಾಯ ನಿರೀಕ್ಷಕ ಶಬ್ಬೀರ್ ರೇವರಕರ, ಸಿದ್ದಾರ್ಥ ಕಳ್ಳಿಮನಿ, ರುದ್ದಗೌಡ ಸೊಲ್ಲಾಪುರ, ಎಲ್.ಎಂ. ಕಾಂಬಳೆ, ಕೆ.ಒ. ಮುಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜನಾಥ ಗುಳೇದಗುಡ್ಡ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Kundapura: ಹತ್ತೂರು ಸೇರುವ ಮುಳ್ಳಿಕಟ್ಟೆಗೆ ಬೇಕು ಬಸ್ ನಿಲ್ದಾಣ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.