![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 8, 2019, 11:48 AM IST
ಬಸವನಬಾಗೇವಾಡಿ: ತಾಪಂ ಸಭಾಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಶಿವಾನಂದ ಪಾಟೀಲ ಮಾತನಾಡಿದರು.
ಬಸವನಬಾಗೇವಾಡಿ: ಸಾರ್ವಜನಿಕರಿಗೆ ಹಾಗೂ ರೈತರಿಗೆ ಮೂಲಭೂತ ಸೌಲಭ್ಯಗಳಲ್ಲಿ ಯಾವುದೇ ರೀತಿ ತೊಂದರೆಯಾಗದಂತೆ ತಾಲೂಕು ಮಟ್ಟದ ಅಕಾರಿಗಳು ನಿಗಾ ವಹಿಸಬೇಕು. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮಾಜಿ ಸಚಿವ ಶಾಸಕ ಶಿವಾನಂದ ಪಾಟೀಲ ಹೇಳಿದರು.
ಶನಿವಾರ ಪಟ್ಟಣದ ತಾಪಂ ಸಭಾಭವನದಲ್ಲಿ ನಡೆದ ತ್ತೈ ಮಾಸಿಕ (ಕೆಡಿಪಿ) ಸಭೆ ಹಾಗೂ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲೂಕಿನ ಸಾರ್ವಜನಿಕರಿಗೆ ಹಾಗೂ ರೈತರಿಗೆ ಅಗತ್ಯವಿರುವ ಕುಡಿವ ನೀರು, ನೀರಾವರಿ, ರಸ್ತೆ, ಶೌಚಾಲಯ, ವಿದ್ಯುತ್, ಆರೋಗ್ಯ, ಶಿಕ್ಷಣ ಸೇರಿದಂತೆ ಯಾವುದೇ ಸೌಲಭ್ಯಗಳಿಂದ ವಂಚಿತವಾಗದ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಈಗಾಗಲೇ ಕೆಲ ಇಲಾಖೆಗಳ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅಭಿವೃದ್ಧಿ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತಿವೆ. ಇನ್ನೂ ತಾಲೂಕಿನಲ್ಲಿ ಕಳೆದ 4-5 ವರ್ಷದಿಂದ ಸಮರ್ಪಕ ಮಳೆಯಾಗದ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ರೈತರು ಬಿಮಾ ಫಸಲ್ ಹಾಗೂ ಇನ್ನಿತರ ಬೆಳೆ ವಿಮೆ ತುಂಬಿದ ರೈತರಿಗೆ ವಿಮೆ ಹಣ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ.
ಕೃಷಿ ಇಲಾಖೆ ಸಮರ್ಪಕವಾದ ಮಾಹಿತಿ ಇಲ್ಲದ ಕಾರಣ ರೈತರು ಎಷ್ಟು ಬೆಳೆ ವಿಮೆ ತುಂಬಿದ್ದಾರೆ. ಎಷ್ಟು ರೈತರಿಗೆ ಬೆಳೆ ವಿಮೆ ಪರಿಹಾರ ಬಂದಿದೆ ಎಂಬ ಮಾಹಿತಿ ನೀಡುತ್ತಿಲ್ಲ ಮತ್ತು ರೈತರಿಗೆ ಬೆಳೆ ವಿಮೆ ತುಂಬಿಸಲು ಸಮರ್ಪಕವಾದ ಮಾಹಿತಿ ನೀಡದ ಹಿನ್ನೆಲೆ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ತಾಲೂಕಿನಲ್ಲಿ ಈಗಾಗಲೇ ಮುಳವಾಡ, ಚಿಮ್ಮಲಗಿ ಸೇರಿದಂತೆ ಅನೇಕ ಏತ ನೀರಾವರಿ ಯೋಜನೆಗಳ ಕಾಮಗಾರಿ ಪೂರ್ಣಗೊಂಡಿದ್ದು. ತಾಲೂಕಿನಲ್ಲಿ ಈಗಾಗಲೇ 11 ಕೆರೆಗಳಿಗೆ ನೀರು ತುಂಬಲಾಗಿದೆ. ಇನ್ನೂ ಅನೇಕ ಕೆರೆಗಳಿಗೆ ನೀರು ತುಂಬಬೇಕು ಎಂಬ ಬೇಡಿಕೆ ಇದೆ. ಆದ್ದರಿಂದ ಕೆಲವು ಕಾಲುವೆಗಳಲ್ಲಿ ತಾಂತ್ರಿಕ ತೊಂದರೆಯನ್ನು ಅಧಿಕಾರಿಗಳು ತಕ್ಷಣ ಪರಿಹರಿಸಿ ಕೆರೆಗಳಿಗೆ ನೀರು ತುಂಬಲು ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬಸವನಬಾಗೇವಾಡಿ ಮತ ಕ್ಷೇತ್ರದಲ್ಲಿ ಈಗಾಗಲೇ ಅನೇಕ ಹಳ್ಳಿಗಳಲ್ಲಿ ಹೈಟೆಕ್ ಸುಲಭ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಮತ್ತೆ ಈಗಾಗಲೇ 9 ಹೈಟೆಕ್ ಸುಲಭ ಶೌಚಾಲಯಗಳ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು. ಬಯಲು ಮುಕ್ತ ಶೌಚಾಲಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ಹೇಳಿದರು.
ಈಗಾಗಲೇ ಬಸವನಬಾಗೇವಾಡಿ ಮತಕ್ಷೇತ್ರದ ಡೋಣೂರ, ಉಕ್ಕಲಿ, ಮನಗೂಳಿ, ವಂದಾಲ ಗ್ರಾಮಗಳಲ್ಲಿ ಪಶು ಚಿಕಿತ್ಸಾಲಯದ ಕಾಮಗಾರಿ ಪೂರ್ಣಗೊಂಡಿದ್ದು. ಇನ್ನೂ ಹೆಬ್ಟಾಳದಲ್ಲಿ ಭೂಮಿಪೂಜೆ ಕಾರ್ಯ ಮಾಡಬೇಕಾಗಿದೆ. ಈಗಾಗಲೇ ಮಲಘಾಣ, ಚಿಮ್ಮಲಗಿಯಲ್ಲಿ ಪಶು ಚಿಕಿತ್ಸಾಲಯ ನಿರ್ಮಾಣದ ಕುರಿತು ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಾಲೂಕು ಪಶು ಆಸ್ಪತ್ರೆ ವೈದ್ಯಾಧಿಕಾರಿ ಮಲ್ಲಿಕಾರ್ಜುನ ಹಂಚನಾಳ ಸಭೆಗೆ ವಿವರಿಸಿದರು.
ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಪ್ರಗತಿ ಪರಿಶೀಲನೆ ಬಗ್ಗೆ ವಿವರಿಸಿದರು. ಸಭೆಯಲ್ಲಿ ತಾಪಂ ಅಧ್ಯಕ್ಷ ದೇವೇಂದ್ರ ನಾಯಕ, ತಹಶೀಲ್ದಾರ್ ಎಂ.ಎನ್. ಚೋರಗಸ್ತಿ, ತಾಪಂ ಇಒ ಎ.ಕೆ. ಚಲವಾದಿ ವೇದಿಕೆಯಲ್ಲಿದ್ದರು.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.