ರೈಲು ನಿಲ್ದಾಣದಲ್ಲಿ ಅಹೋರಾತ್ರಿ ಧರಣಿ

ಪುಸ್ಸಿಂಗ್‌ ಬಾಕ್ಸ್‌ ನಿರ್ಮಿಸುವ ನೆಪದಲ್ಲಿ ಕಾಲುವೆಗೆ ನೀರು ಹರಿಸುವುದು ತಡೆ

Team Udayavani, Aug 7, 2019, 11:00 AM IST

7-Agust-8

ಬಸವನಬಾಗೇವಾಡಿ: ರೈತ ಸಂಘ ಹಮ್ಮಿಕೊಂಡಿದ್ದ ಸಭೆಯಲ್ಲಿ ಅರವಿಂದ ಕುಲಕರ್ಣಿ ಮಾತನಾಡಿದರು.

ಬಸವನಬಾಗೇವಾಡಿ: ತಾಲೂಕಿನ ಕೂಡಗಿ ಬಳಿ ಹಾಯ್ದು ಹೋಗಿರುವ ರೈಲು ಕ್ರಾಸಿಂಗ್‌ ಬ್ರಿಜ್‌ ಕೆಳಗಡೆ ನಿರ್ಮಾಣ ಮಾಡುತ್ತಿರುವ ಪುಸ್ಸಿಂಗ್‌ ಬಾಕ್ಸ್‌ ಕಾಮಗಾರಿ ನಿಲ್ಲಿಸಿ. ಮೊದಲು ಕಾಲುವೆಗೆ ನೀರು ಹರಸಲು ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ವಿಜಯಪುರ ರೈಲು ನಿಲ್ದಾಣದ ಆವರಣದಲ್ಲಿ ಆ.9ರಂದು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.

ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಅಖಂಡ ಕರ್ನಾಟಕ ರೈತ ಸಂಘದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 5-6 ತಿಂಗಳುಗಳಿಂದ ರೈಲ್ವೆ ಇಲಾಖೆ ಪುಸ್ಸಿಂಗ್‌ ಬಾಕ್ಸ್‌ ನಿರ್ಮಿಸುವ ನೆಪದಲ್ಲಿ ಮುಳವಾಡ ಏತ ನೀರಾವರಿ ಮುಖ್ಯ ಕಾಲುವೆಗೆ ನೀರು ಹರಿಸುವುದನ್ನು ತಡೆಹಿಡಿಯುತ್ತಿದೆ. ಇದರಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ. ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿದೆ ಎಂದು ಹೇಳಿದರು.

ಅಂದು ಬೆಳಗ್ಗೆ 11:00ಕ್ಕೆ ವಿಜಯಪುರದ ಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ರೈಲ್ವೆ ನಿಲ್ದಾಣ ಆವರಣಕ್ಕೆ ತೆರಳಿದಲ್ಲಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗುವದು. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಧರಣಿಯಲ್ಲಿ ಭಾಗವಹಿಸಬೇಕು. ಎಂದು ಮನವಿ ಮಾಡಿದರು.

ಪಟ್ಟಣದ ವಿರಕ್ತಮಠದ ಸಿದ್ದಲಿಂಗ ಶ್ರೀಗಳು ಮಾತನಾಡಿ ರೈಲ್ವೆ ಇಲಾಖೆಗೆ ಕೇವಲ ರೈಲು ಸಂಚರಿಸುವುದು ಅಷ್ಟೇ ಮುಖ್ಯವಾಗಿದೆ. ಹೊರತು ಜಿಲ್ಲೆಯ ರೈತರು ಜನ ಜಾನುವಾರಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ ಎಂಬುದು ಅವರ ಅರಿವಿಗೆ ಬರುತ್ತಿಲ್ಲ. ರೈಲ್ವೆ ಇಲಾಖೆಯವರು ಮೊದಲಿನಿಂದಲೂ ಪುಸ್ಸಿಂಗ್‌ ಬಾಕ್ಸ್‌ ನಿರ್ಮಾಣದ ನೆಪದಲ್ಲಿ ನೀರು ಹರಿಸುವುದನ್ನು ತಡೆ ಹಿಡಿಯುತ್ತಿರುವುದು ಸರಿಯಲ್ಲಾ ಎಂದು ಹೇಳಿದರು.

ಈಗ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾರಾಷ್ಟ್ರದ ಕೋಯ್ನಾ ಅಣೆಕಟ್ಟೆಯಿಂದ ಲಕ್ಷಾಂತರ ಕ್ಯೂಸೆಕ್‌ ನೀರು ಹರಿದು ಆಲಮಟ್ಟಿಗೆ ಬರುತ್ತಿದೆ.

ಆ ನೀರನ್ನು ನಾರಾಯಣಪುರ ಅಣೆಕಟ್ಟೆ ಮೂಲಕ ಸಮುದ್ರದ ಪಾಲಾಗುತ್ತಿದೆ. ಆದ್ದರಿಂದ ಜಿಲ್ಲೆಯ ಕೆರೆಗಳಿಗೆ ಹಾಗೂ ಡೋಣಿ ನದಿಗೆ ನೀರು ತುಂಬಿಸುವ ಕಾರ್ಯ ಮಾಡಿದಾಗ ಮಾತ್ರ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸಿದ್ರಾಮ ಅಂಗಡಿಗೇರಿ, ಗೌರವ ಅಧ್ಯಕ್ಷ ಈರಣ್ಣ ದೇವರಗುಡಿ, ಶಾಂತಗೌಡ ಬಿರಾದಾರ, ಚಂದ್ರಾಮ ತೆಗ್ಗಿ, ಹಣಮಂತ ತೋಟದ, ಮಾಚಪ್ಪ ಹೋರ್ತಿ, ರಾಮಣ್ಣ ವಾಲೀಕಾರ, ಸಿದ್ದಲಿಂಗಯ್ಯ ಹಿರೇಮಠ, ಮಲ್ಲಿಕಾರ್ಜುನ ಮಳ್ಳಿ ಗೋಪಾಲ ಕಣಕಾಲ, ಅಪ್ಪಾಲಾಲ ರಾಠೊಡ, ಸಿದ್ದಣ್ಣ ಪೂಜಾರಿ, ರೇವಣಸಿದ್ದ ನಂದಿಹಾಳ, ಚಂದ್ರಕಾಂತ ಪಟ್ಟಣಶೆಟ್ಟಿ, ಸಿದ್ರಾಮ ನಂದಿಹಳ, ಶೆಟ್ಟೆಪ್ಪ ಲಮಾಣಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.