![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 1, 2020, 4:15 PM IST
ಬಸವಕಲ್ಯಾಣ: ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡದ ಶ್ರೀ ಸದ್ಗುರು ಚನ್ನಬಸವ ಶಿವಯೋಗಿಗಳ 68ನೇ ಜಾತ್ರಾ ಮಹೋತ್ಸವ ಅಂಗವಾಗಿ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಜರುಗಿತು. ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನ ಮೆರಗು ಹೆಚ್ಚಿಸಿತು.
ನಂದಿಕೋಲ ಹಾಗೂ ಪಲ್ಲಕ್ಕಿ ಉತ್ಸವ ರಥೋತ್ಸವ ಹತ್ತಿರ ಸಮೀಪಿ ಸುತ್ತಿದ್ದಂತೆ ಹಾರಕೂಡದ 8ನೇ ಪೀಠಾಧಿಪತಿ ಡಾ| ಚೆನ್ನವೀರ ಶಿವಾಚಾರ್ಯರು ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ನೆರೆದಿದ್ದ ಭಕ್ತಾದಿಗಳು ರಥವನ್ನು “ಶ್ರೀ ಹಾರಕೂಡ ಚೆನ್ನವೀರ ಶಿವಾಚಾರ್ಯರ ಹಾಗೂ ಸದ್ಗುರು ಶ್ರೀ ಚೆನ್ನ ಬಸವಶಿವಯೋಗಳ ಮಹರಾಜಕೀ ಜೈ’ ಘೋಷಣೆಗಳೊಂದಿಗೆ ರಥವನ್ನು ಎಳೆದರು.
ರಥೋತ್ಸವ ಬಸವಣ್ಣನ ದೇವರ ಕಟ್ಟೆವರೆಗೂ ಜರುಗಿತು.
ರಥೋತ್ಸವದಲ್ಲಿ ಪಾಲ್ಗೊಂಂಡ ಭಕ್ತಾದಿಗಳು ರಥಕ್ಕೆ ಬಾಳೆಹಣ್ಣು,
ಖಾರಿಕ್, ಬದಾಮ ಹಾಗೂ ಹಣ ಸಮರ್ಪಿಸುವ ಮೂಲಕ ತಮ್ಮ
ಇಷ್ಠಾರ್ಥಗಳನ್ನು ಪೂರೈಸಿಕೊಂಡರು.
ರಥೋತ್ಸವದಲ್ಲಿ ಡೊಳ್ಳು ಕುಣಿತ, ನಂದಿಕೋಲು, ತಮಟೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್, ಮಾಜಿ ಸಚಿವ ರೇವುನಾಯಕ ಬೆಳಮಗಿ, ಜಿಪಂ ಸದಸ್ಯ ಆನಂದ
ಪಾಟೀಲ, ಪ್ರಮುಖರಾದ ಜಗನ್ನಾಥ ಪಾಟೀಲ, ಸಿದ್ರಾಮ ಗುದಗೆ,
ಬಾಬು ಹೊನ್ನಾನಾಯಕ, ಶರಣು ಸಲಗರ ಸೇರಿದಂತೆ ಮುಖಂಡರು, ಸಾವಿರಾರು ಭಕ್ತ ಸಮೂಹ ಮೆರವಣಿಗೆಯಲ್ಲಿ ಭಾಗವಹಿಸಿ ಹೆಜ್ಜೆ ಹಾಕಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.