ಆಟೋ ಸಮಸ್ಯೆ ಬಗೆಹರಿಸುವಂತೆ ಮನವಿ
ವಾರದಿಂದ ಆಟೋಗಳಿಲ್ಲದೇ ಮಕ್ಕಳು ಹೈರಾಣ |ಪೊಲೀಸರು-ಆಟೋ ಚಾಲಕರ ಸಭೆ ಕರೆಯಲು ಒತ್ತಾಯ
Team Udayavani, Jul 4, 2019, 12:38 PM IST
ಬೆಳಗಾವಿ: ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಕೀಲರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಬೆಳಗಾವಿ: ಶಾಲಾ ಮಕ್ಕಳನ್ನು ಕರೆದೊಯ್ಯುವ ಆಟೋ ರಿಕ್ಷಾ ಚಾಲಕರು ಹಾಗೂ ಮಾಲೀಕರು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವುದರಿಂದ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪಾಲಕರು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಕೀಲರು ಹಾಗೂ ಸಾರ್ವಜನಿಕರು ಬುಧವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಆಟೋ ರಿಕ್ಷಾಗಳಿಲ್ಲದೇ ವಿದ್ಯಾರ್ಥಿಗಳು ನಿತ್ಯವೂ ಖಾಸಗಿ ವಾಹನ ಹಾಗೂ ಬಸ್‌ಗಳನ್ನು ಅವಲಂಬಿಸುವಂತಾಗಿದೆ. ಮಕ್ಕಳನ್ನು ಬಿಡಲು ಪಾಲಕರು ನಿತ್ಯವೂ ಶಾಲೆಗಳಿಗೆ ಮಕ್ಕಳನ್ನು ಬಿಟ್ಟು, ಕರೆದುಕೊಂಡು ಬರುವುದು ಸಾಹಸದ ಕೆಲಸವಾಗಿದೆ. ಶಾಲೆಗಳ ಸುತ್ತಲೂ ಹೆಚ್ಚಿನ ಸಂಚಾರ ದಟ್ಟಣೆ ಆಗುತ್ತಿರುವುದರಿಂದ ಮಕ್ಕಳು ಮನೆಗೆ ಬರುವುದು ವಿಳಂಬವಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳ ಎದುರು ಅಳಲು ತೋಡಿಕೊಂಡರು.
6ಕ್ಕಿಂತ ಹೆಚ್ಚು ಮಕ್ಕಳನ್ನು ಆಟೋಗಳಲ್ಲಿ ಹಾಕಬಾರದು ಎಂಬ ಕೋರ್ಟ್ ನಿಯಮವನ್ನು ಪೊಲೀಸ್ ಆಯುಕ್ತರು ಕಟ್ಟುನಿಟ್ಟಾಗಿ ಜಾರಿ ಮಾಡಿದ್ದಾರೆ. ನಿಯಮ ಮೀರಿದವರಿಗೆ ದಂಡ ವಿಧಿಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಇದರಿಂದ ಆಟೋ ಚಾಲಕರು ಹಾಗೂ ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೇವಲ 6 ಮಕ್ಕಳನ್ನು ಆಟೋಗಳಿಗೆ ಹಾಕಿ ಬಾಡಿಗೆ ನಡೆಸುವುದು ಕಷ್ಟಕರವಾಗಿದೆ. ಇದರಿಂದ ಉಪಜೀವನ ನಡೆಸುವುದು ಕಷ್ಟಕರವಾಗಿದೆ ಎಂಬುದು ಚಾಲಕರ ವಾದವಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಒಂದು ವಾರದಿಂದ ಆಟೋಗಳು ಇಲ್ಲವಾಗಿವೆ. ಪೊಲೀಸ್ ಕಮೀಷನರ್ ಹಾಗೂ ಆಟೋ ಚಾಲಕರ ನಡುವಿನ ಕಿತ್ತಾಟದಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ ಎಂದು ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದರು.
ಪೊಲೀಸ್ ಆಯುಕ್ತರು ಹಾಗೂ ಆಟೋ ಚಾಲಕರ ನಡುವಿನ ಗೊಂದಲವನ್ನು ಬಗೆಹರಿಸಲು ಜಿಲ್ಲಾಧಿಕಾರಿಗಳು ಮಧ್ಯಸ್ಥಿಕೆ ವಹಿಸಬೇಕು. ಪೊಲೀಸರು ಹಾಗೂ ಆಟೋ ಚಾಲಕರ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು. ವಿದ್ಯಾರ್ಥಿಗಳಿಗೆ ಆಟೋ ಸೌಲಭ್ಯ ಒದಗಿಸಿ ಕೊಡಬೇಕು. ಪಾಲಕರು ನಿತ್ಯವೂ ಅನುಭವಿಸುತ್ತಿರುವ ತೊಂದರೆಗೆ ಇತಿಶ್ರೀ ಹೇಳಬೇಕು. ನಗರದಲ್ಲಿ ನಿತ್ಯ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಪಿ.ಎಸ್. ರಂಗೋಯ, ಬಿ.ಪಿ. ಜೇವಣಿ, ಬಿ.ಬಿ. ತಳವಾರ, ಯು.ಜೆ. ತಳವಾರ, ಎಂ.ಎನ್. ಕುಲಕರ್ಣಿ, ಎಸ್.ಎಂ. ಕಾಮತ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
MUST WATCH
ಹೊಸ ಸೇರ್ಪಡೆ
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.