ಕ್ಷಯ ರೋಗ ಮುಕ್ತ ಜಿಲ್ಲೆಗೆ ಕೈಜೋಡಿಸಿ
Team Udayavani, Mar 25, 2021, 9:10 PM IST
ಬೆಳಗಾವಿ : ಜಿಲ್ಲೆಯಲ್ಲಿ ಸುಮಾರು ಶೇ. 90ರಷ್ಟು ಕ್ಷಯರೋಗಿಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿ ರೋಗ ಮುಕ್ತರನ್ನಾಗಿ ಮಾಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಉಪ ನಿರ್ದೇಶಕಿ ಡಾ| ಶೆ„ಲಜಾ ತಮ್ಮಣ್ಣವರ ಹೇಳಿದರು.
ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆ ಚರಕ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 2003ರಿಂದ ಇಲ್ಲಿಯವರೆಗೆ 78,979 ಕ್ಷಯರೋಗಿಗಳನ್ನು ಪತ್ತೆ ಹಚ್ಚಿ ಶೇ. 85ರಷ್ಟು ಕ್ಷಯರೋಗಿಗಳಿಗೆ ಪೂರ್ಣ ಚಿಕಿತ್ಸೆ ನೀಡಿ ಗುಣಪಡಿಸಲಾಗಿದೆ. 2020-21ನೇ ಸಾಲಿನ ಉತ್ತಮ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ರಾಜ್ಯಮಟ್ಟದ ಪ್ರಶಸ್ತಿ ಜಿಲ್ಲೆಯ ಅಥಣಿ ಕ್ಷಯರೋಗ ಘಟಕದ ರಾಜಶೇಖರ ಕುರಹಟ್ಟಿ ಅವರಿಗೆ ಲಭಿಸಿದ್ದು, ಎಲ್ಲರೂ ಉತ್ತಮವಾಗಿ ಕಾರ್ಯನಿರ್ವಹಿಸಿ ಬೆಳಗಾವಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಬೇಕೆಂದು ಕರೆ ನೀಡಿದರು.
ಕೆಎಲ್‌ಇ ಶತಮಾನೋತ್ಸವ ಚಾರಿಟೆಬಲ್ ಆಸ್ಪತ್ರೆಯ ನಿರ್ದೇಶಕರಾದ ಎಸ್. ಸಿ. ಧಾರವಾಡ ಮಾತನಾಡಿ, ಕ್ಷಯರೋಗ ನಿರ್ಮೂಲನೆಯಲ್ಲಿ ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಎಲ್ಲ ಖಾಸಗಿ ಆರೋಗ್ಯ ಸಂಸ್ಥೆಗಳು ಹಾಗೂ ಖಾಸಗಿ ವೈದ್ಯರ ಪಾತ್ರ ಅತೀ ಹಿರಿದಾಗಿದೆ. ತಮ್ಮಲ್ಲಿ ಆರೋಗ್ಯ ತಪಾಸಣೆಗೆ ಬರುವ ಜನರಲ್ಲಿ ಕ್ಷಯರೋಗ ಶಂಕಿತರನ್ನು ಗುರುತಿಸಿ ಕ್ಷಯರೋಗ ಪತ್ತೆ ಹಚ್ಚಿ ಸಮಾಜದಲ್ಲಿ ರೋಗ ಪಸರಿಸುವುದನ್ನು ತಡೆಗಟ್ಟಲು ಸಹಕರಿಸಬೇಕು.
ಕ್ಷಯರೋಗ ನಿಯಂತ್ರಣಕ್ಕಾಗಿ ಪ್ರತಿದಿನವನ್ನು ಕ್ಷಯರೋಗ ದಿನವನ್ನಾಗಿ ಪರಿಗಣಿಸಿದಾಗ ಮಾತ್ರ ಕ್ಷಯರೋಗ ನಿರ್ಮೂಲನೆ ಸಾಧ್ಯ ಎಂದು ಹೇಳಿದರು. ಆರ್. ಜಿ. ವಿವೇಕಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ಷಯರೋಗ ನಿಯಂತ್ರಣಕ್ಕಾಗಿ ಸಾಕಷ್ಟು ಸಹಕಾರ ಹಾಗೂ ಸೌಲಭ್ಯಗಳನ್ನು ಕಲ್ಪಿಸುತ್ತಿದೆ.
ಕ್ಷಯರೋಗಿ ಎಂದು ದೃಢಪಟ್ಟ ರೋಗಿಗಳಿಗೆ ಮಾಸಿಕ 500 ರೂ.ಗಳಂತೆ ನಿಕ್ಷಯ ಪೋಷನಾ ಯೋಜನೆ, ಕ್ಷಯರೋಗಿಯ ಮಾಹಿತಿ ನೀಡುವ ಎಲ್ಲ ಖಾಸಗಿ ವೈದ್ಯರಿಗೆ 500 ರೂ. ಪ್ರೋತ್ಸಾಹ ಧನ ಹಾಗೂ ರೋಗಿಗೆ ಚಿಕಿತ್ಸೆ ನೀಡಿ ಗುಣಪಡಿಸಿದ ಚಿಕಿತ್ಸಾ ನಿರ್ವಾಹಕರಿಗೆ 1000 ರೂ. ಗೌರವ ಧನ ನೀಡಲಾಗುತ್ತಿದೆ.
ಇದನ್ನು ಸದುಪಯೋಗ ಪಡಿಸಿಕೊಂಡು ಆಂದೋಲನ ರೂಪದಲ್ಲಿ ಕ್ಷಯ ಪತ್ತೆ ಚಟುವಟಿಕೆಗಳನ್ನು ಕೈಗೊಳ್ಳಬೇಕೆಂದು ಹೇಳಿದರು. ಆಶಾ ಕಾರ್ಯಕರ್ತೆಯರಾದ ಲಲಿತಾ ಪಾಟೀಲ ಹಾಗೂ ಸುಮನ ಪ್ರಾರ್ಥಿಸಿದರು. 2020-21ನೇ ಸಾಲಿನಲ್ಲಿ ಕ್ಷಯರೋಗ ನಿಯಂತ್ರಣ ಕಾರ್ಯಕ್ರಮದಡಿ ಉತ್ತಮ ಪ್ರಗತಿ ತೋರಿದ ಅಧಿಕಾರಿಗಳು, ಆಶಾ ಕಾರ್ಯಕರ್ತೆ ಆರೋಗ್ಯ ಸಿಬ್ಬಂದಿ, ಖಾಸಗಿ ವೈದ್ಯರು ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸನ್ಮಾನಿಸಲಾಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ| ಎಸ್.ವಿ. ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಬಿ.ಎನ್ ತುಕ್ಕಾರ, ಯಳ್ಳೂರ ರೋಡ ಕೆಎಲ್‌ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ನಿರ್ದೇಶಕ ಡಾ| ಎಸ್.ಸಿ. ಧಾರವಾಡ, ಜಿಲ್ಲಾ ಬಿಮ್ಸ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ| ಹುಸೇನಸಾಹೆಬ ಖಾಜಿ, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ| ಚಾಂದನಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿ ಕಾರಿ ಡಾ| ಮಹೇಶ ಕಿವಡಸನ್ನವರ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿ ಕಾರಿ ಡಾ| ಅನಿಲ ಕೊರಬು, ಸ್ವಪ್ನಿಲ್ ಕಾಂಬಳೆ, ಜಿಲ್ಲಾ ಕ್ಷಯರೋಗ ನಿಯಂತ್ರಣ ಕೇಂದ್ರದ ಎಲ್ಲಾ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಇದ್ದರು. ಹಿರಿಯ ಆರೋಗ್ಯ ನಿರೀಕ್ಷಕ ಸಿ.ಜಿ. ಅಗ್ನಿಹೋತ್ರಿ ನಿರೂಪಿಸಿದರು. ಜಿಲ್ಲಾ ಕ್ಷಯರೋಗ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಎಸ್.ಜಿ. ಲಾಡ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.