ಮಾರಕಾಸ್ತ್ರದಿಂದ ಕೊಚ್ಚಿ ಮಹಿಳೆ ಹತ್ಯೆ
murdar in belagavi
Team Udayavani, Dec 31, 2020, 2:03 PM IST
ಬೆಳಗಾವಿ: ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ ಮಹಿಳೆಯನ್ನು ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಹಡಪದ ಎಂಬ ಮಹಿಳೆಯನ್ನು ಕೊಲೆ ಮಾಡಲಾಗಿದೆ. ಈಕೆಯ ಪರಿಚಯಸ್ಥ, ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾದ ಬೈಲಹೊಂಗಲದ ಆಶ್ರಯ ಕಾಲೋನಿ ನಿವಾಸಿ ಈರಣ್ಣ ಬಾಬು ಜಗಜಂಪಿ ಕೊಲೆ ಮಾಡಿದ್ದಾನೆ.
ಕೂಡಲೇ ಈತನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಸ್ಪತ್ರೆಯ ಕ್ಯಾಂಟೀನ್ ಬಳಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದ ಸುಧಾರಾಣಿ ಹಡಪದ ಮೇಲೆ ಈರಣ್ಣ ಏಕಾಏಕಿ ದಾಳಿ ನಡೆಸಿ ಕೊಚ್ಚಿ ಹತ್ಯೆ ಮಾಡಿದ್ದಾನೆ.
ಇದನ್ನೂ ಓದಿ:ಮೈಮರೆತ ಜನತೆ; ಪೊಲೀಸರಿಂದ ಲಾಠಿ ಏಟಿನ ರುಚಿ
ಸುಧಾರಾಣಿ ಹಡಪದ ಗಂಡನನ್ನು ಬಿಟ್ಟು ಸುಮಾರು ಮೂರು ವರ್ಷಗಳಿಂದ ಈರಣ್ಣನೊಂದಿಗೆ ಪ್ರೀತಿ ಮಾಡಿ ಸಂಬಂಧ ಇಟ್ಟುಕೊಂಡಿದ್ದಳು. ಕೆಲ ದಿನಗಳಿಂದ ಈರಣ್ಣನನ್ನು ನಿರಾಕರಣೆ ಮಾಡಿ ಬೇರೆ ವ್ಯಕ್ತಿಯೊಂದಿಗೆ ಪ್ರೀತಿ ಮಾಡುತ್ತಿದ್ದಳು ಎಂದು ಸಂಶಯಪಟ್ಟು ಆಗಾಗ ಈಕೆಯೊಂದಿಗೆ ಜಗಳವಾಡುತ್ತಿದ್ದನು. ಅನೇಕ ಸಲ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಹೀಗಾಗಿ ಬುಧವಾರ ಬಂದು ಮಾರಕಾಸ್ತ್ರದಿಂದ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಡಿಸಿಪಿ ಸಿ.ಆರ್. ನೀಲಗಾರ, ಮಾರ್ಕೆಟ್ ಎಸಿಪಿ ಸದಾಶಿವ ಕಟ್ಟಿಮನಿ, ಎಪಿಎಂಸಿ ಇನ್ಸ್‌ಪೆಕ್ಟರ್ ಜಾವೇದ ಮುಶಾಪುರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.