ಸಮಾಜ-ಸಮಾಜ ಸೇವೆ ಅರ್ಥೈಸಿಕೊಳ್ಳಿ
ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಶಾಸಕ ಸತೀಶ ಜಾರಕಿಹೊಳಿಯಿಂದ ಕಿವಿಮಾತು
Team Udayavani, Jun 16, 2021, 3:59 PM IST
ಬೆಳಗಾವಿ: ರಾಜಕೀಯದಲ್ಲಿ ತೊಡಗಿಸಿಕೊಳ್ಳುವರು ಮೊದಲು ಸಮಾಜ, ಸಮಾಜ ಸೇವೆ ಹಾಗೂ ಪಕ್ಷ ಎಂದರೇನು ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು. ಇದನ್ನು ಅರಿತಾಗ ಮಾತ್ರ ಅವರು ಯಶಸ್ವಿಯಾಗಲು ಸಾಧ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆದ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ಉದ್ಘಾಟಿಸಿ ನಂತರ ಪದಾಧಿಕಾರಿಗಳಿಗೆ ತಮ್ಮ ಪುತ್ರ ರಾಹುಲ್ ಅವರನ್ನು ಪರಿಚಯಿಸಿದ ಸತೀಶ ಜಾರಕಿಹೊಳಿ ಪಕ್ಷ ಸಂಘಟನೆಯ ಮೂಲಕ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಪುತ್ರನಿಗೆ ಶುಭ ಹಾರೈಸಿದರು. ಇಂದಿನಿಂದ ಯುವ ಮುಖಂಡರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಈಗ ಅಧಿಕೃತವಾಗಿ ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಪಕ್ಷ ಸಂಘಟನೆಯ ಮೂಲಕ ಅವರು ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಹೇಳಿದರು.
ತಮ್ಮ ಇಬ್ಬರು ಮಕ್ಕಳು ಅವಕಾಶವಿರುವಲ್ಲಿ ಹಾಗೂ ಎಲ್ಲಿ ಜನ ತಮ್ಮ ಸೇವೆ ಬಯಸುತ್ತಾರೊ ಅಲ್ಲಿಗೆ ಹೋಗಿ ಸೇವೆ ಮಾಡಬೇಕು. ಜತೆಗೆ ಪಕ್ಷವನ್ನು ಬಲಪಡಿಸಬೇಕು. ಹಿರಿಯರು, ಕಿರಿಯರೊಂದಿಗೆ ಬೆರೆತು ಅವರು ಕೊಡುವ ಸಲಹೆ, ಸೂಚನೆಗಳನ್ನು ಪಾಲಿಸಬೇಕು. ತಮ್ಮ ವಿಚಾರಗಳನ್ನು ಅವರಿಗೆ ತಿಳಿಸಬೇಕು. ಪಕ್ಷ ಹಾಗೂ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ರಾಹುಲ್ ಹಾಗೂ ಪ್ರಿಯಾಂಕಾ ಇಬ್ಬರು ಕಳೆದ ಮೂರು ತಿಂಗಳ ಹಿಂದೆಯೇ ಅಧಿಕೃತವಾಗಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ. ಇಬ್ಬರ ಮೇಲೂ ಸಾಕಷ್ಟು ಜವಾಬ್ದಾರಿ ಇದೆ. ತಮ್ಮ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವ ವಿಶ್ವಾಸವಿದೆ ಎಂದು ಸತೀಶ ಜಾರಕಿಹೊಳಿ ಹೇಳಿದರು.
ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ನಾವು ಸಂಚರಿಸಬೇಕಾಗುತ್ತದೆ. ಹೀಗಾಗಿ, ರಾಹುಲ್ ಹಾಗೂ ಪ್ರಿಯಾಂಕಾ ಇನ್ನು ಮೇಲೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗುತ್ತಾರೆ. ಕಾರ್ಯಕರ್ತರು ನನಗೆ ತೋರಿಸಿರುವ ಪ್ರೀತಿ, ಅಭಿಮಾನ ಸಹಕಾರವನ್ನು ಅವರಿಗೂ ನೀಡಬೇಕು. ಅವರಿಂದ ಕೆಲಸ ಪಡೆಯಬೇಕು ಎಂದು ಮನವಿ ಮಾಡಿದರು.
ಕೋವಿಡ್ ಸಂದರ್ಭದಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಎಲ್ಲ ಮುಖಂಡರು ಹಾಗೂ ಕಾರ್ಯಕರತರು ನಿರೀಕ್ಷೆಗೂ ಮೀರಿ ಕೆಲಸ ಮಾಡಿದ್ದಾರೆ. ಎಲ್ಲರ ಕೆಲಸವೂ ನಮಗೆ ತೃಪ್ತಿ ತಂದಿದೆ. ಮುಂದೆಯೂ ಕೂಡ ಸಮಾಜಕ್ಕೆ ಸೇವೆಯ ಅಗತ್ಯವಿದೆ. ಹೀಗಾಗಿ, ಕಾರ್ಯಕರ್ತರು ಸದಾ ಸನ್ನದ್ಧರಾಗಿರಬೇಕು ಎಂದರು.
ಯುವ ನಾಯಕ ರಾಹುಲ್ ಜಾರಕಿಹೊಳಿ ಜಿಲ್ಲಾ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳುವ ಮೂಲಕ ಹಾಗೂ ಸತೀಶ ಶುಗರ್ಸ್ ವತಿಯಿಂದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಿಸುವ ಮೂಲಕ ಅಧಿಕೃತವಾಗಿ ಜಿಲ್ಲಾ ರಾಜಕಾರಣಕ್ಕೆ ಪ್ರವೇಶ ಮಾಡಿದರು. ರಾಹುಲ್ ಜಾರಕಿಹೊಳಿ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ಜಿಲ್ಲಾ ರಾಜಕಾರಣದಲ್ಲಿ ತೊಡಗಿಸಿಕೊಳ್ಳುತ್ತಿರುವುದಕ್ಕೆ ಪಕ್ಷದ ಕಾರ್ಯಕರ್ತರು ಹಾಗೂ ಯೂಥ್ ಕಾಂಗ್ರೆಸ್ ಸದಸ್ಯರು ಹರ್ಷ ವ್ಯಕ್ತಪಡಿಸಿ ಅವರನ್ನು ಸ್ವಾಗತಿಸಿದರು.
ಕಳೆದ ಎರಡು ವರ್ಷಗಳಿಂದ ಪ್ರವಾಹ ಹಾಗೂ ಕೋವಿಡ್ ಸಂದರ್ಭದಲ್ಲಿ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಅವರು ನಿರಂತರವಾಗಿ ಸಮಾಜಸೇವೆ ಮಾಡಿದ್ದಾರೆ. ಈಗ ಅವರು ಅಧಿಕೃತವಾಗಿ ರಾಷ್ಟ್ರೀಯ ಪಕ್ಷಕ್ಕೆ ಪ್ರವೇಶ ಮಾಡಿರುವುದರಿಂದ ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಆನೆ ಬಲ ಬಂದಾಂತಾಗಿದೆ ಎಂದು ಪಕ್ಷದ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಎಐಸಿಸಿ ಗೋವಾ ವೀಕ್ಷಕ ಸುನೀಲ ಹನುಮನ್ನವರ, ಕಿಸಾನ್ ಕಾಂಗ್ರೆಸ್ ರಾಜ್ಯ ಘಟಕದ ಸಂಚಾಲಕ ರಾಜೇಂದ್ರ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.