ಮಿನಿ ವಿಧಾನಸೌಧಕ್ಕೆ 10 ಕೋಟಿ: ಅಶೋಕ
30 ಕೋಟಿ ರೂ. ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ
Team Udayavani, Dec 21, 2022, 6:10 PM IST
ಮೂಡಲಗಿ: ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನೂತನ ಉಪ ನೋಂದಣಾಧಿ ಕಾರಿಗಳ ಕಚೇರಿಯನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಹೊಸ ತಾಲೂಕುಗಳ ಪೈಕಿ ಮೂಡಲಗಿ ತಾಲೂಕಿಗೆ ಮಾತ್ರ ಉಪ ನೋಂದಣಾಧಿಕಾರಿಗಳ ಕಚೇರಿ ಆರಂಭಿಸಲಾಗಿದ್ದು, ಇದಕ್ಕೆ ಇಲ್ಲಿನ ಜನಪ್ರಿಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಒತ್ತಡವೇ ಕಾರಣ ಎಂದು ತಿಳಿಸಿದರು.
ಬಾಲಚಂದ್ರ ಜಾರಕಿಹೊಳಿ ಅವರು ಅನೇಕ ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ಪ್ರತಿ ಇಲಾಖೆಗಳ ಅನುದಾನ ತಂದು ಕ್ಷೇತ್ರವನ್ನು ಪ್ರಗತಿ ಪಥದತ್ತ ಮುನ್ನಡೆಸುತ್ತಿದ್ದಾರೆ. ಜೊತೆಗೆ ಕೆ.ಎಂ.ಎಫ್ ಅಧ್ಯಕ್ಷರಾಗಿ ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ.
ಕೋವಿಡ್ ಸಮಯದಲ್ಲಿ ರಾಜ್ಯದಲ್ಲಿರುವ ಎಲ್ಲ ಸ್ಲಂ ಪ್ರದೇಶಗಳ ನಾಗರಿಕರಿಗೆ ಉಚಿತ ಹಾಲು ನೀಡಿದ್ದಾರೆ. ಬಾಲಚಂದ್ರ ಅವರು ಕೇವಲ ಈ ಭಾಗಕ್ಕೆ ಕೊಡುಗೈ ದಾನಿಗಳಲ್ಲ. ಬೆಂಗಳೂರು ನಗರಕ್ಕೂ ಸಹ ಕೊಡುಗೆ„ ದಾನಿಗಳಾಗಿ ಹೆಸರುವಾಸಿಯಾಗಿದ್ದಾರೆ ಎಂದು ಶ್ಲಾಘಿಸಿದ ಅವರು, ಬರುವ 2023ರ ಸಾರ್ವತ್ರಿಕ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಮತ್ತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದ್ದು, ಬಸವರಾಜ ಬೊಮ್ಮಾಯಿ ಅವರು ಮತ್ತೂಂದು ಅವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
ಅಧ್ಯಕ್ಷತೆ ವಹಿಸಿದ್ದ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಂತೆ ಉಪ ನೋಂದಣಾಧಿ ಕಾರಿಗಳ ಕಚೇರಿ ಲೋಕಾರ್ಪಣೆಗೊಳಿಸಲಾಗಿದೆ. ಈ ಕಚೇರಿಗೆ ತಾಲೂಕಿನ 48 ಗ್ರಾಮಗಳು ಸೇರ್ಪಡೆಯಾಗಿದ್ದು, ನಾಳೆಯಿಂದಲೇ ಕಚೇರಿ ಚಟುವಟಿಕೆ ಆರಂಭವಾಗಲಿದೆ. ಇನ್ನಾದರೂ ತಾಲೂಕಿನ ಜನತೆ ಬರುವ ಚುನಾವಣೆಯಲ್ಲಿ ಹೆಚ್ಚಿನ ಲೀಡ್ ನೀಡಿ ಮತ್ತೊಮ್ಮೆ ಜನಸೇವೆಗೆ ಅವಕಾಶ ಕಲ್ಪಿಸಬೇಕು ಎಂದು ಕೋರಿದರು. ಫೆಬ್ರವರಿ ತಿಂಗಳಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಲ್ಲಿದ್ದು. ವಿವಿಧ ಇಲಾಖೆಗಳ ಏಳು ಕಚೇರಿಗಳು ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿ ವಿಧಾನ ಸಭಾ ಕ್ಷೇತ್ರಗಳ ಅಭಿವೃದ್ಧಿಗೆ 50 ರಿಂದ 100 ಕೋಟಿ ರೂ. ಅನುದಾನ ನೀಡಿದ್ದಾರೆ. ನಮ್ಮ ಕ್ಷೇತ್ರಕ್ಕೂ ಸಹ ಅನುದಾನ ಬಂದಿದೆ. ಮುಂದಿನ ಬಾರಿಯೂ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಮೂಡಲಗಿ ಪಟ್ಟಣದ ಅಭಿವೃದ್ಧಿಗೆ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ ಅವರ ಮೂಲಕ ಹೆಚ್ಚಿನ ಅನುದಾನ ತರುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಮಾತನಾಡಿ, ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆ ಮಾಡಬೇಕು. ಅರಭಾವಿ ಕ್ಷೇತ್ರಕ್ಕೆ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿಯಿಂದಾಗಿ 30 ಕೋಟಿ ರೂ. ಹಣವನ್ನು ಕುಡಿಯುವ ನೀರಿಗಾಗಿ ಮಂಜೂರು ಮಾಡಲಾಗಿದೆ ಎಂದು ಹೇಳಿದರು. ದತ್ತಾತ್ರೇಯಬೋಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಬೆ„ಲಹೊಂಗಲ ಉಪವಿಭಾಗಾಧಿಕಾರಿ ಡಾ| ಶಶಿಧರ ಬಗಲಿ, ಜಿಲ್ಲಾ ನೋಂದಣಿ ಅ ಧಿಕಾರಿ ಶಿವಕುಮಾರ ಅಪರಂಜಿ, ತಹಶೀಲ್ದಾರ್ ಡಿ.ಜಿ.ಮಹಾತ್, ಉಪನೋಂದಣಿ ಅಧಿಕಾರಿ ಹರಿಯಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಚಿವ ಆರ್.ಅಶೋಕ್ ಅವರಿಗೆ ಕೃಷ್ಣನ ಕಂಚಿನ ಪ್ರತಿಮೆ ಹಾಗೂ ಸಚಿವ ಭೈರತಿ ಬಸವರಾಜ ಅವರಿಗೆ ಬೆಳ್ಳಿ ಗಣೇಶನ ವಿಗ್ರಹ ನೀಡಿ ಸತ್ಕರಿಸಿದರು.
ನಮ್ಮ ಬಿಜೆಪಿ ಸರಕಾರದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪವರ್‌ಫುಲ್ ಲೀಡರ್. ಬೆಂಗಳೂರಿಗೆ ಬಂದಾಗಲೆಲ್ಲ ಮುಖ್ಯಮಂತ್ರಿ ಸೇರಿದಂತೆ ಸಂಬಂಧ ಪಟ್ಟ ಹಲವಾರು ಮಂತ್ರಿಗಳನ್ನು ಭೇಟಿ ಮಾಡಿ ಅರಭಾವಿ ಅಭಿವೃದ್ಧಿ ಕೆಲಸಗಳ ಕಡತಗಳಿಗೆ ಅನುಮತಿ ಪಡೆದುಕೊಂಡೇ ಹೋಗುತ್ತಾರೆ.
ಆರ್.ಅಶೋಕ, ಕಂದಾಯ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.