“ಹಸಿದವರತ್ತ ನಮ್ಮ ಚಿತ್ತ’ ಅಭಿಯಾನಕ್ಕೆ ಶತದಿನೋತ್ಸವ
Team Udayavani, Jul 4, 2020, 4:08 PM IST
ಬೆಳಗಾವಿ: ದೇಶ ಎದುರಿಸುತ್ತಿರುವ ಪ್ರಸಕ್ತ ಬಿಕ್ಕಟ್ಟಿನಿಂದ ಪಾರಾಗಬೇಕಾದರೆ ನಾವು ಮೊದಲು ಬದಲಾಗಬೇಕು. ಈ ಬದಲಾವಣೆ ಅಥವಾ ಪರಿಹಾರ ಹೊರಗಿನಿಂದ ಬರದೇ ನಮ್ಮೊಳಗೇ ಇದೆ ಎಂದು ಹುಕ್ಕೇರಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಕಳೆದ ಮಾರ್ಚ್ 23ರಿಂದ ಹಮ್ಮಿಕೊಂಡಿದ್ದ ಹಸಿದವರತ್ತ ನಮ್ಮ ಚಿತ್ತ ಅಭಿಯಾನದ ಶತದಿನೋತ್ಸವ ಮತ್ತು ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಮಾತನಾಡಿ, ಕೋವಿಡ್ ವೈರಾಣುವಿಗೆ ಹೆದರಿ ಜನರೆಲ್ಲರೂ ಮನೆಯಲ್ಲಿ ಕುಳಿತಾಗ ಕ್ರಿಯಾ ಸಮಿತಿಯ ತಂಡವು ನೂರು ದಿನಗಳ ಕಾಲ ಸತತವಾಗಿ ಆಹಾರ ಧಾನ್ಯದ ಕಿಟ್ ವಿತರಿಸಿದ್ದು ಸಾಮಾನ್ಯ ಸಂಗತಿಯಲ್ಲ ಎಂದರು.
ನಾಗನೂರು ರುದ್ರಾಕ್ಷಿ ಮಠದ ಡಾ| ಅಲ್ಲಮಪ್ರಭು ಸ್ವಾಮಿಗಳು ಮಾತನಾಡಿ, ವಿಧಾನ ಪರಿಷತ್ತಿನಲ್ಲಿ ಗಡಿಭಾಗದಿಂದ ಒಂದು ಗಟ್ಟಿಯಾದ ಧ್ವನಿಯ ಅವಶ್ಯಕತೆಯಿದೆ. ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ರಾಜ್ಯ ಸರಕಾರ ಪರಿಷತ್ತಿಗೆ ನಾಮನಿರ್ದೇಶನ ಮಾಡಬೇಕು ಎಂದರು.
ಉ. ಕರ್ನಾಟಕದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕದ ಮುಖ್ಯಸ್ಥರಾದ ರಾಘವೇಂದ್ರ ಕಾಗವಾಡ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಧಾರವಾಡ ರಂಗಾಯಣದ ನಿರ್ದೇಶಕ ರಮೇಶ ಪರವಿನಾಯ್ಕರ ಮಾತನಾಡಿದರು. ರಾಜ್ಯಸಭೆಯ ನೂತನ ಸದಸ್ಯ ಈರಣ್ಣ ಕಡಾಡಿ ಅವರನ್ನು, ಅಭಿಯಾನದಲ್ಲಿ ಪಾಲ್ಗೊಂಡ 40 ಕಾರ್ಯಕರ್ತರು ಹಾಗೂ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರನ್ನು ಸನ್ಮಾನಿಸಲಾಯಿತು. ಅಶೋಕ ಚಂದರಗಿ ಸ್ವಾಗತಿಸಿದು. ಗೋಪಾಲ ಖಟಾವಕರ ನಿರೂಪಿಸಿದರು. ಶಂಕರ ಬಾಗೇವಾಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.