ಬೆಳಗಾವಿಯಲ್ಲಿ 11 ಜನ ಸೋಂಕಿತರು ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, May 4, 2020, 3:49 PM IST
ಬೆಳಗಾವಿ: ಕೋವಿಡ್-19 ಸೋಂಕು ತಗುಲಿದ್ದ ಒಬ್ಬ ಮಹಿಳೆಯು ಸೇರಿದಂತೆ ಹನ್ನೊಂದು ಜನರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ ಎಂದು ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ ತಿಳಿಸಿದ್ದಾರೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ 4 ಜನರು, ರಾಯಬಾಗ ತಾಲೂಕಿನ ಕುಡಚಿಯ ನಾಲ್ವರು ಮತ್ತು ಸಂಕೇಶ್ವರ, ಯಳ್ಳೂರ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ.
ಬೆಳಗಾವಿ ನಗರ ಕ್ಯಾಂಪ್ ಪ್ರದೇಶದ ಪಿ-355, ಪಿ-356, ಪಿ-358, ಪಿ-359 ಮತ್ತು ರಾಯಬಾಗ ತಾಲೂಕಿನ ಕುಡಚಿಯ ಪಿ-296, ಪಿ-297, ಪಿ-299, ಪಿ-301, ಸಂಕೇಶ್ವರದ ಪಿ-293; ಯಳ್ಳೂರ ಪಿ-295 ಹಾಗೂ ಹಿರೇಬಾಗೇವಾಡಿ ಪಿ-193 ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 73 ಜನರಲ್ಲಿ ಸೋಂಕು ಪತ್ತೆಯಾಗಿರುತ್ತದೆ. ಇದೀಗ ಒಟ್ಟಾರೆ 26 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Belagavi: ಎಸ್‌ಡಿಎ ರುದ್ರಣ್ಣ ಕೇಸ್: ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.