ಪ್ರತಿ ಹೆಕ್ಟೇರ್‌ಗೆ 15 ಸಾವಿರ ಪರಿಹಾರ
Team Udayavani, May 31, 2020, 12:29 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಕೋವಿಡ್-19 ಸೋಂಕಿನ ಲಾಕ್‌ಡೌನ್ ಘೋಷಣೆಯಿಂದಾಗಿ ಜಿಲ್ಲೆಯಲ್ಲಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪ್ರತಿ ಹೆಕ್ಟೇರ್‌ಗೆ 15,000 ರೂ.ದಂತೆ ಗರಿಷ್ಠ ಒಂದು ಹೆಕ್ಟೇರ್ ಪ್ರದೇಶಕ್ಕೆ ಪರಿಹಾರ ನೀಡಲು ಸರ್ಕಾರ ಆದೇಶ ಹೊರಡಿಸಿದೆ ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸರ್ಕಾರದ ನಿಯಮದಂತೆ ಆಯ್ದ ಹಣ್ಣು ಬೆಳೆಗಳಾದ ಬಾಳೆ, ಪಪ್ಪಾಯ, ಅಂಜೂರ, ಅನಾನಸ್, ಕಲ್ಲಂಗಡಿ ಮತ್ತು ಕರಬೂಜ ಹಾಗೂ ತರಕಾರಿ ಬೆಳೆಗಳಾದ ಟೊಮ್ಯಾಟೊ, ಹಸಿಮೆಣಸಿನಕಾಯಿ, ಹೂಕೋಸು, ಎಲೆಕೋಸು, ಸಿಹಿಕುಂಬಳ, ಬೂದುಗುಂಬಳ, ಗಜ್ಜರಿ, ಈರುಳ್ಳಿ, ಡೊಣ್ಣ ಮೆಣಸಿನಕಾಯಿ ಬೆಳೆಗಳನ್ನು ಮಾತ್ರ ಪರಿಗಣಿಸಲಾಗುವುದು. ಫಲಾನುಭವಿಗಳ ಆಯ್ಕೆಯನ್ನು ಈಗ ಲಭ್ಯವಿರುವ 2019-20ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಬೆಳೆ ಸಮೀಕ್ಷೆ ಅನುಗುಣವಾಗಿ ಪರಿಗಣಿಸಲಾಗುವುದು.
ಬಾಳೆ ಹಾಗೂ ಈರುಳ್ಳಿ ಬೆಳೆಗೆ ಸಂಬಂಧಿಸಿದಂತೆ 2020 ಮಾರ್ಚ್ 2ನೇ ವಾರದ ನಂತರ ಕಟಾವಿಗೆ ಬಂದಿರುವ ಫಸಲಿನ ಪ್ರದೇಶಕ್ಕೆ ಮಾತ್ರ ಪರಿಹಾರ ನೀಡಲಾಗುವುದು. ಕಲ್ಲಂಗಡಿ ಮತ್ತು ಕರಬೂಜ ಬೆಳೆಗಾರರು ಮಾತ್ರ ಬೆಳೆ ಸಮೀಕ್ಷೆಯಲ್ಲಿ ದಾಖಲಾಗದೇ ಇದ್ದಲ್ಲಿ ಅರ್ಜಿಯನ್ನು ಸಂಬಂಧಪಟ್ಟ ತಾಲೂಕು ತೋಟಗಾರಿಕೆ ಕಚೇರಿಗೆ ಜೂನ್ 10ರೊಳಗಾಗಿ ಸಲ್ಲಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.