ಗೋಕಾಕ್ ಬೈಕಿನಲ್ಲಿ ಸಾಗಿಸುತ್ತಿದ್ದ 18.5 ಲಕ್ಷ ರೂ. ವಶ
Team Udayavani, Dec 3, 2019, 10:43 PM IST
ಬೆಳಗಾವಿ: ಉಪಚುನಾವಣೆಯ ಮತದಾನಕ್ಕೆಇನ್ನೆರಡು ದಿನಗಳು ಬಾಕಿ ಇರುವಾಗಲೇ ಬಹಿರಂಗ ಪ್ರಚಾರ ಅಂತ್ಯಗೊಂಡ ಕೆಲವೇ ಗಂಟೆಯಲ್ಲಿ ಬೈಕಿನಲ್ಲಿ ಸಾಗಿಸುತ್ತಿದ್ದ 18.5 ಲಕ್ಷ ರೂ. ಹಣವನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.
ಗೋಕಾಕ ತಾಲೂಕಿನ ಮರಡಿಮಠ ಗ್ರಾಮದ ಬಳಿ ಬೈಕಿನಲ್ಲಿ ಹಣ ಸಾಗಿಸುವಾಗ ಖಚಿತ ಮಾಹಿತಿ ಪಡೆದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ. ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದ ರಾಜು ಭೀಮಪ್ಪ ಬೆಳಮರಡಿ ಹಾಗೂ ವಿಶಾಲ ಯಲ್ಲಪ್ಪ ಹಂಚಿನಮನಿ ಎಂಬುವರನ್ನು ವಶಕ್ಕೆಪಡೆದಿದ್ದಾರೆ .
ಪ್ರವೀಣ ಭೀಮಪ್ಪ ಗುಡ್ಡಾಕಾಯಿ ಎಂಬವರಿಂದ 18.5 ಲಕ್ಷ ರೂ. ಹಣ ಪಡೆದುಕೊಂಡು ರಮೇಶ ಮರಡಿಮಠ ಎಂಬವರಿಗೆ ಹಣ ನೀಡಲು ಹೊರಟಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದ್ದು. ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಜಗದೀಶ ಈಟಿ ಹಾಗೂ ಸಿಬ್ಬಂದಿ ಹಣ ವಶಪಡಿಸಿಕೊಂಡಿದ್ದಾರೆ.
10 ಲಕ್ಷ ರೂ.ಗಳಿಗಿಂತ ಹೆಚ್ಚಿನ ನಗದು ಹಣ ಸಾಗಿಸುತ್ತಿರುವುದರಿಂದ ಇದರ ದಾಖಲೆಗಳ ಪರಿಶೀಲನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಎಸ್ ಪಿ ಲಕ್ಷ್ಮಣ ನಿಂಬರಗಿ ಉದಯವಾಣಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.