ಹಿಡಕಲ್ದಿಂದ ಹೆಚ್ಚುವರಿ ನೀರು ತರಲು 20 ಕೋಟಿ
ಸ್ಮಾರ್ಟ್ ಸಿಟಿ ಪ್ರಗತಿ ಪರಿಶೀಲನೆ
Team Udayavani, Jun 19, 2019, 10:04 AM IST
ಬೆಳಗಾವಿ: ಸ್ಮಾರ್ಟ್ ಸಿಟಿ ಯೋಜನೆ ಪ್ರಗತಿ ಕಾರ್ಯ ಕುರಿತು ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬೆಳಗಾವಿ: ನಗರದಲ್ಲಿ ಕುಡಿಯುವ ನೀರಿನ ಬವಣೆ ತಪ್ಪಿಸಲು ಹಿಡಕಲ್ ಜಲಾಶಯದಿಂದ ಹೆಚ್ಚುವರಿಯಾಗಿ ನೀರು ತರಲು 20 ಕೋಟಿ ರೂ. ವೆಚ್ಚದ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಅರಣ್ಯ ಹಾಗೂ ಪರಿಸರ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಮಹಾನಗರ ಪಾಲಿಕೆ ಆಯುಕ್ತರ ಕಚೇರಿಯಲ್ಲಿ ಮಂಗಳವಾರ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಹಿಡಕಲ್ ಜಲಾಶಯದಿಂದ ನೀರು ಪಂಪಿಂಗ್ ಮಾಡುವ ಕಾರ್ಯಕ್ಕೆ ಸುಮಾರು 20 ಕೋಟಿ ರೂ. ಟೆಂಡರ್ ಮುಗಿದಿದೆ. 12 ಎಂ.ಜಿ.ಡಿ.ಯಿಂದ 18 ಎಂ.ಜಿ.ಡಿ. ಸಾಮರ್ಥ್ಯಕ್ಕೆ ಹೆಚ್ಚಿಸಲಾಗುವುದು. ಇದರಿಂದ ಸುಮಾರು ಶೇ. 30ರಷ್ಟು ನೀರು ಹೆಚ್ಚುವರಿಯಾಗಿ ಸಿಗಲಿದೆ. ಬೇಗ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸದ್ಯ ಬೆಳಗಾವಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಹಿಡಕಲ್ ಜಲಾಶಯದಿಂದ ನೀರು ನಗರಕ್ಕೆ ಪೂರೈಕೆ ಆಗುತ್ತಿದೆ. ರಾಕಸಕೊಪ್ಪ ಜಲಾಶಯ ಖಾಲಿಯಾಗಿದ್ದರೂ ಅದರ ಕೊರತೆ ನೀಗಿಸಲು ಹಿಡಕಲ್ ನಮಗೆ ಆಶ್ರಯವಾಗಿದೆ. ಯಾವ ಕಡೆಯೂ ಸದ್ಯ ಸಮಸ್ಯೆ ಇಲ್ಲ. ಕೆಲ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದ್ದರೂ ಅದನ್ನು ಪರಿಹರಿಸಲಾಗುವುದು. ನಗರದಲ್ಲಿ ಟ್ಯಾಂಕರ್ ನೀರು ಪೂರೈಸುವಂಥ ಸ್ಥಿತಿ ಇಲ್ಲ. ಮಳೆ ಆರಂಭವಾದರೆ ರಾಕಸಕೊಪ್ಪ ಕೂಡ ತುಂಬಲಿದೆ ಎಂದರು.
ನಗರದಲ್ಲಿ ನಿರಂತರ 24×7 ನೀರು ಪೂರೈಸುವ ಕಾರ್ಯಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ತಿಳಿಸಿದ ಸಚಿವ ಜಾರಕಿಹೊಳಿ, ಈಗಿನ 12 ಎಂ.ಜಿ.ಟಿ.ಯಿಂದ 18 ಎಂ.ಜಿ.ಟಿ. ನೀರನ್ನು ಹೆಚ್ಚುವರಿಯಾಗಿ ಪಂಪಿಂಗ್ ಮಾಡಲು 20 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದೆ ಶೀಘ್ರದಲ್ಲಿ ಬೆಳಗಾವಿ ನಗರಕ್ಕೆ ನೀರು ತಲುಪಲಿದೆ ಎಂದರು.
ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ನಾಲ್ಕು ಹಂತದ ಕಾಮಗಾರಿ ಸುಮಾರು ಶೇ. 95ರಷ್ಟು ಮುಕ್ತಾಯಗೊಂಡಿದೆ. 5ನೇ ಹಂತದ ಕಾಮಗಾರಿ ಆರಂಭವಾಗಲಿದೆ. ಕೆಲವೊಂದು ಕಡೆಗೆ ಜಾಗದ ಸಮಸ್ಯೆ, ತಾಂತ್ರಿಕ ಸಮಸ್ಯೆಗಳಿದ್ದು, ಅದನ್ನು ಬಗೆಹರಿಸಿಕೊಳ್ಳಲಾಗುವುದು. ಕೆಲ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ಇನ್ನೂ ಕೆಲವು ಟೆಂಡರ್ ಆಗಬೇಕಾಗಿದೆ ಎಂದರು. ಇನ್ನು ಎರಡೂವರೆ ವರ್ಷಗಳ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಮುಗಿಯಲಿವೆ. ಸದ್ಯ 700 ಕೋಟಿ ರೂ. ವೆಚ್ಚದಲ್ಲಿ ಶೇ. 60ರಷ್ಟು ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಇನ್ನು ಶೇ. 40ರಷ್ಟು ಕೆಲಸಗಳು ಇನ್ನುಳಿದ ಎರಡೂವರೆ ವರ್ಷದಲ್ಲಿ ಮುಗಿಸುವಂತೆ ಸೂಚಿಸಲಾಗಿದೆ ಎಂದರು.
ಸ್ಮಾರ್ಟ್ ಸಿಟಿ, ಮುಖ್ಯಮಂತ್ರಿಗಳ 100 ಕೋಟಿ ರೂ. ವಿಶೇಷ ಅನುದಾನ, ಸ್ಲಮ್ ಬೋರ್ಡ್, ವಸತಿ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಲಾಗಿದೆ. ಯಾವ ಭಾಗದಲ್ಲಿ ಜಾಗದ ಸಮಸ್ಯೆ ಹಾಗೂ ತಾಂತ್ರಿಕ ಸಮಸ್ಯೆಗಳಿವೆಯೋ ಅವುಗಳನ್ನೆಲ್ಲ ಬಗೆಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.
ಮಹಾನಗರ ಪಾಲಿಕೆ ಆಯುಕ್ತ ಶಶಿಧರ ಕುರೇರ, ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.