ಪ್ರವಾಹ ಪರಿಹಾರಕ್ಕೆ ಶೀಘ್ರ 200 ಕೋಟಿ
Team Udayavani, Sep 21, 2019, 10:09 AM IST
ಬೆಳಗಾವಿ: ಅತಿಯಾದ ಮಳೆ ಹಾಗೂ ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಸುಮಾರು 11 ಸಾವಿರ ಕೋಟಿ ರೂ. ಹಾನಿಯಾಗಿದ್ದು ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ 167 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದಲ್ಲದೇ ತಕ್ಷಣವೇ 200 ಕೋಟಿ ರೂ. ನೀಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದ ಜವಾಬ್ದಾರಿ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಅವರು, ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಶುಕ್ರವಾರ ನೆರೆ ಹಾವಳಿ ಪ್ರದೇಶಗಳಲ್ಲಿನ ಪರಿಹಾರ ಕಾರ್ಯ ಹಾಗೂ ಸಂತ್ರಸ್ತರ ಸಮಸ್ಯೆಗಳ ಕುರಿತು ಅಧಿಕಾರಿಗಳು ಹಾಗೂ ರೈತರ ಸಭೆ ನಡೆಸಿ ಅವರು ಮಾತನಾಡಿದರು.
ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ತಕ್ಷಣವೇ ಒಂದು ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸಚಿವ ಸಂಪುಟ ಸಭೆ ನಿರ್ಧರಿಸಿದ್ದು, ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗುತ್ತಿದೆ. ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಎನ್ ಡಿಆರ್‌ಎಫ್ ಮಾರ್ಗಸೂಚಿಯ ಜೊತೆಗೆ ರಾಜ್ಯ ಸರ್ಕಾರ ಸಹ ರೈತರಿಗೆ ವಿಶೇಷ ಪರಿಹಾರ ಪ್ರಕಟಿಸಲಿದೆ ಎಂದರು.
ರಾಜ್ಯದ ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಸುಧಾರಣೆಗೆ ಲೋಕೋಪಯೋಗಿ ಇಲಾಖೆ 500 ಕೋಟಿ ಬಿಡುಗಡೆ ಮಾಡಿದೆ. ಹೀಗಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ವಹಿಸಿದೆ ಎಂದು ಹೇಳಿದರು.
ಸದ್ಯಕ್ಕೆ ಹಾನಿ ಸರಿಪಡಿಸಿ ಸಾಮಾನ್ಯ ಸ್ಥಿತಿಗೆ ತರುವುದು ಸರ್ಕಾರದ ಆದ್ಯತೆಯಾಗಿದೆ. ಹಾನಿಯ ಗಂಭೀರತೆ ಅರಿತು ತಕ್ಷಣವೇ
ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ರೂ. ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಸಮೀಕ್ಷೆ ಮತ್ತು ತಾಂತ್ರಿಕ ಲೋಪಗಳಿಂದ ಪರಿಹಾರದಿಂದ ವಂಚಿತಗೊಂಡ ಕುಟುಂಬಗಳಿಗೆ ಸಹ ತಕ್ಷಣ ಪರಿಹಾರ ನೀಡಲಾಗುವುದು. ಬೆಳೆಹಾನಿಯಾಗಿರುವುದರಿಂದ ಸಾಲ ವಸೂಲಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಈಗಾಗಲೇ ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ಸಾಲಮನ್ನಾ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಶಾಸಕರಾದ ಮಹಾಂತೇಶ ದೊಡ್ಡಗೌಡರ, ದುರ್ಯೋಧನ ಐಹೊಳೆ, ಅಭಯ ಪಾಟೀಲ, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆಶಾ ಐಹೊಳೆ, ಪೊಲೀಸ್ ಆಯುಕ್ತ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.