ಡೆಂಘೀ ವಿರೋಧಿ ಜಾಗೃತಿ ಜಾಥಾ: ಜಿಲ್ಲೆಯಲ್ಲಿ 26 ಪ್ರಕರಣ ಪತ್ತೆ
Team Udayavani, Jul 27, 2019, 1:19 PM IST
ಬೆಳಗಾವಿ: ಡೆಂಘೀ ಮಾಸಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಮಹಾನಗರಪಾಲಿಕೆ ಆಯುಕ್ತ ಆಶೋಕ ದುಡಗುಂಟಿ ಚಾಲನೆ ನೀಡಿದರು.
ಬೆಳಗಾವಿ: ಜಿಲ್ಲೆಯಲ್ಲಿ ಕಳೆದ ಜನೆವರಿಯಿಂದ ಇಲ್ಲಿಯವರೆಗೆ ಡೆಂಘೀ ರೋಗದ ಸಂಶಯಾಸ್ಪದ 246 ರಕ್ತ ಮಾದರಿಗಳನ್ನು ಪರೀಕ್ಷಿಸಲಾಗಿದ್ದು ಅದರಲ್ಲಿ 26 ದೃಢಪಟ್ಟಿವೆ.
ಬೆಳಗಾವಿ ನಗರ, ಚಿಕ್ಕೋಡಿ ಹಾಗೂ ಅಥಣಿಯಲ್ಲಿ ಹೆಚ್ಚಿನ ಪ್ರಕರಣಗಳು ಕಂಡು ಬಂದಿದ್ದು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ| ಎಂ.ಎಸ್.ಪಲ್ಲೇದ ಹೇಳಿದರು
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ವಂಟಮುರಿ ಕಾಲನಿಯಲ್ಲಿ ಡೆಂಘೀ ವಿರೋಧಿ
ಮಾಸಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಳೆದ ವರ್ಷಕ್ಕೆ ಹೊಲಿಸಿದರೆ ಈ ಬಾರಿ ಜಿಲ್ಲೆಯಲ್ಲಿ ಡೆಂಘೀ ಪ್ರಕರಣಗಳು ಇಳಿಮುಖವಾಗಿವೆ ಆದರೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇದಕ್ಕೂ ಮುನ್ನ ಜಾಥಾ ಕಾರ್ಯಕ್ರಮಕ್ಕೆ ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಶಿಕಾಂತ ಮುನ್ಯಾಳ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಶಶಿಕಾಂತ ಮುನ್ಯಾಳ ಡೆಂಘೀ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಯಾವುದೇ ಜ್ವರ ಇದ್ದರೂ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಸಾಂಕ್ರಾಮಿಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ
ಭೇಟಿ ನೀಡಿ ಲಾರ್ವಾ ಸಮೀಕ್ಷೆ ಮಾಡಿ ಸಾರ್ವಜನಿಕರಿಗೆ ಡೆಂಘೀ ರೋಗದ ಲಕ್ಷಣಗಳು, ಮುಂಜಾಗ್ರತಾ ಕ್ರಮ ಹಾಗೂ ನಿಯಂತ್ರಣ ಕುರಿತು ಅರಿವು ಮೂಡಿಸುತ್ತಿದ್ದಾರೆ. ಸಾರ್ವಜನಿಕರು ಸಹ ಆರೋಗ್ಯ ಇಲಾಖೆಯ ಜೊತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಜಾಥಾ ಕಾರ್ಯಕ್ರಮದಲ್ಲಿ ಪಾಲಿಕೆ ಆರೋಗ್ಯಾಧಿಕಾರಿ ಡಾ| ಶಶಿಧರ ನಾಡಗೌಡ, ಜಿಲ್ಲಾ ಸರ್ವೕಕ್ಷಣಾಧಿಕಾರಿ ಡಾ| ಬಿ.ಎನ್.ತುಕ್ಕಾರ, ಡಾ| ಸಾವಿತ್ರಿ ಬೆಂಡಿಗೇರಿ, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಅನಿಲ ಕೊರಬು, ತಾಲೂಕಾ ಆರೋಗ್ಯಾಧಿಕಾರಿ ಡಾ. ಸಂಜಯ ಡುಮ್ಮಗೋಳ, ಕೀಟಶಾಸ್ತ್ರಜ್ಞರಾದ ಗಣಪತಿ ಬಾರ್ಕಿ, ಶಿಲ್ಪಾ ಹಳೇಮನಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.