ಗರ್ಭಿಣಿ-ಮಕ್ಕಳ ಆರೈಕೆಗಾಗಿ 40 ಬೆಡ್
Team Udayavani, May 20, 2021, 5:40 PM IST
ಬೆಳಗಾವಿ: ಕೋವಿಡ್ -19 ಸಾಂಕ್ರಾಮಿಕ ರೋಗದ ತುರ್ತು ಸಂದರ್ಭದಲ್ಲಿ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆ್ಯಂಡ ರಿಸರ್ಚ (ಡೀಮ್ಸ್ ವಿಶ್ವವಿದ್ಯಾಲಯ), ಜೆಎನ್ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಡಾ. ಪ್ರಭಾಕರ ಕೋರೆ ಆಸ್ಪತ್ರೆಗಳ ಸಂಯುಕ್ತಾಶ್ರಯದಲ್ಲಿ ಈ ಭಾಗದ ಜನರಿಗೆ ಎಲ್ಲ ರೀತಿಯ ಸೇವೆ ನೀಡಲು ಬದ್ಧವಾಗಿದ್ದು, ಗರ್ಭಿಣಿ ಮತ್ತು ಮಕ್ಕಳ ಆರೈಕೆಗಾಗಿ 40 ಬೆಡ್ ಮೀಸಲಿಡಲಾಗಿದೆ.
ಈ ಸಂಬಂಧ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಸಭೆಯಲ್ಲಿ ಆಸ್ಪತ್ರೆಯ ತಜ್ಞವೈದ್ಯರೊಂದಿಗೆ ಕೋವಿಡ್ ಸಾಂಕ್ರಾಮಿಕ ರೋಗದ ನಿಯಂತ್ರಣ ಹಾಗೂ ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಿದ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಕೋವಿಡ್ ಸೊಂಕಿಗೆ ಒಳಗಾಗುತ್ತಿರುವ ಗರ್ಭಿಣಿಯರ ಆರೈಕೆಗಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಹಾಗೂ ಲೇಬರ್ ರೂಮ್ ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು. ಇದಲ್ಲದೆ ಸಂಭವನೀಯ ಮೂರನೇ ಅಲೆಗೆ ಮಕ್ಕಳು ಬಳಲಲಿದ್ದಾರೆ ಎಂದು ಅಂದಾಜಿಸಲಾಗಿದ್ದು, ಮಕ್ಕಳ ಚಿಕಿತ್ಸೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ಅಗತ್ಯ ಕ್ರಮವಹಿಸಲಾಗಿದೆ.
ಮಕ್ಕಳ ತಜ್ಞವೈದ್ಯರು ಚಿಕಿತ್ಸೆ ನೀಡಲು ಸಿದ್ದವಾಗಿದ್ದು ಆಸ್ಪತ್ರೆಯಲ್ಲಿ ವೆಂಟಿಲೇಟರ್ ಸಮೇತ ತೀವ್ರ ನಿಗಾ ಘಟಕದ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಪ್ರಾರಂಭಿಸಲಾಗಿದೆ. ಕೊರೊನಾ ಸೋಂಕಿಗೆ ತುತ್ತಾಗಿ ರೋಗಲಕ್ಷಣವಿಲ್ಲದ ಹಾಗೂ ಸೌಮ್ಯವಾದ ರೋಗಲಕ್ಷಣಗಳನ್ನು ಹೊಂದಿರುವವರು ಮನೆಯಲ್ಲಿ ಪ್ರತ್ಯೇಕವಾಗಿರಲು ಆಮ್ಲಜನಕದ ಅಗತ್ಯವಿಲ್ಲ. ಅದಕ್ಕಾಗಿ ನಗರದ ಲಿಂಗರಾಜ ಮಹಾವಿದ್ಯಾಲಯದ ಆವರಣದಲ್ಲಿರುವ ವಸತಿ ನಿಲಯದಲ್ಲಿ ಕೆಎಲ್‌ಇ ಸ್ವಶಕ್ತಿ ಸಂಘವು ಕೋವಿಡ್ ಕೇರ್ ಕೇಂದ್ರವನ್ನು ಪ್ರಾರಂಭಿಸಿದ್ದು ಇಲ್ಲಿ ದಿನದ 24 ಗಂಟೆಗಳ ಕಾಲ ವೈದ್ಯರ ಸೇವೆ ಲಭ್ಯವಿದೆ.
ಕೋವಿಡ್ ಸೋಂಕಿನ ತೀವ್ರತೆ ನಡುವೆ ಬ್ಲ್ಯಾಕ್ ಫಂಗಸ್ (ಕಪ್ಪು ಶಿಲೀಂದ್ರ)ದಿಂದ ಬಳಲುತ್ತಿರುವವರ ಸಂಖ್ಯೆಯೂ ಅಧಿಕಗೊಳ್ಳುತ್ತಿದೆ. ಈ ಸಮಸ್ಯೆ ಕಂಡು ಬಂದ ರೋಗಿಗಳ ಚಿಕಿತ್ಸೆಗಾಗಿಯೇ 20 ಹಾಸಿಗೆಗಳ ಪ್ರತ್ಯೇಕ ವಾರ್ಡ್ ಸ್ಥಾಪಿಸಲಾಗಿದೆ. ಎರಡನೇ ಅಲೆಯಲ್ಲಿ ಕೋವಿಡ್ ರೋಗಿಗಳಿಗೆ ಆಮ್ಲಜನಕ ಹಾಗೂ ವೆಂಟಿಲೇಟರಗಳ ಅವಶ್ಯಕತೆ ಬಹಳಷ್ಟಿದೆ. ಅವಶ್ಯಕತೆಗೆ ಅನುಗುಣವಾಗಿ ಆಮ್ಲಜಕವನ್ನು ಪಡೆದುಕೊಳ್ಳಲು ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಆವರಣದಲ್ಲಿ 2500 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಅಗತ್ಯವಿದ್ದಷ್ಟು ಆಮ್ಲಜಕ ಯಾವುದೇ ತೊಂದರೆಯಿಲ್ಲದೇ ಸಿಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ತಿಳಿಸಿದ್ದಾರೆ.
ಕೋವಿಡ್-19 ಸೋಂಕಿಗೆ ಒಳಗಾದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಸೇವೆಗೆ ಜೊತೆಗೆ ಆಸ್ಪತ್ರೆಯ ಆವರಣದಲ್ಲಿ ಕೋವಿಡ್ ಕೇರ್ ಕ್ಲಿನಿಕ್ ಅನ್ನು ಪ್ರಾರಂಭಿಸಲಾಗಿದೆ. ತೀವ್ರತರ ಲಕ್ಷಣವಿಲ್ಲದವರು ಹಾಗೂ ಮನೆಯಲ್ಲಿ ಪ್ರತ್ಯೇಕವಾಗಿದ್ದು, (ಐಸೊಲೇಶನ್) ಚಿಕಿತ್ಸೆಗೆ ಒಳಗಾಗಲು ಬಯಸುವ ಕೋವಿಡ್ ರೋಗಿಗಳಿಗೆ ಗುಣಮಟ್ಟದ ಸೂಕ್ತ ಚಿಕಿತ್ಸೆ ಹಾಗೂ ಸೇವೆಯನ್ನು ಕಲ್ಪಿಸಲಾಗುತ್ತದೆ. ನುರಿತ ಶ್ವಾಸಕೋಶ ತಜ್ಞವೈದ್ಯರು ದೂರವಾಣಿ ಮೂಲಕ ಆಪ್ತಸಮಾಲೋಚನೆ ಹಾಗೂ ಚಿಕಿತ್ಸೆ ನೀಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಆಸ್ಪತ್ರೆಯು ಸಹಾಯವಾಣಿಯನ್ನು ಪ್ರಾರಂಭಿಸಿದ್ದು ತುರ್ತು ಸಂದರ್ಭದಲ್ಲಿ 1099 ಗೆ ಸಂಪರ್ಕಿಸಲು ತಿಳಿಸಲಾಗಿದೆ. ಸಭೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎನ್ ಎಸ್ ಮಹಾಂತಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಎಂ ವಿ ಜಾಲಿ, ಉಪಪ್ರಾಚಾರ್ಯ ಡಾ. ವಿ ಎಂ ಪಟ್ಟಣಶೆಟ್ಟಿ, ಡಾ. ರಾಜೇಶ ಪವಾರ, ವೈದ್ಯಕೀಯ ಅದೀಕ್ಷಕ ಡಾ. ಆರಿಫ್ ಮಾಲ್ದಾರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.