ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆ ಗುರಿ
ಬೆಳಗಾವಿಯಲ್ಲಿ ಸಿಇಒಗಳ ಜತೆ ಸಚಿವ ಅಶ್ವತ್ಥ ನಾರಾಯಣ ಶೃಂಗಸಭೆ
Team Udayavani, Jan 6, 2022, 6:20 AM IST
ಬೆಳಗಾವಿ: ಮುಂದಿನ ಐದು ವರ್ಷಗಳಲ್ಲಿ 400 ಶತಕೋಟಿ ಡಾಲರ್ ಮೌಲ್ಯದ ಡಿಜಿಟಲ್ ಆರ್ಥಿಕತೆ ಬೆಳೆಸುವ ಗುರಿ ಸರಕಾರಕ್ಕಿದೆ. ರಾಜ್ಯದ ಎಲ್ಲ ಭಾಗಗಳಲ್ಲೂ ಸಮಾನವಾಗಿ ಉದ್ಯಮಗಳನ್ನು ಬೆಳೆಸುವ ಉದ್ದೇಶ ಇದೆ ಎಂದು ಐಟಿ, ಬಿಟಿ ಮತ್ತು ಕೌಶಲಾಭಿವೃದ್ಧಿ ಸಚಿವ ಡಾ| ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.
“ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆ-ಡಿಇಎಂ) ಬಿಯಾಂಡ್ ಬೆಂಗಳೂರು’ ಉಪಕ್ರಮದ ನಿಮಿತ್ತ ಮಂಗಳವಾರ ನಗರದಲ್ಲಿ ಏರ್ಪ ಡಿಸಿದ್ದ ಸಿಇಒಗಳ ದುಂಡು ಮೇಜಿನ ಶೃಂಗ ಸಭೆಯಲ್ಲಿ ಮಾತನಾಡಿದ ಅವರು, ಬೆಳಗಾವಿಯು ಉದ್ಯಮಶೀಲತೆ, ಶೈಕ್ಷಣಿಕ ಸಂಸ್ಕೃತಿ ಮತ್ತು ಹಿತಕರ ಹವಾ ಮಾನ ಮೂರಕ್ಕೂ ಹೆಸರಾಗಿದೆ. ಇಲ್ಲಿ ಉದ್ದಿಮೆಗಳನ್ನು ಸಮೃದ್ಧವಾಗಿ ಪೂರ್ಣ ಪ್ರಮಾಣದಲ್ಲಿ ಬೆಳೆಸಲಾಗುವುದು. ಪ್ರಧಾನಿ ಮೋದಿ ದೂರದೃಷ್ಟಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಘೋಷಿಸಿದ್ದು, ರಾಜ್ಯದಲ್ಲಿ ಇದು ಪೂರ್ವ ಪ್ರಾಥಮಿಕ ಶಿಕ್ಷಣದ ಹಂತದಿಂದಲೇ ಜಾರಿಗೆ ಬರುತ್ತಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಮತ್ತು ಪದವಿ ಹಂತಗಳಲ್ಲಿ ಜಾಗತಿಕ ಗುಣಮಟ್ಟದ ಬೋಧನೆ ಅಳವಡಿಸಿಕೊಂಡಿದೆ ಎಂದರು.
ಬೆಳಗಾವಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕೇಂದ್ರ ಕಚೇರಿ ಇದೆ. ಈ ವಿಶ್ವವಿದ್ಯಾಲಯವನ್ನು ಐಐಎಸ್ಸಿ ಮತ್ತು ಐಐಟಿಗಳ ಮಟ್ಟಕ್ಕೆ ಬೆಳೆಸಿ, ಉತ್ಕೃಷ್ಟ ಸಂಸ್ಥೆಯನ್ನಾಗಿ ಮಾಡಲಾಗುವುದು. ಇದಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆ ರೂಪಿಸಲಾಗಿದೆ. ರಾಜ್ಯದ ಎಲ್ಲ ಭಾಗಗಳೂ ಸಮಾನವಾಗಿ ಬೆಳವಣಿಗೆ ಸಾಧಿ ಸಬೇಕೆನ್ನುವ ಮಹತ್ವಾಕಾಂಕ್ಷೆ ಯಿಂದಲೇ “ಬಿಯಾಂಡ್ ಬೆಂಗಳೂರು’ ಉಪಕ್ರಮವನ್ನು ಅನು ಷ್ಠಾನಕ್ಕೆ ತರಲಾಗುತ್ತಿದೆ. ಉದ್ದಿಮೆಗಳು ಬೆಂಗಳೂರಿನಲ್ಲಿ ಮಾತ್ರವೇ ನೆಲೆಗೊಳ್ಳಬಾರದು ಎನ್ನುವುದು ಇದರ ಉದ್ದೇಶ. ಇದಕ್ಕಾಗಿ ಹುಬ್ಬಳ್ಳಿ, ಮೈಸೂರು ಮತ್ತು ಮಂಗಳೂರು ಕ್ಲಸ್ಟರ್‌ಗಳನ್ನು ಮಾಡಲಾಗಿದ್ದು, ಬೆಳಗಾವಿಯಲ್ಲಿ ಕೂಡ ಉದ್ಯಮಗಳ ಸ್ಥಾಪನೆಗೆ ಎಲ್ಲ ನೆರವನ್ನೂ ಸರಕಾರ ನೀಡಲಿದೆ ಎಂದರು.
ಇದನ್ನೂ ಓದಿ:ಹುಬ್ಬಳ್ಳಿಯಲ್ಲಿ ಪೈಲಟ್ ತರಬೇತಿ ಕೇಂದ್ರ: ಪ್ರಹ್ಲಾದ್ ಜೋಷಿ
“ಸೂಪರ್-30′
ರಾಜ್ಯದಲ್ಲಿ ಸರಕಾರಿ ಎಂಜಿನಿ ಯರಿಂಗ್ ಮತ್ತು ಇವು ಇಲ್ಲದ ಕಡೆಗಳಲ್ಲಿ ಖಾಸಗಿ ಕಾಲೇಜುಗಳನ್ನು ವಿಶ್ವಮಟ್ಟಕ್ಕೆ ಸುಧಾರಿಸುವ “ಸೂಪರ್-30′ ಯೋಜನೆಯನ್ನು ರೂಪಿಸಲಾಗಿದೆ. ಇದರ ಜತೆಗೆ ಎಂಜಿನಿಯರಿಂಗ್ ಕಾಲೇಜುಗಳು ವಿಶ್ವದ ಯಾವುದೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಉದ್ದಿಮೆಗಳೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವುದನ್ನು ಉತ್ತೇಜಿಸಲಾಗುತ್ತಿದೆ. ಇದು ಸಮಾಜದಲ್ಲಿ ಪರಿವರ್ತನೆ ತರಲಿದ್ದು, ಜಾಗತಿಕ ಮಟ್ಟದ ನಾಯಕತ್ವವನ್ನು ಸೃಷ್ಟಿಸಲಿದೆ ಎಂದರು.
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ವಿದ್ಯುನ್ಮಾನ ಮತ್ತು ಐಟಿ-ಬಿಟಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣ ರೆಡ್ಡಿ, ಐಟಿ ನಿರ್ದೇಶಕಿ ಮೀನಾ ನಾಗರಾಜ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.