Kambala: ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ
Team Udayavani, Dec 17, 2024, 7:10 AM IST
ಸುವರ್ಣಸೌಧ: ಕರಾವಳಿ, ಮಲೆನಾಡು ಭಾಗದಲ್ಲಿ ನಡೆಯುವ ಕಂಬಳ ಕ್ರೀಡೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಬೇಕೆಂದು ಕಾಂಗ್ರೆಸ್‌ನ ಐವನ್ ಡಿ’ಸೋಜಾ ಒತ್ತಾಯಿಸಿದರು.
ವಿಧಾನಪರಿಷತ್ತು ಕಲಾಪದ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಕಂಬಳ ಕ್ರೀಡೆ ನಡೆಯುತ್ತಿದ್ದು, ಸರಿಸುಮಾರು 1 ಲಕ್ಷಕ್ಕೂ ಅಧಿಕ ಜನರು ಕಂಬಳ ವೀಕ್ಷಣೆ ಮಾಡುತ್ತಾರೆ.
ಪ್ರಸ್ತುತ ಸುಮಾರು 25 ಕಂಬಳಗಳು ನಡೆಯುತ್ತಿದ್ದು, ಪ್ರತಿ ಕಂಬಳಕ್ಕೂ 5 ಲಕ್ಷ ರೂ.ಗಳನ್ನು ನೀಡಬೇಕು, ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಕಂಬಳಕ್ಕೆ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಸಭಾನಾಯಕ ಎನ್.ಎಸ್.ಬೋಸರಾಜ್, ವಿಷಯವನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ
ಕಿತ್ತೂರಿಗೂ ಕಲ್ಯಾಣ ಕರ್ನಾಟಕ ಸ್ಥಾನ ನೀಡಿ: ಶಾಸಕರ ಆಗ್ರಹ
ವಕ್ಫ್ ಆಸ್ತಿ ಬಗ್ಗೆ ಸರ್ಕಾರದ ನಿಲುವು ದ್ವಂದ್ವಮಯ: ಸಿ.ಟಿ. ರವಿ
Nandikoor-Kasaragod ವಿದ್ಯುತ್ ಲೈನ್ ರಾಜ್ಯ ಸರಕಾರದ ವ್ಯಾಪ್ತಿಗೆ ಬರುವುದಿಲ್ಲ: ಜಾರ್ಜ್
ಇದು 0 ಪರ್ಸೆಂಟ್ ಅಭಿವೃದ್ಧಿ,100 ಪರ್ಸೆಂಟ್ ಭ್ರಷ್ಟಾಚಾರದ ಸರಕಾರ: ಸುನಿಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.