ಅಧಿಕಾರಕ್ಕೆ ಬಂದ್ರೆ ಶೇ.50 ಆಸ್ತಿತೆರಿಗೆ ರಿಯಾಯಿತಿ : ಡಿ.ಕೆ. ಶಿವಕುಮಾರ

Team Udayavani, Aug 30, 2021, 6:33 PM IST

dfgrtgr

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಲ್ಲ ಸಾರ್ವಜನಿಕರ ಹಾಗೂ ಅಂಗಡಿಕಾರರಿಗೆ ಶೇ. 50ರಷ್ಟು ಆಸ್ತಿ ತೆರಿಗೆ ರಿಯಾಯಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಭರವಸೆ ನೀಡಿದರು.

ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಅನೇಕರು ಬಹಳ ಕಷ್ಟ ಅನುಭವಿಸಿದ್ದಾರೆ. ಇಂಥ ಸಂದರ್ಭದಲ್ಲಿ ಜನರ ನೆರವಿಗೆ ನಿಲ್ಲುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪಾಲಿಕೆ ವ್ಯಾಪ್ತಿಯ ವ್ಯಾಪಾರಸ್ಥರು, ಸಾರ್ವಜನಿಕರಿಗೆ ಅನುಕೂಲ ಆಗಲಿ ಎಂಬ ಉದ್ದೇಶದಿಂದ ಪಾಲಿಕೆಯಲ್ಲಿಕಾಂಗ್ರೆಸ್‌ ಅಧಿ ಕಾರಕ್ಕೆ ಬಂದರೆ ಶೇ. 50ರಷ್ಟು ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಹೇಳಿದರು.

ಪಾಲಿಕೆ ವ್ಯಾಪ್ತಿಯ ವ್ಯಾಪಾರಿಗಳು, ವಾಹನ ಚಾಲಕರು ಸೇರಿ ಎಲ್ಲ ಕಾರ್ಮಿಕರಿಗೂ5ಸಾವಿರ ರೂ. ಪರಿಹಾರ ನೀಡುತ್ತೇವೆ. ಅಧಿಕಾರಕ್ಕೆ ಬಂದ ನಂತರ ಭರವಸೆಯನ್ನು ಈಡೇರಿಸುತ್ತೇವೆ. ಕಾರ್ಮಿಕರಿಗೆ ಕೊವಿಡ್‌ ನಿಧಿ ಕೊಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇಪ್ಪತ್ತು ಲಕ್ಷ ಕೋಟಿ ಬಿಡುಗಡೆ ಮಾಡಿದ್ದ ಅನುದಾನ ಯಾರಿಗೆಲ್ಲ ತಲುಪಿದೆ ಎಂದು ಸರ್ಕಾರವೇ ಸ್ಪಷ್ಟಪಡಿಸಲಿ. ಬೀದಿ ಬದಿ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಅನುದಾನ ನೀಡಿಲ್ಲ. ನಾವು ಅಧಿಕಾರಕ್ಕೆ ಬಂದರೆ ಕಾರ್ಮಿಕರಿಗೆ ಐದು ಸಾವಿರ ನೀಡುತ್ತೇವೆ ಎಂದು ಡಿ.ಕೆ ಶಿವಕುಮಾರ್‌ ನುಡಿದರು.

ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿ ಮಾಡುವುದೇ ನಮ್ಮ ಗುರಿ. ಇಲ್ಲಿಯೇ ಉದ್ಯೋಗಗಳು ಸƒಷ್ಟಿಯಾಗಬೇಕು. ಐಟಿ ಪಾರ್ಕ್‌ ನಿರ್ಮಾಣ ಆಗಬೇಕು. ನಾವು ಹೊಸ ಮಾದರಿಯ ಸಿಡಿಪಿ ತಯಾರಿಸುತ್ತೇವೆ ಎಂದು ಹೇಳಿದರು. ಬೆಳಗಾವಿಸ್ಮಾರ್ಟ್‌ಸಿಟಿಯೋಜನೆಗೆಒಂದುಸಾವಿರ ಕೋಟಿಯಷ್ಟು ಅನುದಾನ ಬಂದಿದೆ. ಸ್ಮಾರ್ಟ್‌ ಸಿಟಿ ಕಾಮಗಾರಿಯಲ್ಲಿ ಕಮಿಷನ್‌ ನಡೆಯುತ್ತಿದೆ ಎಂಬ ಆರೋಪವಿದೆ. ಶೇ. 25 ರಷ್ಟು ಕಮಿಷನ್‌ ನೀಡಲಾಗುತ್ತಿದೆ ಎಂಬ ಆರೋಪಕೇಳಿ ಬಂದಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸ್ಮಾರ್ಟ್‌ ಸಿಟಿ ಯೋಜನೆ ಅವ್ಯವಹಾರ ಕುರಿತು ತನಿಖೆಗೆ ಸಿದ್ಧವಿದೆ. ಶಾಸಕರು ತಮಗೆ ಬೇಕಾದ ಹಾಗೆ ಯೋಜನೆ ರೂಪಿಸಿದ್ದಾರೆ. ರಾಜ್ಯದಲ್ಲಿ ನಮ್ಮಪಕ್ಷ ಅಧಿಕಾರಕ್ಕೆಬರುತ್ತದೆ. ಪಾಲಿಕೆಯಲ್ಲೂಅಧಿಕಾರಕ್ಕೆ ಬಂದ ಬಳಿಕ ಸೂಕ್ತ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಎರಡನೇ ರಾಜಧಾನಿ ಎಂದು ಘೋಷಣೆ ಮಾಡಿರುವ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಎರಡು ವರ್ಷಗಳಿಂದ ಸರ್ಕಾರ ಅಧಿವೇಶನ ನಡೆಸಿಲ್ಲ. ಉತ್ತರ ಕರ್ನಾಟಕ ಹಾಗೂ ಬೆÙಗಾವಿ ‌ ಬಗ್ಗೆ ಸರ್ಕಾರ ಉದಾಸೀನ ಮನೋಭಾವ ತೋರುತ್ತಿದೆ. ಬೆಳಗಾವಿ ಬಗ್ಗೆ ಅವರಿಗೆ ಅಭಿಮಾನ, ವಿಶ್ವಾಸ ಇಲ್ಲ ಎಂದು ಟೀಕಿಸಿದರು. ‌

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ಎಂ.ಬಿ. ಪಾಟೀಲ್‌, ಗುಜರಾತ ರಾಜ್ಯಸಭಾ ಸದಸ್ಯೆ ಯಮಿ ಯಜನಿಕ್‌, ಶಾಸಕರಾದ ಲಕ್ಷ್ಮಿà ಹೆಬ್ಟಾಳಕರ್‌, ಅಂಜಲಿ ನಿಂಬಾಳ್ಕರ್‌, ಗಣೇಶ ಹುಕೆ Ràರಿ, ಮಹಾಂತೇಶ ಕೌಜಲಗಿ, ಮಾಜಿ ಸಚಿವ ವೀರಕುಮಾರ ಪಾಟೀಲ್‌, ಮಾಜಿ ಶಾಸಕರಾದ ಕಾಕಾಸಾಂಬೆ ಪಾಟೀಲ್‌, ಫಿರೋಜ್‌ ಸೇಠ್, ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ನಗರ ಅಧ್ಯಕ್ಷ ರಾಜು ಸೇಠ, ಸುನೀಲ್‌ ಹಣಮನ್ನವರ ಇದ್ದರು.

ಟಾಪ್ ನ್ಯೂಸ್

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

11

Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.