ಎರಡೇ ದಿನದಲ್ಲಿ 645 ಜನ ಗುಣಮುಖ

Team Udayavani, Aug 24, 2020, 2:57 PM IST

ಎರಡೇ ದಿನದಲ್ಲಿ 645 ಜನ ಗುಣಮುಖ

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶನಿವಾರ ಹಾಗೂ ರವಿವಾರ ಎರಡು ದಿನಗಳ ಅವಧಿಯಲ್ಲಿ 448 ಮಂದಿಗೆ ಸೋಂಕು ತಗುಲಿದೆ. ಇನ್ನೊಂದೆಡೆ 645 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶನಿವಾರ 312 ಹಾಗೂ ರವಿವಾರ 136 ಜನರಿಗೆ ಸೋಂಕು ತಗುಲಿದೆ. ಜತೆಗೆ ಕ್ರಮವಾಗಿ 511 ಹಾಗೂ 134 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಎರಡು ದಿನಗಳ ಅವಧಿಯಲ್ಲಿ ಐವರು ಕೋವಿಡ್‌ದಿಂದ ಬಲಿಯಾಗಿದ್ದಾರೆ. 136 ಹೊಸ ಪ್ರಕರಣಗಳಿಂದ 9943 ಸೋಂಕಿತರು ಆಗಿದ್ದು, ಇಲ್ಲಿಯವರೆಗೆ 5851 ಜನ ಗುಣಮುಖರಾಗಿ ಬಿಡುಗಡೆ ಆದಂತಾಗಿದೆ.

ಜಿಲ್ಲಾಸ್ಪತ್ರೆಯಲ್ಲಿರುವ ಕೋವಿಡ್‌ ವಾರ್ಡ್‌ನಲ್ಲಿ ಸದ್ಯ 3936 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನವರೆಗೆ 78982 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 28355 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 6081 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 40610 ಜನರು 28 ದಿನಗಳ ಗೃಹ ನಿಗಾ ಅವ ಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 77686 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 65271 ವರದಿ ನಕಾರಾತ್ಮಕವಾಗಿದೆ. ಇನ್ನೂ 1558 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಒಟ್ಟು 156 ಜನ ಬಲಿಯಾದಂತಾಗಿದೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.

ಬೈಲಹೊಂಗಲ: ಸೋಂಕಿಗೆ ಇಬ್ಬರು ಬಲಿ : ಪಟ್ಟಣ 10 ಸೇರಿದಂತೆ ತಾಲೂಕಿನಲ್ಲಿ 14 ಕೋವಿಡ್‌ ಪ್ರಕರಣ ಕೇಸ್‌ ಕಂಡು ಬಂದಿದ್ದು ಇಬ್ಬರು ಮೃತರಾಗಿದ್ದಾರೆ. ಪಟ್ಟಣದ ವಿದ್ಯಾನಗರದ 72 ವರ್ಷದ ಮಹಿಳೆ, ಶಿವಾನಂದ ಭಾರತಿ ನಗರದ 3ನೆ ಕ್ರಾಸ್‌ 30, 25 ವರ್ಷದ ಯುವಕರು, ಸಾರ್ವಜನಿಕ ಆಸ್ಪತ್ರೆಯ 37 ವರ್ಷದ ಪುರುಷ, 32 ವರ್ಷದ ಮಹಿಳೆ, ಗುಂಡ್ಲುರು ಚಾಳದ 46 ವರ್ಷದ ಮಹಿಳೆ, ಶಿವಾನಂದ ಭಾರತಿ ನಗರದ 62 ವರ್ಷದ ಪುರುಷ, 57 ಮಹಿಳೆಗೆ ಸೋಂಕು ತಗುಲಿದೆ. ವಿನಾಯಕ ನಗರದ 58 ವರ್ಷದ ಪುರುಷ, ಬಸವ ನಗರದ 1ನೇ ಕ್ರಾಸಿನ 76 ವರ್ಷದ ಪುರುಷ ಸೋಂಕಿಗೆ ಮೃತಪಟ್ಟಿದ್ದಾರೆ. ಬೆಳವಡಿ, ಅಂಬಡಗಟ್ಟಿ, ಯರಗೊಪ್ಪ, ಹುಲಿಕಟ್ಟಿಯಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿವೆ. ಒಟ್ಟು 620 ಪ್ರಕರಣಗಳಲ್ಲಿ 135 ಸಕ್ರಿಯ ಪ್ರಕರಣಗಳಿವೆ. ರವಿವಾರ 13 ಜನ ಗುಣಮುಖರಾಗಿದ್ದಾರೆ ಎಂದು ತಾಲೂಕು ಆರೋಗ್ಯಾ ಧಿಕಾರಿ ಡಾ| ಎಸ್‌. ಎಸ್‌. ಸಿದ್ದನ್ನವರ ತಿಳಿಸಿದ್ದಾರೆ.

 ಕಾಗವಾಡ ತಾಲೂಕಲ್ಲಿ 83 ಜನರಿಗೆ ಸೋಂಕು : ತಾಲೂಕಿನಲ್ಲಿ ಶನಿವಾರ ಒಂದೇ ದಿನ 83 ಜನರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಸೋಂಕಿತರು ಕಾಗವಾಡ-41, ಜುಗೂಳ-24, ಐನಾಪುರ-9, ಶಿರಗುಪ್ಪಿ-4, ಉಗಾರ ಖುರ್ದ ಮತ್ತು ಲೋಕುರದಲ್ಲಿ ತಲಾ 2, ಉಗಾರ ಬುದ್ರುಕದಲ್ಲಿ ಓರ್ವನಲ್ಲಿ ಸೋಂಕು ಪತ್ತೆಯಾಗಿದೆ. ಬರೀ ಕಾಗವಾಡ ಒಂದೇ ಗ್ರಾಮದಲ್ಲಿ 41 ಸೋಂಕಿತರು ಕಂಡುಬಂದಿದ್ದು, ಎಲ್ಲ ಸೋಂಕಿತರನ್ನು ಹೋಂ ಐಸೋಲೇಶನ್‌ದಲ್ಲಿ ಇಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.