7 ಮಂದಿ ಗುಣಮುಖ
Team Udayavani, Jun 25, 2020, 2:16 PM IST
ಬೆಳಗಾವಿ: ಮಹಾರಾಷ್ಟ್ರದಿಂದ ಬೆಳಗಾವಿಗೆ ಆಗಮಿಸಿರುವ 20 ವರ್ಷದ ಯುವತಿಗೆ ಬುಧವಾರ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಂದೇ ದಿನ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಇನ್ನೂ 2004 ಜನರ ವರದಿ ಬರುವುದು ಬಾಕಿ ಇದೆ. ಸೋಂಕಿನಿಂದ ಸದ್ಯ 292 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ -19 ವಾರ್ಡ್‌ನಲ್ಲಿ ಸದ್ಯ 21 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಿಲ್ಲೆಯಲ್ಲಿ ಇಂದಿನವರೆಗೆ 22055 ಜನರ ಮೇಲೆ ನಿಗಾ ಇಡಲಾಗಿದೆ. ಇದುವರೆಗೆ 7078 ಜನರು 14 ದಿನಗಳ ಕಾಲ ಗೃಹ ನಿಗಾದಲ್ಲಿದ್ದರೆ, ಒಟ್ಟು 4159 ಜನರು 14 ದಿನಗಳ ಗೃಹ ನಿಗಾ ಪೂರ್ಣಗೊಳಿಸಿದ್ದರೆ, 10797 ಜನರು 28 ದಿನಗಳ ಗೃಹ ನಿಗಾ ಅವಧಿ ಮುಕ್ತಾಯಗೊಳಿಸಿದ್ದಾರೆ. ಇಂದಿನವರೆಗೆ 20759 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, 17971 ವರದಿ ನಕಾರಾತ್ಮಕವಾಗಿದೆ. ಒಟ್ಟು 2004 ಜನರ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 314 ಆಗಿದ್ದು, ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಎಂಟು ಜನರಿದ್ದಾರೆ. ಹಿರೇಬಾಗೇವಾಡಿಯ ವೃದ್ಧೆ ಕೋವಿಡ್‌ದಿಂದ ಮೃತಪಟ್ಟಿದ್ದಾಳೆ ಎಂದು ಜಿಲ್ಲಾ ವೈದ್ಯಕೀಯ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.