ದಶಕವಾದರೂ ಪೂರ್ಣಗೊಳ್ಳದ ಸೇತುವೆ


Team Udayavani, Mar 10, 2020, 3:49 PM IST

bg-tdy-1

ಚಿಕ್ಕೋಡಿ: ಕೃಷ್ಣಾ ನದಿಗೆ ನಿರ್ಮಾಣವಾಗುತ್ತಿರುವ ಚೆಂದೂರ ಟೇಕ್‌-ಟಾಕಳಿ ಮಾರ್ಗದ ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತು ಒಂದು ದಶಕ ಸಮೀಪಿಸಿದೆ. ಆದರೂ ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಮನಸ್ಸು ಮಾಡುತ್ತಿಲ್ಲ, ಹೀಗಾಗಿ ಸರ್ಕಾರದ ಧೋರಣೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕುತ್ತಿದ್ದಾರೆ.

ನೆರೆಯ ಮಹಾರಾಷ್ಟ್ರ ಹಾಗೂ ಕರ್ನಾಟಕಕ್ಕೆ ಸಂಪರ್ಕ ಕಲ್ಪಿಸುವ ಚೆಂದೂರ ಟೇಕ್‌-ಟಾಕಳಿ ಮಾರ್ಗದ ಸೇತುವೆ ನಿರ್ಮಾಣ ಕಾಮಗಾರಿಗೆ ರಾಜ್ಯ ಸರ್ಕಾರ 18.17 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಕಳೆದ 2013ರಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ (ಕೆಆರ್‌ಡಿಸಿಎಲ್‌)ದಿಂದ ಮಂಜೂರಾಗಿದ್ದು, 2015ರಲ್ಲಿ ಕಾಮಗಾರಿ ಆರಂಭವಾಗಿದೆ. ಆದರೆ ಅಲ್ಲಿಂದ ಇಲ್ಲಿಯವರಿಗೆ ಸೇತುವೆ ಕಾಮಗಾರಿ ಶೇ 20ರಷ್ಟ್ರು ಮಾತ್ರ ಮುಗಿದಿದೆ ಉಳಿದ ಕಾಮಗಾರಿ ಬಾಕಿ ಉಳಿದುಕೊಂಡಿದೆ. ಸೇತುವೆ ಪೂರ್ಣಗೊಳಿಸಲು ಸರ್ಕಾರಕ್ಕೆ ಎಷ್ಟು ವರ್ಷ ಕಾಲಾವಕಾಶ ಬೇಕಾಗುತ್ತದೆ ಎನ್ನುವುದು ಸ್ಥಳೀಯ ರೈತರ ಪ್ರಶ್ನೆ.

ರಾಜ್ಯದ ಗಡಿ ಭಾಗದ ಜನರು ನೆರೆಯ ಮಹಾರಾಷ್ಟ್ರದ ಸುಕ್ಷೇತ್ರ ನರಸಿಂಹವಾಡಿ, ಖೇದರಾಪುರ ಹಾಗೂ ಮುಂತಾದ ಕಡೆಗಳಿಗೆ ಹೋಗಲು ಈ ಸೇತುವೆ ತುಂಬ ಅನುಕೂಲಕರವಾಗಲಿದೆ. ಅದರಂತೆ ಮಹಾರಾಷ್ಟ್ರದ ಜನರು ಸಹ ರಾಜ್ಯಕ್ಕೆ ಆಗಮಿಸಲು ಈ ಸೇತುವೆ ಉಪಯುಕ್ತವಾಗಲಿದೆ. ಈ ಸೇತುವೆ ಮಂಜೂರಾದ ಹೊತ್ತಿನಲ್ಲಿ ಎರಡು ರಾಜ್ಯದ ಗಡಿ ಭಾಗದ ಜನರು ಸಂತಸ ಪಟ್ಟಿದ್ದರು. ಆದರೆ ಸೇತುವೆ ಮಂಜೂರಾಗಿ ಒಂದು ದಶಕ ಸಮೀಪಿಸಿದರೂ ಕಾಮಗಾರಿ ಮಾತ್ರ ಪೂರ್ಣಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಉಭಯ ರಾಜ್ಯಗಳ ಸಂಪರ್ಕ ಕೊಂಡಿ: ನೆರೆಯ ಮಹಾರಾಷ್ಟ್ರ ಹಾಗೂ ರಾಜ್ಯ ಗಡಿ ಭಾಗದಲ್ಲಿ ಹತ್ತಾರು ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುವುದರಿಂದ ಗಡಿ ಭಾಗದ ರೈತರು ಬೆಳೆದ ಕಬ್ಬು ಕಳಿಸಲು ಅನುಕೂಲವಾಗುವ ಉದ್ದೇಶದಿಂದ ಚಿಕ್ಕೋಡಿ-ಸದಲಗಾ ಅಂದಿನ ಶಾಸಕ ಪ್ರಕಾಶ ಹುಕ್ಕೇರಿ ಅವರು ಈ ಸೇತುವೆ ಮಂಜೂರು ಮಾಡಿಸಿಕೊಂಡು ಬಂದಿದ್ದರು. ನಂತರದ ದಿನಗಳಲ್ಲಿ ಪ್ರಕಾಶ ಹುಕ್ಕೇರಿ ಅವರು ಸಚಿವರಾಗಿ, ಸಂಸದರಾಗಿ ಸೇವೆ ಸಲ್ಲಿಸಿದರೂ ಅವರ ಅವಧಿಯಲ್ಲಿ ಸೇತುವೆ ಕಾಮಗಾರಿ ಮುಕ್ತಿ ಕಂಡಿಲ್ಲ.

ಸೇತುವೆ ನಿರ್ಮಾಣಕ್ಕಿಲ್ಲ ಅಡ್ಡಿ: ಸೇತುವೆ ನಿರ್ಮಾಣಕ್ಕೆ ಆರಂಭದಲ್ಲಿ ಸ್ಥಳೀಯ ರೈತರು ವಿರೋಧ ವ್ಯಕ್ತಪಡಿಸಿದ್ದರು. ಸೇತುವೆ ನಿರ್ಮಾಣದಿಂದ ರಸ್ತೆಗೆ ಭೂಮಿ ಕೊಡಬೇಕಾಗುತ್ತದೆ. ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತರು ಬೇಡಿಕೆ ಇಟ್ಟಿದ್ದರು. ಹಿಂದಿನ ಜಿಲ್ಲಾಧಿಕಾರಿ ಎನ್‌.ಜಯರಾಮ್‌ ಅವರು ಸೇತುವೆ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಸೂಕ್ತ ಪರಿಹಾರ ಒದಗಿಸಿ ಶೀಘ್ರ ಸೇತುವೆ ಕಾಮಗಾರಿ ಮುಕ್ತಾಯಗೊಳಿಸಬೇಕೆಂದು ಕೆಆರ್‌ಡಿಸಿಎಲ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಆದರೆ ಇಲ್ಲಿಯವರೆಗೆ ಸೇತುವೆ ಕಾಮಗಾರಿ ಮಾತ್ರ ಆರಂಭವಾಗದೇ ಇರುವುದು ವಿಪರ್ಯಾಸ.

ನೆರೆಯಲ್ಲಿ ಕೊಚ್ಚಿ ಹೋದ ಸೇತುವೆ ಸಲಕರಣೆ: ಅರ್ಧಕ್ಕೆ ನಿಂತು ಹೋದ ಸೇತುವೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಒತ್ತಡ ಹಾಕಿದಾಗ ಸಿಮೆಂಟ್‌, ಕಬ್ಬಿಣ ಮುಂತಾದ ಸಲಕರಣೆಗಳನ್ನು ತಂದು ನದಿ ಬದಿಯಲ್ಲಿ ಇಟ್ಟಿದ್ದರು. ಆದರೆ ಭೀಕರ ಪ್ರವಾಹಕ್ಕೆ ಸೇತುವೆ ಸಲಕರಣೆಗಳು ಕೊಚ್ಚಿಕೊಂಡು ಹೋಗಿದ್ದರಿಂದ ಕಾಮಗಾರಿ ಮುಂದುವರಿಸಲು ವಿಳಂಬವಾಗಿದೆ ಎನ್ನುತ್ತಾರೆ ಕೆಆರ್‌ಡಿಸಿಎಲ್‌ ಅಧಿಕಾರಿಗಳು.

ಚೆಂದೂರ ಟೇಕ್‌-ಟಾಕಳಿ ಸೇತುವೆ 2013ರಲ್ಲಿ ಮಂಜೂರಾಗಿದೆ. ಆದರೆ ಇನ್ನೂವರೆಗೂ ಸೇತುವೆ ಕಾಮಗಾರಿ ಮುಕ್ತಾಯವಾಗಿಲ್ಲ. ನದಿಯಲ್ಲಿ ನಾಲ್ಕು ಪಿಲ್ಲರ್‌ ನಿಲ್ಲಿಸಿ ಐದಾರು ವರ್ಷ ಕಳೆದಿವೆ. ಈಗಲಾದರೂ ಸರ್ಕಾರ ಗುಣಮಟ್ಟದ ಸೇತುವೆ ನಿರ್ಮಾಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಲು ಮುಂದಾಗಬೇಕು.  –ಮನೋಜ ಖೀಚಡೆ, ಚೆಂದೂರ ಗ್ರಾಮಸ್ಥರು.

 

-ಮಹಾದೇವ ಪೂಜೇರಿ

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.