ಗಡಿ ಗ್ರಾಮ ಮಂಗಸೂಳಿಯಲ್ಲಿ ಅದ್ಧೂರಿ ರಾಜ್ಯೋತ್ಸವ

ಸಂಸ್ಕೃತಿಯನ್ನು ಪ್ರೀತಿಸುತ್ತ, ಗೌರವಿಸುತ್ತ ಬರುತ್ತಿರುವುದಕ್ಕೆ ಇಂದಿನ ಭವ್ಯ ಮೆರವಣಿಗೆಯೇ ಸಾಕ್ಷಿ ಎಂದರು.

Team Udayavani, Nov 2, 2021, 7:32 PM IST

ಗಡಿ ಗ್ರಾಮ ಮಂಗಸೂಳಿಯಲ್ಲಿ ಅದ್ಧೂರಿ ರಾಜ್ಯೋತ್ಸವ

ಕಾಗವಾಡ: ಅನೇಕ ವರ್ಷಗಳ ಬಳಿಕ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ತಾಲೂಕಾಡಳಿತ ಅಧಿಕಾರಿಗಳ ವಿಶೇಷ ಪ್ರಯತ್ನದಿಂದ ನ. 1 ರಂದು ಕನ್ನಡ ಹಾಗೂ ಮರಾಠಿ ಭಾಷಿಕರು ಒಗ್ಗೂಡಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸಿದರು.

ಸೋಮವಾರ ಮಂಗಸೂಳಿ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ತಹಶೀಲ್ದಾರ ರಾಜೇಶ ಬುರಲಿ, ಅಥಣಿ ಸಿಪಿಐ ಶಂಕರಗೌಡ ಬಸನಗೌಡರ, ಗ್ರಾಮ ಪಂಚಾಯತಿ ಅಧ್ಯಕ್ಷೆ ಸರೀತಾ ಪಾಟೀಲ, ಎಪಿಎಂಸಿ ಸಂಚಾಲಕ ರವೀಂದ್ರ ಪೂಜಾರಿ, ಸೇರಿದಂತೆ ಎಲ್ಲ ಅಧಿಕಾರಿಗಳು, ಚುನಾಯಿತ ಸದಸ್ಯರು ತಾಯಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಆಚರಿಸಿದರು.

ಎಪಿಎಂಸಿ ಸಂಚಾಲಕ ರವೀಂದ್ರ ಪೂಜಾರಿ ಮಾತನಾಡಿ, ಗಡಿ ಭಾಗದ ಮಂಗಸೂಳಿ ಗ್ರಾಮ ಮರಾಠಿ ಸಂಸ್ಕೃತಿಯ ಊರು. ಕೆಲವು ಮರಾಠಿ ಸಹೋದರರು ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮಕ್ಕೆ ಕಾರಣಾಂತರಗಳಿಂದ ವಿರೋಧ ಮಾಡುತ್ತ ಬಂದಿದ್ದರು. ಇತ್ತೀಚೆಗೆ ಕನ್ನಡ ವಾತಾವರಣ ಗ್ರಾಮದಲ್ಲಿ ಗಟ್ಟಿಗೊಳ್ಳುತ್ತಿದೆ. ಮರಾಠಿಗರು ಕೂಡ ಕನ್ನಡ ಭಾಷೆ, ಸಂಸ್ಕೃತಿಯನ್ನು ಪ್ರೀತಿಸುತ್ತ, ಗೌರವಿಸುತ್ತ ಬರುತ್ತಿರುವುದಕ್ಕೆ ಇಂದಿನ ಭವ್ಯ ಮೆರವಣಿಗೆಯೇ ಸಾಕ್ಷಿ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಅಮರ ಪಾಟೀಲ, ಅಭಯ ಪಾಟೀಲ, ಪಿಎಸ್‌ಐ ಬಿ.ಎಂ.ರಬಕವಿ, ತಾಲೂಕಾ ಪಂಚಾಯತಿ ಇಒ ವೀರಣಗೌಡ ಎಗಣಗೌಡರ, ಉಪತಹಶೀಲ್ದಾರ ಅಣ್ಣಾಸಾಹೇಬ ಕೋರೆ, ಪಿಕೆಪಿಎಸ್‌ ಅಧ್ಯಕ್ಷ ಸಂಜಯ ಶೆಟ್ಟಿ, ವ್ಯಾಪಾರಿ ಸಂಘಟನೆಯ ಅಧ್ಯಕ್ಷ ರಾಜು ಶೆಟ್ಟಿ, ಕರವೇ ಅಧ್ಯಕ್ಷ ಪ್ರಮೋದ ಪೂಜಾರಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಪಂ ಸದಸ್ಯರು, ದಲಿತ ಮುಖಂಡ ಸಂಜಯ ತಳವಲಕರ, ಪಿಡಿಒ ಮಲ್ಲಯ್ನಾ ಹಿರೇಮಠ, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.

ಕರಾಳ ದಿನಕ್ಕೆ ಬ್ರೇಕ್‌: ಮಂಗಸೂಳಿ ಗ್ರಾಮದಲ್ಲಿ ನವೆಂಬರ್‌ 1 ರಂದು ಮರಾಠಿಗರು ತಮ್ಮ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕರಾಳ ದಿನ ಆಚರಿಸುವ ಮೂಲಕ ಉದ್ಧಟತನ ಪ್ರದರ್ಶಿಸುತ್ತಿದ್ದರು. ಆದರೆ ಈ ವರ್ಷ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಯವರ ಆದೇಶದ ಮೇರೆಗೆ ಡಿವೈಎಸ್‌ಪಿ ಎಸ್‌.ವಿ.ಗಿರೀಶ, ತಹಶೀಲ್ದಾರ್‌ ರಾಜೇಶ ಬುರಲಿ, ಸಿಪಿಐ ಶಂಕರಗೌಡ ಬಸಗೌಡರ, ಪಿಎಸ್‌ಐ ಬಿ.ಎಂ.ರಬಕವಿ ನೇತೃತ್ವದಲ್ಲಿ ಕರಾಳ ದಿನ ಆಚರಿಸದಂತೆ ಮರಾಠಿಗರಿಗೆ ಖಡಕ್‌ ಎಚ್ಚರಿಕೆ ನೀಡಿ ಕರಾಳ ದಿನಾಚರಣೆಗೆ ಬ್ರೇಕ್‌ ಹಾಕಿದ್ದಾರೆ.

ಟಾಪ್ ನ್ಯೂಸ್

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

Bareilly Court: ಪ್ಯಾಲೆಸ್ತೀನ್‌ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್‌

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.