ಕೊರೊನಾ ವಿರುದ್ಧ ಅಗತ್ಯ ಮುನ್ನೆಚ್ಚರಿಕೆ
Team Udayavani, Mar 7, 2020, 2:28 PM IST
ಬೆಳಗಾವಿ: ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿರುವ ಕೊರೊನಾ (ಕೋವಿಡ್ 19) ವೈರಸ್ ನಿಯಂತ್ರಣಕ್ಕೆ ಹಾಗೂ ಜಿಲ್ಲೆಯಲ್ಲಿ ಸೋಂಕಿತರು ಕಂಡುಬಂದಲ್ಲಿ ತಕ್ಷಣವೇ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜನರು ಭಯಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅಭಯ ನೀಡಿದರು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸಮೀಕ್ಷಾ ಘಟಕದ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೊನಾ ವೈರಸ್‌ಗೆ ಸಂಬಂಧಿಸಿದಂತೆ ಸರ್ಕಾರವು ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾಮಾಜಿಕ ಜಾಲತಾಣಗಳು ಮತ್ತು ಕೆಲ ಮಾಧ್ಯಮಗಳಲ್ಲಿನ ತಪ್ಪು ಮಾಹಿತಿಗಳಿಂದ ಜನರ ಆತಂಕ ಹೆಚ್ಚಾಗಿದೆ. ಕಾರಣ ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸೋಂಕಿತರಿಗೆ ತುರ್ತು ಚಿಕಿತ್ಸೆ ನೀಡಲು ಅಗತ್ಯವಿರುವ ಪ್ರತ್ಯೇಕ ವಾರ್ಡ್‌ಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ ಸ್ಥಾಪಿಸಲಾಗಿದ್ದು, ಅದೇ ರೀತಿ ತಾಲೂಕಾ ಆಸ್ಪತ್ರೆಗಳಲ್ಲೂ ಪ್ರತ್ಯೇಕ ವಾರ್ಡ್‌ಗಳನ್ನು ಸ್ಥಾಪಿಸಬೇಕು. ಅಗತ್ಯ ಔಷಧಿಗಳ ಸಂಗ್ರಹ ಮಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಬೆಳಗಾವಿಯಲ್ಲಿ 9 ಜನರಿಗೆ ಕೊರೊನಾ ವೈರಸ್ ತಗುಲಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಹರಿದಾಡಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು. ಜನರಲ್ಲಿ ಇರುವ ಆತಂಕ ದೂರ ಮಾಡಲು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ತಾಲೂಕಾ ಪಂಚಾಯತಿಗಳಲ್ಲಿ ಜಾಗೃತಿ ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಾ ಆಸ್ಪತ್ರೆಗಳಲ್ಲಿ ಕೊರೊನಾ ಪ್ರಕರಣಗಳು ಕಂಡು ಬಂದರೆ ಅಲ್ಲಿನ ವೈದ್ಯರು ತಕ್ಷಣ ಜಿಲ್ಲಾ ಆಸ್ಪತ್ರೆಯ ವೈದ್ಯರಿಗೆ ತಿಳಿಸಬೇಕು. ಪ್ರತಿ ಶಾಲೆಯಲ್ಲಿ ಪ್ರಾರ್ಥನೆಯ ಸಮಯದಲ್ಲಿ ಮಕ್ಕಳಿಗೆ ಕೊರೊನಾ ವೈರಸ್ ಕುರಿತು ಮಾಹಿತಿ ನೀಡಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಲೈಸೆನ್ಸ್ ರದ್ದುಗೊಳಿಸುವ ಎಚ್ಚರಿಕೆ: ಕೊರೊನಾ ವೈರಸ್ ಹರಡುವ ಭೀತಿಯಿಂದ ಹೆಚ್ಚಿನ ಸಂಖ್ಯೆಯ ಜನರು ಮಾಸ್ಕ್ ಗಳನ್ನು ಖರೀದಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಔಷಧ ಅಂಗಡಿಗಳು ಅಥವಾ ಔಷಧ ಮಳಿಗೆಗಳುಎಂ.ಆರ್.ಪಿ. ದರಕ್ಕಿಂತ ಹೆಚ್ಚಿನ ಹಣ ಪಡೆದುಕೊಂಡರೆ ಅಂತಹ ಅಂಗಡಿಗಳ ಲೈಸೆನ್ಸ್ ರದ್ದು ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದರು.
ಮಾಸ್ಕ್ಗಳನ್ನು ಯಾರಾದರೂ ರಸ್ತೆಬದಿ ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಬಗ್ಗೆ ಡ್ರಗ್ಸ್ ಕಂಟ್ರೋಲರ್ ಮತ್ತು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ನಾಗರಿಕರಲ್ಲಿ ಮನವಿ ಮಾಡಿದರು. ಜಿಲ್ಲೆಯಲ್ಲಿ ನಡೆಯುವ ಜಾತ್ರೆಗಳು ಮತ್ತು ಹೋಳಿ ಹಬ್ಬದ ಸಂದರ್ಭಗಳಲ್ಲಿ ಜನದಟ್ಟಣೆ ಹೆಚ್ಚಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ಸೋಂಕು ತಗುಲದಂತೆ ಯಾವ ರೀತಿ ಮುನ್ನೆಚ್ಚರಿಕೆ ವಹಿಸಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಬೇಕು. ಜನರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾತ್ರೆಗೆ ಬರುವ ಭಕ್ತಾದಿಗಳು ಪರಸ್ಪರ ದೂರದಿಂದಲೇ ಸಂವಹನ ನಡೆಸಬೇಕು. ಹೋಳಿ ಹಬ್ಬದ ಹಿನ್ನಲೆ ರಾಸಾಯನಿಕ ಬಣ್ಣಗಳ ಬದಲಿಗೆ ಜೈವಿಕ ಬಣ್ಣಗಳನ್ನು ಉಪಯೋಗಿಸುವಂತೆ ಜನರಿಗೆ ತಿಳಿಸಬೇಕು ಎಂದು ಹೇಳಿದರು.
ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ಬಿ.ಎನ್ ತುಕ್ಕಾರ ಮಾತನಾಡಿ, ಭಾರತದಲ್ಲಿ 29 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಕೇರಳದಲ್ಲಿ ಕಂಡು ಬಂದಿದ್ದ 3 ಕೊರೊನಾ ಪ್ರಕರಣಗಳಲ್ಲಿ ರೋಗಿಗಳು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ. ಪ್ರಕರಣಗಳನ್ನು ಪತ್ತೆ ಹಚ್ಚಲು ಸೋಂಕಿತರ ರಕ್ತದ ಮಾದರಿಗಳನ್ನು ಪುಣೆ ಮತ್ತು ಬೆಂಗಳೂರಿನ ಪ್ರಯೋಗಾಲಯಗಳಿಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಲಾಗಿದೆ ಎಂದರು.
ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ, ಎದೆನೋವು, ತೀವ್ರ ಎದೆಬಡಿತ, ಕಿಡ್ನಿ ವೈಫಲ್ಯ, ತಲೆನೋವು, ಗಂಟಲು ನೋವು, ಹಾಗೂ ಭೇದಿ ಇವು ಕೊರೊನಾ ಸೋಂಕಿನ ಲಕ್ಷಣಗಳಾಗಿವೆ. ಸಾಮಾನ್ಯ ಫೋ ಹರಡುವ ರೀತಿಯಲ್ಲಿಯೇ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ ಅಥವಾ ಸೀನಿದಾಗ ಈ ವೈರಸ್‌ಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗು, ಬಾಯಿ ಪದೇ ಪದೆ ಮುಟ್ಟಿಕೊಳ್ಳುವುದರಿಂದ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ ಎಂದರು.
ಜಿಪಂ ಸಿಇಒ ಡಾ. ರಾಜೇಂದ್ರ ಕೆ.ವಿ ಮಾತನಾಡಿ, ವಿದೇಶಗಳಿಂದ ಬರುವ ಪ್ರಯಾಣಿಕರ ಬಗ್ಗೆ ಮಾಹಿತಿ ಕಲೆ ಹಾಕಬೇಕು. ಅಂತಾರಾಷ್ಟ್ರಿಯ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ವೈರಸ್ ಹರಡುವದನ್ನು ತಡೆಯಲು ತೀವ್ರ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಆದರೆ ಸಂಪರ್ಕ ವಿಮಾನಗಳ ಮೂಲಕ ಬರುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸಬೇಕು ಎಂದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ಜಗದೀಶ ಕೆ.ಎಚ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ವಿ.ಮುನ್ಯಾಳ, ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.