ಅಂಗಾಂಗ ದಾನ ಮಾಡಿ ನಾಲ್ವರ ಜೀವ ಉಳಿಸಿದ ಹಳ್ಳಿ ಯುವಕ
ಯುವಕ ಮೃತಪಟ್ಟರೂ ಸಹ ನಾಲ್ಕು ಜನರ ಜೀವ ಉಳಿಸಿ ಸಾರ್ಥಕತೆ ಮೆರೆದರು
Team Udayavani, Jul 23, 2022, 6:24 PM IST
ಬೆಳಗಾವಿ: ಖಾನಾಪೂರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡು ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕಿತ್ಸೆ ಪಡೆಯುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ 26 ವರ್ಷದ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ ನಾಲ್ಕು ಜನರ ಜೀವ ಉಳಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.
ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗೆ ಕಸಿ ಮಾಡಲು ಅಣಿಯಾದರೆ, ಲೀವರ (ಜಠರ) ಅನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬ್ ಹಾಗೂ ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ಕಳಿಸಿಕೊಡಲಾಯಿತು. ಪೊಲೀಸರು ಸಂಪೂರ್ಣವಾಗಿ ಜೀರೋ ಟ್ರಾಫಿಕ್ ಅಥವಾ ಗ್ರೀನ ಕಾರಿಡಾರ್ (ಹಸಿರು ಪಥ) ಮೂಲಕ ಅಂಗಾಂಗಗಳನ್ನು ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಖಾನಾಪೂರ ತಾಲೂಕಿನ ಜಾಂಬೋಟಿ ಸಮೀಪದ ಅಮಟೆ ಗ್ರಾಮದ ನಿವಾಸಿ ಸಹದೇವ ಅರ್ಜುನ ಗಾಂವಕರ(26) ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಮೆದುಳಿಗೆ ತೀವ್ರತರವಾದ ಗಾಯವಾಗಿದ್ದರಿಂದ ಚಿಕಿತ್ಸೆಗೆ ಸ್ಪಂದಿಸದೇ ನಿಷ್ಕ್ರಿಯಗೊಂಡಿತ್ತು. ಆದರೆ ಉಳಿದ ಅಂಗಾಂಗಗಳು ಕಾರ್ಯನಿರ್ವಹಿಸುತ್ತಿದ್ದವು.
ಮೆದುಳು ನಿಷ್ಕ್ರಿಯಗೊಂಡ ಯುವಕನ ತಂದೆ-ತಾಯಿ ಹಾಗೂ ಕುಟುಂಬ ಸದಸ್ಯರ ಜೊತೆ ಆಪ್ತಸಮಾಲೋಚನೆ ಮಾಡಿ, ನಿಮ್ಮ ಮಗ ನೀಡುವ ಅಂಗಾಂಗಗಳಿಂದ ಇನ್ನೊಬ್ಬರ ಜೀವ ಉಳಿಯುತ್ತದೆ ಎಂದು ಹೇಳಿದಾಗ ಕುಟುಂಬದ ಸದಸ್ಯರು ಸ್ವಇಚ್ಛೆಯಿಂದ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿದರು.
ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಹೃದಯವನ್ನು ಕೆಎಲ್‌ಇ ಸಂಸ್ಥೆಯ ಡಾ| ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಗೆ ಕಸಿ ಮಾಡುವಲ್ಲಿ ವೈದ್ಯರು ನಿರತರಾದರೆ, ಲೀವರ್ ಅನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದವರಗೆ ರಸ್ತೆ ಮೂಲಕ ಸಾಗಿಸಿ ಅಲ್ಲಿಂದ ಬೆಂಗಳೂರಿಗೆ ಮತ್ತು ಎರಡೂ ಕಿಡ್ನಿಗಳನ್ನು ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ರವಾನಿಸಲಾಯಿತು. ಯುವಕ ಮೃತಪಟ್ಟರೂ ಸಹ ನಾಲ್ಕು ಜನರ ಜೀವ ಉಳಿಸಿ ಸಾರ್ಥಕತೆ ಮೆರೆದರು.
ಅಂಗಾಂಗಗಳನ್ನು ಸಾಗಿಸುವ ಕಾರ್ಯದಲ್ಲಿ ಬೆಳಗಾವಿ ಹಾಗೂ ಹುಬ್ಬಳ್ಳಿ-ಧಾರವಾಡ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ನೀಡಿದ ಸಹಕಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಅತ್ಯಂತ ಜನಸಂದಣಿ ಹಾಗೂ ಸಂಚಾರ ದಟ್ಟಣೆಯಿಂದ ಕೂಡಿದ ರಸ್ತೆಯಲ್ಲಿ ಗ್ರೀನ್ ಕಾರಿಡಾರ್ ನಿರ್ಮಿಸಿ ಅಂಗಾಂಗಗಳನ್ನು ಶೀಘ್ರ ಸ್ಥಳಾಂತರಿಸಲು ಅವಕಾಶ ಕಲ್ಪಿಸಿಕೊಟ್ಟರು.
ಇದಕ್ಕೂ ಮೊದಲು ನಗರದ ವಿಜಯಾ ಆಸ್ಪತ್ರೆಯಲ್ಲಿ ಯುವಕನನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿಯೇ ಮೆದುಳು ಗಂಭೀರ ಸ್ಥಿತಿಗೆ ತಲುಪಿದಾಗ ವಿಜಯಾ ಆಸ್ಪತ್ರೆಯ ಡಾ| ರವಿ ಪಾಟೀಲ ಅವರ ತಂಡ, ಅಮಟೆ ಗ್ರಾಮದ ಹಿರಿಯ ಅರ್ಜುನ ಕಸಲೇಕರ, ಅಭಿಮನ್ಯು ಡಾಗಾ, ಸಮಾಜ ಸೇವಕ ವಿಜಯ ಮೋರೆ ಮೊದಲಾದವರು ಈ ಕಾರ್ಯದಲ್ಲಿ ಸಹಕಾರ ನೀಡಿದರು. ಈ ಸಂದರ್ಭದಲ್ಲಿ ಡಾ| ಬಸವರಾಜ ಬಿಜ್ಜರಗಿ ಉಪಸ್ಥಿತರಿದ್ದರು. ಅಂಗಾಂಗಗಳನ್ನು ದಾನ ಮಾಡಿದ ವ್ಯಕ್ತಿ ಹಾಗೂ ಆತನ ಕುಟುಂಬ ಸದಸ್ಯರ ಕಾರ್ಯವನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ| ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿ ಸದಸ್ಯರು, ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ| ಎಂ ವಿ ಜಾಲಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.