ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
Team Udayavani, Mar 28, 2024, 2:51 PM IST
ಬೆಳಗಾವಿ: ಈ ಬಾರಿ ತೆಲಂಗಾಣ ರಾಜ್ಯದ 17 ಕ್ಷೇತ್ರಗಳ ಪೈಕಿ, 10ಕ್ಕೂ ಅಧಿಕ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ’ ಎಂದು ಲೋಕಸಭೆ ಚುನಾವಣೆಯ ತೆಲಂಗಾಣದ ಉಸ್ತುವಾರಿ ವಹಿಸಿಕೊಂಡಿರುವ ಬಿಜೆಪಿ ಶಾಸಕ ಅಭಯ ಪಾಟೀಲ ಹೇಳಿದರು.
ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೆಲಂಗಾಣದ ನಾಯಕರು ಹಾಗೂ ಬಿಜೆಪಿ ಚುನಾವಣಾ ಸಮಿತಿ ಭೇಟಿಯಾಗಿ, ಚುನಾವಣೆಯಲ್ಲಿ ಗೆಲ್ಲಲು ಯೋಜನೆ ರೂಪಿಸುತ್ತೇವೆ. ವಾರದಲ್ಲಿ ಮೂರು ದಿನ ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ಮೂರು ದಿನ ತೆಲಂಗಾಣದಲ್ಲಿ ಪ್ರಚಾರ ಮಾಡುತ್ತೇನೆ ಎಂದರು.
ತೆಲಂಗಾಣದಲ್ಲಿ 10ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸುವ ಜವಾಬ್ದಾರಿ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ.
ಈಗ ಚಿಕ್ಕೋಡಿ ಮತ್ತು ತೆಲಂಗಾಣ ಎರಡೂ ಕ್ಷೇತ್ರಗಳಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದು ಚಿಕ್ಕೋಡಿ ಉಸ್ತುವಾರಿ ಹಿಂದಕ್ಕೆ ಪಡೆಯುವಂತೆ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ಹೇಳಿದರು.
ಜಗದೀಶ ಶೆಟ್ಟರ್ ಸಾಂಕೇತಿಕವಾಗಿ ಬಿಜೆಪಿ ಅಭ್ಯರ್ಥಿ ಇರಬಹುದು. ಆದರೆ, ನಮ್ಮ ಪಕ್ಷದ ಪ್ರತಿ ಕಾರ್ಯಕರ್ತನೂ ಇಲ್ಲಿ ಅಭ್ಯರ್ಥಿಯೇ. ಸ್ವಾಭಿಮಾನದ ಬಗ್ಗೆ ಚರ್ಚೆ ಮಾಡಲು ಇಡೀದಿನ ಬೇಕಾಗುತ್ತದೆ. ಸೋನಿಯಾ ಗಾಂಧಿ ಕರ್ನಾಟಕಕ್ಕೆ ಬಂದು ಸ್ಪರ್ಧಿಸಿದಾಗ, ನಿಮ್ಮ ಸ್ವಾಭಿಮಾನ ಎಲ್ಲಿಗೆ ಹೋಗಿತ್ತು ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.
ಈ ಚುನಾವಣೆಯಲ್ಲಿ ನಾನು ಮನೆಯಲ್ಲಿ ಆರಾಮಾಗಿ ಕೂರುತ್ತೇನೆ’ ಎಂದು ತಾವು ನೀಡಿದ ಹೇಳಿಕೆಯ ವಿಡಿಯೊ ಜಾಲತಾಣದಲ್ಲಿ ಹರಿದಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅಭಯ ಅದು ಕಟ್ ಆ್ಯಂಡ್ ಪೇಸ್ಟ್ ಆಗಿರುವ ವಿಡಿಯೊ. ಈ ಹಿಂದೆ ಹಿರೇಬಾಗೇವಾಡಿ ಶಾಸಕನಿದ್ದಾಗ ಪಕ್ಷವನ್ನು ಬಹಳಷ್ಟು ಸಂಘಟಿಸಿದ್ದೇನೆ. ಈಗ ಕಡಿಮೆ ಓಡಾಡುತ್ತಿದ್ದೇನೆ ಎಂದು ಹೇಳಿದ್ದನ್ನು ಈಗ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ ಎಂದರು.
ಇದನ್ನೂ ಓದಿ: Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.