ಡ್ರಗ್ಸ್ ದಂಧೆ ತಡೆಗೆ ಎಬಿವಿಪಿ ಆಗ್ರಹ
Team Udayavani, Sep 4, 2020, 5:16 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಮಾದಕ ಪದಾರ್ಥಗಳ ವ್ಯವಹಾರದಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮಾದಕ ಪದಾರ್ಥಗಳ ಜಾಲ ದೊಡ್ಡಮಟ್ಟದಲ್ಲಿ ವ್ಯಾಪಿಸಿದೆ.ಕನ್ನಡ ಚಲನಚಿತ್ರ ರಂಗದ ನಟ-ನಟಿಯರು, ಪ್ರಭಾವಿಗಳು ಹಾಗೂ ರಾಜಕಾರಣಿಗಳ ಮಕ್ಕಳು ಇದರಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಶಾಲಾ- ಕಾಲೇಜುಗಳಲ್ಲೂ ಸಹ ಇದರ ದಂಧೆ ನಡೆಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಈ ಕಾರಣದಿಂದ ಇದರ ವ್ಯವಹಾರ ಹಾಗೂ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಿ ಶಿಸ್ತುಕ್ರಮ ಜರುಗಿಸಬೇಕು. ಇದನಿಯಂತ್ರಣಕ್ಕಾಗಿ ಕಠಿಣ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.
ಎಬಿವಿಪಿ ಮಹಾನಗರ ಘಟಕದ ಕಾರ್ಯದರ್ಶಿ ಕಿರಣ ದುಕಾನದಾರ್, ರೋಹಿತ್ ಉಮನಾಬಾದಿಮಠ, ಅಶ್ವಿನಿ ಕಂಚಿ, ಎಸ್.ಕಾರ್ತಿಕ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ : ಬೈಲಹೊಂಗಲ: ಡ್ರಗ್ಸ್ ದಂಧೆ ಹಿಂದಿರುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಉಪವಿಭಾಗಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದರು.
ಸ್ಯಾಂಡಲ್‌ವುಡ್‌ನೊಂದಿಗೆ ನಂಟಿರುವ ಡ್ರಗ್ಸ್ ಜಾಲವನ್ನು ಎನ್‌ಸಿಬಿ ಅಧಿಕಾರಿಗಳು ಬೇಧಿ ಸಿದ್ದು, ಪ್ರತಿಷ್ಠಿತ ಶ್ರೀಮಂತ ಕುಟುಂಬದ ವ್ಯಕ್ತಿಗಳು, ಸಿನಿಮಾ ನಟ-ನಟಿಯರು, ರಾಜಕಾರಣಿ ಮಕ್ಕಳು ಇದರ ಹಿಂದೆ ಇರುವ ಬಗ್ಗೆ ಆರೋಪ ಕೇಳಿ ಬರುತ್ತಿವೆ. ಡ್ರಗ್ಸ್ ಜಾಲದ ಪಿಡುಗಿನಿಂದ ದೇಶದ ಯುವಶಕ್ತಿಯನ್ನು ರಕ್ಷಿಸಲು ಡ್ರಗ್ಸ್ ಜಾಲವನ್ನು ಬುಡ ಸಮೇತ ನಿರ್ಮೂಲನೆ ಮಾಡಲು ರಾಜ್ಯ ಸರಕಾರ ಪ್ರಯತ್ನಿಸಬೇಕು.
ರಾಜ್ಯದ ಕೆಲ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್ ವರ್ಡ್‌ಗಳ ಮೂಲಕ ಈ ದಂಧೆ ನಡೆಸುತ್ತಿದೆ. ಇದರಿಂದ ಕಾಲೇಜಿನಲ್ಲಿ ಡ್ರಗ್ಸ್‌ಗೆ ದಾಸರಾಗಿದ್ದು, ಇದು ಒಂದು ಸಾಮಾಜಿಕ ಪಿಡುಗಾಗಿ ಪರಿಣಮಿಸಿ, ಒಂದು ರೀತಿಯ ಪ್ಯಾಶನ್ ಆಗಿ ಯುವಕರಲ್ಲಿ ಬೆಳೆಯುತ್ತಿದೆ. ಈ ಜಾಲದ ಹಿಂದಿರುವ ಪ್ರಭಾವಿಗಳ ಹಸ್ತಕ್ಷೇಪ, ಒತ್ತಡಕ್ಕೆ ಮಣಿಯದೆ ಪೊಲೀಸ್ ಇಲಾಖೆ ಸಂಪೂರ್ಣ ಸ್ವತಂತ್ರವಾಗಿ ತನಿಖೆ ನಡೆಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ. ಜಿಲ್ಲಾ ಸಂಚಾಲಕ ಸಿದ್ಧಾರೂಢ
ಹೊಂಡಪ್ಪನ್ನವರ, ತಾಲೂಕು ಸಂಚಾಲಕ ಅಪ್ಪಣ್ಣ ಹಡಪದ, ಸಚಿನ ತಲ್ಲೂರ, ಸಂಜು ಪಂಚನ್ನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.