ಸ್ಮಾರ್ಟ್ ಸಿಟಿ ಕಾಮಗಾರಿ ಚುರುಕುಗೊಳಿಸಿ


Team Udayavani, Oct 12, 2019, 12:38 PM IST

bg-tdy-1

ಬೆಳಗಾವಿ: ನಗರದಲ್ಲಿರುವ ದಂಡುಮಂಡಳಿಗೆ ಸೇರಿದ ಪ್ರದೇಶಗಳಲ್ಲಿ ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ ಅಥವಾ ಸಾರಿಗೆ ಸಂಸ್ಥೆಯ ಯಾವುದೇ ಕಾಮಗಾರಿ ಆರಂಭಿಸಲು ಅಥವಾ ಜಾಗ ಸ್ವಾಧೀನಕ್ಕೆ 2016ರ ಸುತ್ತೋಲೆಯ ಪ್ರಕಾರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿ ಸೂಕ್ತ ಅನುಮತಿ ಪಡೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್‌ ಅಂಗಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‌ಸಿಟಿ ಹಾಗೂ ನಗರೋತ್ಥಾನ ಯೋಜನೆಗಳ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಂಬಂಧಪಟ್ಟ ಇಲಾಖೆಗಳ ಜಂಟಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸ್ಮಾರ್ಟ್‌ಸಿಟಿ ಯೋಜನೆಯ ಯಾವುದೇ ಕಾಮಗಾರಿಗಳು ಬಾಕಿ ಉಳಿಯದಂತೆ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಮುಂಬರುವ ದಿನಗಳಲ್ಲಿ ದಂಡುಮಂಡಳಿಯ ವ್ಯಾಪ್ತಿಯ ಜಾಗದಲ್ಲಿ ಸ್ಮಾರ್ಟಸಿಟಿ ಯೋಜನೆಯಡಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಾದರೆ ಅದಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವ ಸಲ್ಲಿಸಿ ಅಗತ್ಯ ಅನುಮತಿ ಪಡೆದುಕೊಳ್ಳಬೇಕು ಎಂದು ಸ್ಮಾರ್ಟ್‌ಸಿಟಿ ಯೋಜನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಂಡುಮಂಡಳಿ ಅಧ್ಯಕ್ಷ ಹಾಗೂ ಎಂಎಲ್‌ಐಆರ್‌ಸಿ ಬ್ರಿಗೇಡಿಯರ್‌ ಗೋವಿಂದ ಕಾಲವಾಡ ಮಾತನಾಡಿ, ಮಹಾನಗರ ಪಾಲಿಕೆ ಅಥವಾ ಸ್ಮಾರ್ಟ್‌ಸಿಟಿ ಯೋಜನೆಯಡಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಎಷ್ಟು ಜಾಗೆ ಅಗತ್ಯವಿದೆ ಎಂಬುದರ ಬಗ್ಗೆ ಹಾಗೂ ಯೋಜನೆ ರೂಪುರೇಷೆಯ ಕುರಿತು ನಿಗದಿತ ನಮೂನೆಯಲ್ಲಿ ಮಾಹಿತಿ ನೀಡಿದರೆ ಅದನ್ನು ಪರಿಶೀಲಿಸಿ ತಕ್ಷಣವೇ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.

ಸ್ಮಾರ್ಟ್‌ಸಿಟಿ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳುವ ಮೊದಲು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಹೆಸ್ಕಾಂ, ಬಿ.ಎಸ್‌. ಎನ್‌.ಎಲ್‌ ಹಾಗೂ ಮಹಾನಗರ ಪಾಲಿಕೆ ಸಮನ್ವಯದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು. ಅಲ್ಲದೆ ಹೊಸ ಯೋಜನೆಯ ಪ್ರಸ್ತಾವನೆ ಸಲ್ಲಿಸುವ ಸಂದರ್ಭದಲ್ಲಿ ಪಾಲುದಾರ ಇಲಾಖೆಯ ಜತೆ ಸಮಗ್ರವಾಗಿ ಸಮಾಲೋಚನೆ ನಡೆಸಿ ಸೂಕ್ತ ಯೋಜನೆ ರೂಪಿಸಬೇಕು ಎಂದು ಅಂಗಡಿ ಸಲಹೆ ನೀಡಿದರು.

ಅಶೋಕ ವೃತ್ತ ರಸ್ತೆ ಹಾಗೂ ತರಕಾರಿ ಮಾರುಕಟ್ಟೆ ರಸ್ತೆ ಅಗಲೀಕರಣಕ್ಕೆ ಅಗತ್ಯವಾದ ಜಾಗವನ್ನು ಪಡೆದುಕೊಂಡು ಸ್ಮಾರ್ಟ್‌ಸಿಟಿ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು. ಅದೇ ರೀತಿ ವೆಂಗುರ್ಲಾ ಮತ್ತು ಗಣೇಶಪುರ ರಸ್ತೆ ಅಭಿವೃದ್ಧಿ ಕೆಲಸವನ್ನು ಮಹಾನಗರ ಪಾಲಿಕೆ ವತಿಯಿಂದ ಕೈಗೊಳ್ಳಬೇಕು. ಪ್ರತಿ 15 ದಿನಗಳಿಗೊಮ್ಮೆ ಸಮನ್ವಯ ಸಭೆ ನಡೆಸಬೇಕು ಎಂದು ಹೇಳಿದರು.

ಸ್ಮಾರ್ಟ್‌ಸಿಟಿ ಕಾಮಗಾರಿ ಹಾಗೂ ಪೈಪ್‌ ಲೈನ್‌ ಸ್ಥಳಾಂತರ ಮತ್ತಿತರ ಸೌಕರ್ಯಗಳಿಗೆ ಅಗತ್ಯವಿರುವ ಅನುದಾನ ಪಡೆಯಲು ಸ್ಮಾರ್ಟ್‌ಸಿಟಿ ವತಿಯಿಂದ ಪ್ರಸ್ತಾವ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು. ನಾನಾವಾಡಿ ರಸ್ತೆ ವಿಸ್ತರಣೆಗೆ ನಿರಾಕ್ಷೇಪಣಾ ಪ್ರಮಾಣಪತ್ರ ಪಡೆಯುವುದು ಮತ್ತು ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್‌ ವರೆಗೆ ಕಾಂಗ್ರೆಸ್‌ ರಸ್ತೆಯಲ್ಲಿ ಫುಟ್‌ಪಾತ್‌ ಅಭಿವೃದ್ಧಿ ಮತ್ತು ಸೈಕಲ್‌ ಟ್ರ್ಯಾಕ್  ನಿರ್ಮಾಣಕ್ಕೆ ಸಂಬಂಧಿಸಿದಂತೆ ನಿರಾಕ್ಷೇಪಣ ಪತ್ರ ಪಡೆಯುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಗೋಗಟೆ ವೃತ್ತದಿಂದ ನಾನಾವಾಡಿ ಕ್ರಾಸ್‌ ವರೆಗೆ ಕಾಂಗ್ರೆಸ್‌ ರಸ್ತೆಯಲ್ಲಿ ಫುಟ್‌ ಪಾಥ್‌ ಅಭಿವೃದ್ಧಿಪಡಿಸುವುದು ಮತ್ತು ಸೈಕಲ್‌ ಟ್ರ್ಯಾಕ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಸ್ಮಾರ್ಟ್‌ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಿರೀನ್‌ ನದಾಫ್‌ ಹೇಳಿದರು. ದಂಡುಮಂಡಳಿ ವ್ಯಾಪ್ತಿಯಲ್ಲಿ ಬೀದಿದೀಪ ನಿರ್ವಹಣೆ ಆದರ ಹಣವನ್ನು ರಾಜ್ಯ ಸರ್ಕಾರದ ವತಿಯಿಂದ ಪಾವತಿಸಲು ಕ್ರಮ ಕೈಗೊಳ್ಳಬೇಕು.ದಂಡುಮಂಡಳಿಯ ವ್ಯಾಪ್ತಿಯಲ್ಲಿ ಇರುವ ಕಸಾಯಿಖಾನೆ ನಿರ್ಮಾಣಕ್ಕೆ ಬೇರೆ ಕಡೆ ಜಾಗೆ ಒದಗಿಸಬೇಕು ಎಂದು ದಂಡುಮಂಡಳಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬರ್ಚಸ್ವಾ ಹೇಳಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಜಗದೀಶ್‌ ಕೆ.ಎಚ್‌. ಸ್ಮಾರ್ಟ್‌ಸಿಟಿ ಯೋಜನೆ, ಮಹಾನಗರ ಪಾಲಿಕೆ, ಹೆಸ್ಕಾಂ, ಸಾರಿಗೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.