ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ


Team Udayavani, Dec 3, 2021, 5:30 AM IST

ಸವಾಲು ಸ್ವೀಕರಿಸಿ ಬೆಳಗಾವಿ ಅಧಿವೇಶನ: ಸ್ಪೀಕರ್‌ ಕಾಗೇರಿ

ಬೆಳಗಾವಿ: ಸುವರ್ಣ ವಿಧಾನ ಸೌಧದಲ್ಲಿ ನಡೆಯುವ ಚಳಿಗಾಲ ಅಧಿವೇಶನದ ವೇಳೆ ಕೊರೊನಾ ಸಹಿತ ಹಲವು ಸವಾಲುಗಳಿವೆ. ಎಲ್ಲವನ್ನೂ ಸ್ವೀಕರಿಸಿ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಗುರುವಾರ ಸುವರ್ಣ ವಿಧಾನಸೌಧದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಯಿಂದ ಸಾಕಷ್ಟು ಹಾನಿಯಾಗಿದ್ದು, ಅಧಿಕಾರಿಗಳು ಪರಿಹಾರ ಕಾರ್ಯ ಕೈಗೊಳ್ಳಬೇಕಿದೆ. ಜತೆಗೆ ಡಿ.14ಕ್ಕೆ ವಿಧಾನ ಪರಿಷತ್‌ ಚುನಾವಣೆ ಮತ ಎಣಿಕೆ ಇದೆ. ಬಳಿಕ ಇದೇ ತಿಂಗಳಲ್ಲಿ ಪುರಸಭೆ ಹಾಗೂ ಪ.ಪಂ.ಗಳ ಚುನಾವಣೆಯೂ ನಡೆಯಲಿದೆ. ಬೆಳಗಾವಿ ಜಿಲ್ಲಾಡಳಿತದ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು.

ವಿದ್ಯಾರ್ಥಿಗಳಿಗಿಲ್ಲ ಪ್ರವೇಶ
ಈ ಬಾರಿಯ ಅಧಿವೇಶನದಲ್ಲಿ ವಿದ್ಯಾರ್ಥಿಗಳಿಗೆ ವೀಕ್ಷಣೆಗೆ ಅವಕಾಶ ಇಲ್ಲ. ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿದೆ ಎಂದರು.

ಸಲ್ಲಿಕೆಯಾಗದ ಮಸೂದೆ
ಕಲಾಪಗಳು ಎಂದಿನಂತೆ ನಡೆಯಲಿವೆ. ಆದರೆ ಅಧಿವೇಶನದಲ್ಲಿ ಮಂಡಿಸಲು ಸರಕಾರದಿಂದ ಇದು ವರೆಗೆ ಯಾವುದೇ ಬಿಲ್‌ (ಮಸೂದೆ) ಸಲ್ಲಿಕೆಯಾಗಿಲ್ಲ. ಈ ಬಗ್ಗೆ ಸರಕಾರದ ಗಮನಕ್ಕೆ ತರಲಾಗಿದೆ ಎಂದರು.

ಇದನ್ನೂ ಓದಿ:ಪ್ರಧಾನಿ ಮೋದಿ ನಡತೆ ನೋಡಿ ಸಿದ್ದು ಕಲಿಯಲಿ: ಈಶ್ವರಪ್ಪ

ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಬೆಳಗಾವಿಯಲ್ಲಿ ಅಧಿವೇಶನದ ವೇಳೆ ವಸತಿ ವ್ಯವಸ್ಥೆಗೆ ವೆಚ್ಚ ಮಾಡಿದ್ದನ್ನು ನೋಡಿದರೆ ಈ ಹಣದಲ್ಲಿ ಶಾಸಕರ ಭವನ ನಿರ್ಮಾಣವಾಗುತ್ತಿತ್ತು. ಇಲ್ಲಿ ಶಾಸಕರ ಭವನದ ನಿರ್ಮಾಣದ ಅಗತ್ಯವಿದೆ. ಮತ್ತೂಮ್ಮೆ ಮುಖ್ಯ ಮಂತ್ರಿಯನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

ಶಾಸಕರು ಹದ್ದು ಮೀರಿದರೆ ಕಠಿನ ಕ್ರಮ
ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ನಡೆಯುತ್ತಿರುವ ಘಟನೆಗಳು ನನಗೆ ತೀವ್ರ ನೋವು ತಂದಿವೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಶಕ್ತಿ ತುಂಬಬೇಕಾದವರೇ ಶಿಸ್ತು ಉಲ್ಲಂಘನೆ ಮಾಡುವುದು ಸರಿಯಲ್ಲ. ಈ ನಿಟ್ಟಿನಲ್ಲಿ ರಾಜ್ಯಸಭೆಯ 12 ಸಂಸದರ ಅಮಾನತು ಸರಿಯಾದ ಕ್ರಮವಾಗಿದೆ. ಕಳೆದ ಲೋಕಸಭಾ ಅಧಿವೇಶನದಲ್ಲಿ ನಡೆದ ಘಟನೆ ಖಂಡಿಸಿ ಪತ್ರ ಬರೆದಿದ್ದೆ. ರಾಜ್ಯಸಭೆಯಲ್ಲೇ ಈ ರೀತಿ ಘಟನೆ ನಡೆದರೆ ವಿಧಾನಸಭೆಯಲ್ಲಿ ಹೇಗೆ ನಡೆಯಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದೆ. ನಮ್ಮ ನಡವಳಿಕೆಗಳು ಸದನದ ಚೌಕಟ್ಟಿನಲ್ಲಿರಬೇಕು. ಚರ್ಚೆಗಳು ರಚನಾತ್ಮಕವಾಗಿರಬೇಕು. ನಿಯಮ ಮೀರಿ ವರ್ತನೆ ಮಾಡಿದರೆ ನಾವು ನಮ್ಮ ಅಧಿಕಾರದ ವ್ಯಾಪ್ತಿಯಲ್ಲಿ ಕಠಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸ್ಪೀಕರ್‌ ಕಾಗೇರಿ ಅವರು ಶಾಸಕರಿಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Belagavi: Let there be a full discussion of issues in the plenary session: Dr. Prabhakar Kore

Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್‌ ಕೋರೆ

Belagavi: ಗೆಳೆಯ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

Minister K. N. Rajanna: ಸದ್ಯಕ್ಕಂತೂ ಸಚಿವ ಸಂಪುಟ ಪುನಾರಚನೆ ಇಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.