ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಲಿ: ಪ್ರೇಮಾ
Team Udayavani, Sep 9, 2018, 5:21 PM IST
ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು. ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ಜಿಲ್ಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಲಕ್ಷ್ಯ -2018 ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ನೂರಾರು ಕಷ್ಟಗಳು ಬರುತ್ತವೆ. ಅವುಗಳನ್ನೆಲ್ಲ ಬದಿಗೊತ್ತಿ ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಬೇಕು.
ಗುರಿ ಸಾಧನೆಗೆ ಯೋಗವನ್ನು ಆಳವಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ. ಮಕ್ಕಳು ಸದಭಿರುಚಿಗೆ ತಕ್ಕಂತೆ ಶಿಕ್ಷಣ ಮಾರ್ಗ ಆಯ್ಕೆ ಮಾಡಿಕೊಳ್ಳಲು ಪಾಲಕರು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಿ.ಎನ್.ನಾಯ್ಕರ ಮಾತನಾಡಿ, ಸಂಸ್ಥೆಯ ಧ್ಯೇಯ ಹಾಗೂ ಉದ್ದೇಶಗಳ ಬಗ್ಗೆ ವಿವರಿಸಿದರು. ಲಕ್ಷ್ಯ-2018 ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದೊಂದು ಸಾಂಸ್ಕೃತಿಕ ಜಾತ್ರೆಯಾಗಿದ್ದು, ಸುಮಾರು 63 ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ಯಾಮ ಘಾಟಗೆ, ಜಿಪಂ ಅಧ್ಯಕ್ಷ ಆಶಾ ಐಹೊಳೆ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ವೇತಾ ನಾಯ್ಕರ ಉಪಸ್ಥಿತರಿದ್ದರು. ಸೃತಿ ಮತ್ತು ಚೈತ್ರಾ ನಿರೂಪಿಸಿದರು. ಹೃತುರಾಜ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.