ಕೋಮು ಗಲಭೆ ತಡೆದಿದ್ದೇ ವರ್ಷದ ಸಾಧನೆ: ಬೆನಕೆ
•ನಿರಂತರ ಗಲಭೆಯಿಂದ ರೋಸಿ ಹೋಗಿದ್ದ ಜನರಿಗೆ ಶಾಂತಿ •ಭಯಮುಕ್ತ ವಾತಾವರಣ ಸೃಷ್ಟಿ
Team Udayavani, May 17, 2019, 3:52 PM IST
ಬೆಳಗಾವಿ: ಒಂದು ವರ್ಷದ ಆಡಳಿತಾವಧಿಯಲ್ಲಿ ನಗರದ ಯಾವುದೇ ಪ್ರದೇಶದಲ್ಲಿ ಕೋಮು ಗಲಭೆ-ಕಲ್ಲು ತೂರಾಟ ನಡೆಯದಿರುವುದೇ ನಮ್ಮ ಸಾಧನೆ ಎಂದು ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅಭಿಪ್ರಾಯಪಟ್ಟರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದೇ ಪದೇ ಕೋಮು ಗಲಭೆಯಿಂದಾಗಿ ಬೆಳಗಾವಿಯ ನಾಗರಿಕರು ರೋಸಿ ಹೋಗಿದ್ದರು. ನಾನು ಶಾಸಕರಾಗಿ ಆಯ್ಕೆ ಆದಾಗಿನಿಂದ ಒಂದೇ ಒಂದು ಗಲಾಟೆ ನಡೆದಿಲ್ಲ. ಭಯ ಮುಕ್ತ ವಾತಾವರಣ ನಿರ್ಮಾಣವಾಗಿದೆ. ನಾನು ಪೊಲೀಸರ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ತಿಳಿಸಿದರು.
ನಗರವನ್ನು ಸುಂದರವಾಗಿಸುವ ಅವಶ್ಯಕತೆ ಇದೆ. ಕೇವಲ ರಸ್ತೆ, ಗಟಾರು ನಿರ್ಮಾಣ ಮಾಡಿದರೆ ಸಾಲದು. ಅಗತ್ಯ ಇರುವ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಭಿಕ್ಷುಕರನ್ನು ಸಬಲೀಕರಣ ಮಾಡುವುದು, ನಗರವನ್ನು ಸಾರಾಯಿ, ಗಾಂಜಾ ಮುಕ್ತ ಮಾಡಲು ಕ್ರಮ, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ನೀಡಿದಾಗ ಮಾತ್ರ ಬೆಳಗಾವಿ ಸ್ಮಾರ್ಟ್ ಸಿಟಿ ಆಗಲು ಸಾಧ್ಯ. ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಲು ಸುಪ್ರೀಂ ಕೋರ್ಟಿನಲ್ಲಿ ಕಾನೂನು ಹೋರಾಟ ನಡೆಸಲಾಯಿತು. ಇದರ ಪರಿಣಾಮ 8 ಅಕ್ರಮ ಕಸಾಯಿಖಾನೆಗಳಿಗೆ ಬೀಗ ಜಡಿಯಲಾಗಿದೆ. ಶ್ರೀನಗರದಲ್ಲಿ ರಾಜೀವ ಗಾಂಧಿ ಆವಾಸ ಯೋಜನೆಯಡಿ ನಿರ್ಮಿಸಲಾದ ಜಿ ಪ್ಲಸ್ 3 ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು. 272 ಆಶ್ರಯ ಮನೆಗಳಿಗಾಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಅರ್ಹರನ್ನು ಆಯ್ಕೆ ಮಾಡಿ ಹೊಸ ಪಟ್ಟಿ ತಯಾರಿಸಿ ಬಿಡುಗಡೆ ಮಾಡಲಾಗುವುದು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಈ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಇಲಾಖೆಯಿಂದ ನಗರದ ಪ್ರಾಚೀನ ದೇವಸ್ಥಾನಗಳ ಜೀರ್ಣೋದ್ಧಾರ, ಕೋಟೆ ಎದುರಿನ ಕೆರೆಯನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿ ಮನರಂಜನಾ ತಾಣವನ್ನಾಗಿ ಮಾಡಲಾಗುವುದು. ಹೈಟೆಕ್ ಬಸ್ ನಿಲ್ದಾಣ ಹಾಗೂ ಸಂಚಾರಿ ಗ್ರಂಥಾಲಯಗಳ ನಿರ್ಮಾಣ, ರಾಮತೀರ್ಥ ನಗರ ಹಾಗೂ ಕೆಎಚ್ಬಿ ಬಡಾವಣೆಯನ್ನು ಬುಡಾದಿಂದ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಹಾಗೂ ಬುಡಾ ವತಿಯಿಂದ ಬಾಕಿ ಉಳಿದಿದ್ದ ಕಾಮಗಾರಿಗಳನ್ನು ಮುಂದುವರಿಸಲಾಗಿದ್ದು, 100 ಕೋಟಿ ರೂ. ವಿಶೇಷ ಅನುದಾನದಲ್ಲಿ ಸಿಸಿ ರಸ್ತೆ, ಡಾಂಬರು ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ. ಉತ್ತರ ಕ್ಷೇತ್ರದ ಶಾಲಾ-ಕಾಲೇಜುಗಳ ಅಭಿವೃದ್ಧಿಗಾಗಿ 2.85 ಕೋಟಿ ರೂ. ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.