ಪ್ರವಾಹ ಸಮಸ್ಯೆ ಎದುರಾಗದಂತೆ ಕ್ರಮ ವಹಿಸಿ
Team Udayavani, Jun 17, 2021, 5:56 PM IST
ಬೈಲಹೊಂಗಲ: ಈ ವರ್ಷ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ಪ್ರವಾಹ ಬಂದು ಹಾನಿಗೀಡಾಗ ಬಹುದಾದ ಪ್ರದೇಶದ ಜನರನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಲು ಹಾಗೂ ಪ್ರಾಣ ಹಾನಿ, ಜಾನುವಾರು ಹಾನಿಯಾಗದಂತೆ ಸಂರಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಾಹಕ ಅಧಿ ಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು.
ಬೈಲಹೊಂಗಲ ಉಪವಿಭಾಗದಲ್ಲಿ ಬರುವ ಒಟ್ಟು ಆರು ತಾಲೂಕಿಗೆ ಸಂಬಂ ಧಿಸಿದಂತೆ ಪ್ರವಾಹ, ಅತಿವೃಷ್ಟಿ ಪೂರ್ವಸಿದ್ಧತೆ ಕೈಗೊಳ್ಳುವ ಸಲುವಾಗಿ ಉಪವಿಭಾಗದ ತಾಲೂಕು ಮಟ್ಟದ ಅ ಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಳೆ ಹಾನಿ, ಮನೆಗಳ ಹಾನಿ ಉಂಟಾದಲ್ಲಿ ಕೂಡಲೇ ತಂಡಗಳನ್ನು ರಚಿಸಿ ವರದಿ ನೀಡಲು ಸಂಬಂಧಪಟ್ಟ ತಾಲೂಕು ಮಟ್ಟದ ಅ ಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳಬೇಕು. ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್‌ಗಳಿಂದ ಹಾನಿಯಾಗುವ ಸಂಭವವಿರುವ ಬಗ್ಗೆ ಪರಿಶೀಲಸಲು ಸಂಬಂಧಪಟ್ಟ ಹೆಸ್ಕಾಂ ಅಧಿ ಕಾರಿಗಳಿಗೆ ಸೂಚನೆ ನೀಡಲಾಯಿತು.
ಗ್ರಾಮೀಣ, ನಗರ ಪ್ರದೇಶಗಳಲ್ಲಿ ಚರಂಡಿಗಳನ್ನು ಸ್ವತ್ಛಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ತಾ.ಪಂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧಿ ಕಾರಿಗಳಿಗೆ ಸೂಚಿಸಿದರು. ಸಾಂಕ್ರಾಮಿಕ ರೋಗಗಳಿಗೆ ಸಂಬಂಧಿ ಸಿದಂತೆ ಅವಶ್ಯವಿರುವ ಔಷಧಗಳನ್ನು ಸಂಗ್ರಹಿಸಿಡಲು ತಾಲೂಕು ಆರೋಗ್ಯಾ ಧಿಕಾರಿಗಳಿಗೆ ಸೂಚಿಸಲಾಯಿತು. ಜಾನುವಾರುಗಳಿಗೆ ಯಾವುದೇ ರೋಗ ರುಜಿನ ಬಂದಲ್ಲಿ ಶೀಘ್ರ ಚಿಕಿತ್ಸೆ ಒದಗಿಸಲು ಅವಶ್ಯವಿರುವ ಔಷಧ , ಲಸಿಕೆಗಳನ್ನು ಸಂಗ್ರಹಿಸಿಡಲು ಪಶು ವೈದ್ಯಾ ಧಿಕಾರಿಗಳಿಗೆ ಸೂಚಿಸಿದರು.
ತಹಶೀಲ್ದಾರ್‌ಗಳಾದ ಬಸವರಾಜ ನಾಗರಾಳ, ಸೋಮಲಿಂಗಪ್ಪ ಹಲಗಿ, ಪ್ರಕಾಶ ಹೊಳೆಪ್ಪಗೋಳ, ಮಲ್ಲಿಕಾರ್ಜುನ ಹೆಗ್ಗನ್ನವರ, ತಾ.ಪಂ ಇಒ ಸುಭಾಶ ಸಂಪಗಾವಿ, ತಾಲೂಕು ಮಟ್ಟದ ಅ ಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.