ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು : ಸಚಿವ ಜಗದೀಶ್ ಶೆಟ್ಟರ್
Team Udayavani, Jan 26, 2020, 10:37 AM IST
ಬೆಳಗಾವಿ: ರಾಷ್ಟ್ರದ ಅಭಿವೃದ್ಧಿಗೆ ಪೌರತ್ವ ತಿದ್ದುಪಡಿ ಕಾಯ್ದೆಯು ಪೂರಕವಾಗಿದೆ. ಈ ಕಾಯ್ದೆಯು ಯಾರ ಪೌರತ್ವ ಕಿತ್ತುಕೊಳ್ಳುವುದಿಲ್ಲ, ಇದು ಪೌರತ್ವ ನೀಡುವ ಕಾಯ್ದೆಯಾಗಿದೆ. ಹೀಗಾಗಿ ಎಲ್ಲ ಭಾರತೀಯರು ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮನವಿ ಮಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಪೌರತ್ವ ಕಾಯ್ದೆ ಜಾರಿಯಿಂದ ಗಣರಾಜ್ಯೋತ್ಸವ ಮತ್ತಷ್ಟು ಅರ್ಥಪೂರ್ಣವಾಗುತ್ತದೆ ಎಂದು ಹೇಳಿದರು.ಇತ್ತೀಚೆಗೆ ವಿನಾಕಾರಣ ಗಡಿ ವಿಷಯ ಕೆಣಕುವ ಪ್ರಯತ್ನ ನಡೆದಿದೆ. ಇಲ್ಲಿನ ಜನರು ಯಾವುದೇ ಪ್ರಚೋದನೆಗೆ ಒಳಗಾಗದೇ ಎಲ್ಲರೂ ಸೌಹಾರ್ದದಿಂದ ಇರಬೇಕು ಎಂದು ಸಚಿವ ಶೆಟ್ಟರ್ ಹೇಳಿದರು.
ಗಡಿ ವಿವಾದ ಮುಗಿದ ಅಧ್ಯಾಯ. ಬೆಳಗಾವಿ ನಮ್ಮದು. ಕರ್ನಾಟಕದ ಅವಿಭಾಜ್ಯ ಅಂಗ ಎಂದು ಈಗಾಗಲೇ ಸಾರಿ ಸಾರಿ ಹೇಳಿದ್ದೇವೆ. ಇದನ್ನು ಮತ್ತೆ ಕೆಣಕುವ ಪ್ರಯತ್ನ ಮಾಡಬಾರದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.