ಅಂಬೇಡ್ಕರ್ ಕಟ್ಟೆ ಧ್ವಂಸ-ಪ್ರತಿಭಟನೆ
ತನ್ನ ಕಟ್ಟಡಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋರಾತ್ರಿ ಧ್ವಂಸ
Team Udayavani, Dec 1, 2021, 6:08 PM IST
ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್.ಅಂಬೇಡ್ಕರ್ ಭಾವಚಿತ್ರವಿದ್ದ ಕಟ್ಟೆಯನ್ನು ಸೋಮವಾರ ರಾತ್ರೋರಾತ್ರಿ ಧ್ವಂಸ ಮಾಡಿದ ಹಿನ್ನೆಲೆ ಮಂಗಳವಾರ ದಲಿತ ಪರ ಸಂಘಟನೆಗಳು ರಸ್ತೆ ಬಂದ್ ಮಾಡಿ, ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ ಅವರಿಗೆ ಅಪಮಾನ ಮಾಡಿರುವ ಶಿವಾನಂದ ಸಿದ್ಧಪ್ಪ ಪಾಟೀಲಗೆ ಕಠಿಣ ಶಿಕ್ಷೆ ವಿಧಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಮೂಡಲಗಿ ತಹಶೀಲ್ದಾರ ಡಿ.ಜಿ.ಮಹಾತ ಅವರಿಗೆ ಮನವಿ ಸಲ್ಲಿಸಿದರು.
ದಲಿತ ಸಂಘಟನೆ ಅಧ್ಯಕ್ಷ ಸತ್ತೆಪ್ಪ ಕರವಾಡಿ ಮಾತನಾಡಿ, ಶಿವಾನಂದ ಸಿದ್ಧಪ್ಪ ಪಾಟೀಲ ಅಕ್ರಮ ವಾಣಿಜ್ಯ ಮಳಿಗೆ ನಿರ್ಮಿಸುತ್ತಿದ್ದು, ಕಟ್ಟಡದ ಮುಂದಿನ ಡಾ| ಅಂಬೇಡ್ಕರ್ ಭಾವಚಿತ್ರದ ಕಟ್ಟೆ ತನ್ನ ಕಟ್ಟಡಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ರಾತ್ರೋರಾತ್ರಿ ಧ್ವಂಸ ಮಾಡಿ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಇದು ನಮಗೆಲ್ಲ ನೋವುಂಟು ಮಾಡಿದೆ.
ಆರೋಪಿಗೆ ಕಠಿಣ ಶಿಕ್ಷೆ ನೀಡಿ, ಒಂದು ತಿಂಗಳೊಳಗಾಗಿ ಆ ಅಕ್ರಮ ಕಟ್ಟಡ ತೆರವುಗೊಳಿಸಿ, ಮೊದಲಿನ ಸ್ಥಳದಲ್ಲಿ ಡಾ. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿದರು. ದಲಿತ ಮುಖಂಡ ರಮೇಶ ಸಣ್ಣಕ್ಕಿ ಮಾತನಾಡಿ, ಶಿವಾನಂದ ಅವರ ಈ ಕೃತ್ಯದಿಂದ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದರು.
ತಹಶೀಲ್ದಾರ್ ಡಿ.ಜಿ ಮಹಾತ್ ಮಾತನಾಡಿ, ಅಂಬೇಡ್ಕರ್ ಅವರಿಗೆ ಅಪಮಾನವಾಗುವಂತೆ ಮಾಡಿರುವ ಶಿವಾನಂದ ಪಾಟೀಲ್ ಎಂಬುವವರಿಗೆ ಕಾನೂನಿನ ರೀತಿಯಲ್ಲಿ ಶಿಕ್ಷೆ ನೀಡಲಾಗುವುದು. ಶೀಘ್ರವಾಗಿ ಅವರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗುವುದು. ಮಳಿಗೆಗಳ ಜಾಗದ ಬಗ್ಗೆ ಮಾಹಿತಿ ಪಡೆದು ಅನಧಿಕೃತವಾಗಿದ್ದರೆ ತೆರವುಗೊಳಿಸಲಾಗುವುದೆಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಅನಧಿಕೃತ ಮಳಿಗೆಯನ್ನು ಶೀಘ್ರ ತೆರವುಗೊಳಿಸಬೇಕು, ಇಲ್ಲವೆ ನಾವೇ ತೆರವುಗೊಳಿಸುತ್ತೇವೆ ಎಂದು ಪ್ರತಿಭಟನಾಕಾರರು ಮುಂದಾದಾಗ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರನ್ನು ತಡೆದು, ಕಾನೂನು ಕ್ರಮದ ಭರವಸೆ ನೀಡಿ ಮನವೊಲಿಸಿದರು. ಡಿಆರ್ ತುಕಡಿಯನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.
ಪಿಡಿಓ ಗಂಗಾಧರ ಮಲ್ಹಾರಿ, ಮೂಡಲಗಿ ಪಿಎಸ್‌ಐ ಎಚ್ ವೈ ಬಾಲದಂಡಿ, ಕುಲಗೋಡ ಪಿಎಸ್‌ಐ ಗೋವಿಂದಗೌಡ ಪಾಟೀಲ್, ದಲಿತ ಮುಖಂಡರಾದ ರವೀಂದ್ರ ಸಣ್ಣಕ್ಕಿ, ಎಬಿಸಿಜರ ಕರಬನ್ನವರ, ಬಾಳೇಶ ಬನಟ್ಟಿ, ಶಾಬಪ್ಪ ಸಣ್ಣಕ್ಕಿ, ಸುರೇಶ ಸಣ್ಣಕ್ಕಿ, ಮನೋಹ ಅಜ್ಜನಕಟ್ಟಿ, ಉದ್ದಪ್ಪ ಮಾದರ, ಪರುಶುರಾಮ ಮಾದರ, ಬಸು ಮಾದರ, ಪರಶುರಾಮ ಭಜಂತ್ರಿ, ದುರ್ಗಪ್ಪ ಭಜಂತ್ರಿ, ಮದೇವ ಮಾಸನ್ನವರ, ಇತರರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.