ಘಟಪ್ರಭಾ ಶುಗರ್ಸ್‌ನಿಂದ ಕಬ್ಬಿಗೆ 2700 ರೂ. ದರ ಘೋಷಣೆ
Team Udayavani, Oct 26, 2021, 4:47 PM IST
ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. ದರ ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಸೋಮವಾರ ನಗರದ ಹೊರವಲಯದ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ ಪಾವತಿಸಲಾಗುವುದು ಎಂದು ಹೇಳಿದರು.
ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ ಉತ್ತಮ ಇಳುವರಿಯ ಕಬ್ಬನ್ನು ಪೂರೈಕೆ ಮಾಡುವಂತೆ ರೈತರಲ್ಲಿ ಕೋರಿದ ಅವರು, ರೈತರ ಸಹಕಾರದಿಂದ ನಮ್ಮ ಕಾರ್ಖಾನೆಯು ಪ್ರಗತಿ ಪಥದತ್ತ ಸಾಗುತ್ತಿದೆ. ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ ಎಂದರು.
ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ 20 ದಿನಗಳಿಗೊಮ್ಮೆ ಅವರ ಬ್ಯಾಂಕ್ ಖಾತೆಗಳಿಗೆ ಬಿಲ್ ಸಂದಾಯ ಮಾಡಲಾಗುವುದು. ನಮ್ಮ ನೆರೆ ಹೊರೆಯ ಕಾರ್ಖಾನೆಗಳು ನೀಡುವ ದರವನ್ನು ನಾವು ನೀಡುತ್ತೇವೆ ಎಂದು ಈ ಹಿಂದೆಯೇ ರೈತರ ಸಭೆಯಲ್ಲಿ ಹೇಳಲಾಗಿತ್ತು. ಅದರಂತೆಯೇ ಜಿಲ್ಲೆಯ ಬಹುತೇಕ ಕಾರ್ಖಾನೆಗಳು ಈಗಾಗಲೇ ದರವನ್ನು ಘೋಷಿಸಿದ್ದು, ಅದರನ್ವಯ ಈ ಬಾರಿ ಪ್ರತಿ ಟನ್ ಕಬ್ಬಿಗೆ 2700 ರೂ. ದರವನ್ನು ಆಡಳಿತ ಮಂಡಳಿಯ ನಿರ್ಣಯದಂತೆ ಘೋಷಿಸಲಾಗಿದೆ. ರೈತರ ಸಹಕಾರವೇ ನಮ್ಮ ಕಾರ್ಖಾನೆಗೆ ಶ್ರೀರಕ್ಷೆಯಾಗಿದೆ ಎಂದು ಜಾರಕಿಹೊಳಿ ತಿಳಿಸಿದರು.
ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಖಾನೆಯಲ್ಲಿ ಆಯೋಜಿಸಿದ್ದ ಪೂಜಾ ಸಮಾರಂಭದಲ್ಲಿ ಭಾಗವಹಿಸಿದರು. ನಂತರ ಕಾರ್ಖಾನೆಯ ವಿವಿಧ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಉದ್ಯಮಿಗಳಾದ ಅಭಿನಂದನ ಪಾಟೀಲ, ಉತ್ತಮ ಪಾಟೀಲ, ಲೆಕ್ಕ ಪರಿಶೋಧಕ ಸೈದಪ್ಪ ಗದಾಡಿ, ಕಾರ್ಖಾನೆ ಸಿಇಒ ನಿತೀನ ಪಾಟೀಲ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Belagavi: ಗಾಂಧಿ ಭಾರತ ಹಿನ್ನೆಲೆ ಡಿ. 26, 27 ರಂದು ಕೆಲ ಶಾಲೆಗಳಿಗೆ ರಜೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.