ಸಿದ್ದು ಕನಮಡಿ ಹತ್ಯೆ ಆರೋಪಿಗಳ ಬಂಧನಕ್ಕೆ ಆಗ್ರಹ
Team Udayavani, May 9, 2020, 1:03 PM IST
ಗೋಕಾಕ: ದಲಿತ ಮುಖಂಡ ಸಿದ್ದು ಕನಮಡಿ ಹತ್ಯೆ ಆರೋಪಿಗಳನ್ನು ಬಂಧಿಸಿ ಶಿಕ್ಷೆ ವಿಧಿಸಬೇಕೆಂದು ತಾಲೂಕು ದಲಿತ ಸಂಘಟನೆಗಳ ಮುಖಂಡರು ಆಗ್ರಹಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ನಗರದ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ದಲಿತ ಮುಖಂಡರು, ಕನಮಡಿ ಕೊಲೆಯಲ್ಲಿ ಆರ್.ಎಸ್.ಎಸ್, ಭಜರಂಗದಳ ಹಾಗೂ ರಾಮಸೇನಾ ಕಾರ್ಯಕರ್ತರ ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ದಲಿತ ಮುಖಂಡರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿದ್ದು, ತಡೆಯದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವದೆಂದು ತಿಳಿಸಿದ್ದಾರೆ. ಸಿದ್ದು ಕನಮಡಿ ಕೊಲೆ ಪ್ರಕರಣದಲ್ಲಿ ನಿಜವಾದ ಆರೋಪಿಗಳನ್ನು ಬಿಟ್ಟು ಬೇರೆ ಅಪ್ರಾಪ್ತರನ್ನು ಸೇರಿಸಲಾಗುತ್ತಿದೆ ಎಂಬ ಆರೋಪವನ್ನು ಮನವಿಯಲ್ಲಿ ಮಾಡಲಾಗಿದ್ದು, ಸಿದ್ದು ಕನಮಡಿ ಮರಣ ಪೂರ್ವ ಹೇಳಿಕೆಯಲ್ಲಿ ಹೇಳಿದ ವ್ಯಕ್ತಿಗಳನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಲಾಗಿದೆ. ಕೊಲೆಯಾದ ಸಿದ್ದು ಕನಮಡಿ ಕುಟುಂಬದವರಿಗೆ ಪರಿಹಾರ ನೀಡಬೇಕು, ಮೃತನ ಪತ್ನಿಗೆ ಸರಕಾರಿ ನೌಕರಿ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ದಲಿತ ಮುಖಂಡರಾದ ರಮೇಶ ಮಾದರ, ಸತ್ಯಜೀತ ಕರವಾಡೆ, ಲಕ್ಷ್ಮಣ ತೆಳಗಡೆ, ಕಾಡಪ್ಪ ಮೇಸ್ತ್ರಿ, ಬಬಲೆಪ್ಪ ಮಾದರ, ಬಾಳೇಶ ಸಂತವ್ವಗೋಳ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.