ಅಡಿಕೆಗೆ ಬಾಧಿಸುವ ಎಲೆಚುಕ್ಕಿ ರೋಗ ತಡೆಗೆ ಉನ್ನತಮಟ್ಟದ ಸಂಶೋಧನೆ: ಸಚಿವ ಆರಗ ಜ್ಞಾನೇಂದ್ರ
Team Udayavani, Dec 22, 2022, 6:20 AM IST
ಸುವರ್ಣ ವಿಧಾನಸೌಧ: ಅಡಿಕೆ ಗಿಡಕ್ಕೆ ಬಾಧಿಸುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಮೂಲಾಗ್ರವಾಗಿ ಸಂಶೋಧನೆ ನಡೆಸಲು ಕೃಷಿ ವಿಜ್ಞಾನಿಗಳಿಗೆ ನಿರ್ದೇಶನ ನೀಡಲಾಗಿದೆ ಮತ್ತು ಈ ಉದ್ದೇಶಕ್ಕಾಗಿ 4.39 ಕೋ.ರೂ. ಮೀಸಲಿಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬಿಜೆಪಿಯ ಉಮಾನಾಥ ಕೋಟ್ಯಾನ್ ಅವರ ಪರವಾಗಿ ಸಂಜೀವ ಮಟ್ಟಂದೂರ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಹಾರ ಬೆಳೆಗಳನ್ನು ಬೆಳೆಯುವುದು ಕಷ್ಟ. ಹೀಗಾಗಿ ಬಹುತೇಕರು ಅಡಿಕೆ, ತೆಂಗು, ಏಲಕ್ಕಿ, ಕಾಲುಮೆಣಸು ಹೀಗೆ ವಾಣಿಜ್ಯ ಬೆಳಗಳನ್ನು ಬೆಳಯುತ್ತಿದ್ದಾರೆ. ಕೃಷಿ ಪರಿಕರ ಖರೀದಿಗೆ ಸರ್ಕಾರವು ಸಬ್ಸಿಡಿಯನ್ನು ನೀಡುತ್ತಿದೆ. 1962ರಿಂದ ಕಾಫಿ ಬೆಳೆಯಲ್ಲಿ ಬಾಧಿಸುತ್ತಿದ್ದ ಎಲೆಚುಕ್ಕಿ ರೋಗ ಎರಡು ವರ್ಷದಿಂದ ಅಡಿಕೆ ಬೆಳೆಯಲ್ಲೂ ಕಾಣಿಸಿಕೊಳ್ಳುತ್ತಿದೆ. ಇದರಿಂದ ಅಡಿಕೆ ಬೆಳೆಗಾರರಿಗೆ ಸಮಸ್ಯೆಯಾಗುತ್ತಿವೆ. ಈ ರೋಗಕ್ಕೆ ಇಲ್ಲಿಯವರೆಗೂ ಪರಿಹಾರ ಕಂಡುಕೊಂಡಿಲ್ಲ. ಈ ನಿಟ್ಟಿನಲ್ಲಿ ಕೃಷಿ ಕಾಲೇಜು, ಶೃಂಗೇರಿ ಮತ್ತು ತೀರ್ಥಹಳ್ಳಿ ಕೃಷಿ ಸಂಶೋಧನ ಕೇಂದ್ರದಿಂದ ಪ್ರಸ್ತಾವನೆಯನ್ನು ಸ್ವೀಕರಿಸಿಕೊಂಡು ಉನ್ನತ ಮಟ್ಟದ ತನಿಖೆಗೆ ಸೂಚನೆ ನೀಡಲಾಗಿದೆ ಎಂದರು.
ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಿಕ್ಕಮಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಡಿಕೆ ತೋಟಕ್ಕೆ ಹೋಗಿ ಅಡಿಕೆ ಬೆಳೆಗಳನ್ನು ಪರಿಶೀಲಿಸಿದ್ದರು. ಹೀಗಾಗಿ ಅವರು ಕೂಡ ಎಲೆಚಿಕ್ಕಿ ರೋಗದ ನಿರ್ಮೂಲನೆಗೆ ಉನ್ನತ ಮಟ್ಟದ ಸಂಶೋಧನೆಗೆ ಸೂಚಿಸಿದ್ದಾರೆ. ಸಂಶೋಧನೆಯಿಂದ ಮಾತ್ರ ಈ ರೋಗಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಈಗಾಗಲೇ ರೈತರಿಗೆ ಅಡಿಕೆ ಮರಕ್ಕೆ ಔಷಧ ಸಿಂಪಡನೆ ಮಾಡಲು ಒಂದು ಬಾರಿ ಉಚಿತವಾಗಿ ಔಷಧ ನೀಡುತ್ತಿದ್ದೇವೆ. ಅಡಿಕೆ ಕುಯ್ಯುವ ಫೈಬರ್ ದೋಟಿಗಳಿಗೆ 30 ಸಾವಿರ ರೂ.ಗಳ ವರೆಗೂ ಸಬ್ಸಿಡಿ ನೀಡುತ್ತಿದ್ದೇವೆ ಎಂದರು.
ಬಿಜೆಪಿಯ ಸಂಜೀವ ಮಟ್ಟಂದೂರ ಮಾತನಾಡಿ, ಎಲೆಚುಕ್ಕಿ ರೋಗ, ಹಳದಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ಈ ರೋಗಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದರು.
ಬಿಜೆಪಿಯ ಸಿ.ಟಿ.ರವಿ ಮಾತನಾಡಿ, ಅತೀಯಾದ ರಾಸಾಯನಿಕ ಬಳೆಯಿಂದಲೂ ರೋಗಬಾಧೆ ಕಾಣಿಸಿಕೊಳ್ಳುತ್ತಿದೆ ಎಂದು ಹೇಳಾಗುತ್ತಿದೆ. ಈವರೆಗೂ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಇದಕ್ಕೆ ತಾತ್ಕಾಲಿಕ ಪರಿಹಾರವಲ್ಲ, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಜ್ಞಾನಿಗಳು ಸಮಗ್ರ ಅಧ್ಯಯನ ನಡೆಸಬೇಕು ಎಂದು ಹೇಳಿದರು.
ಕಾಂಗ್ರೆಸ್ ರಮೇಶ್ ಕುಮಾರ್ ಮಾತನಾಡಿ, ಇದೊಂದು ಪಾರಂಪರಿಕ ಕಾಯಿಲೆ, ಕೃಷಿ ವಿಜ್ಞಾನ ಕೇಂದ್ರ ಹಾಗೂ ವಿ.ವಿ.ಗಳಲ್ಲಿ ಯಾವುದೇ ಸಂಶೋಧನೆಗಳು ನಡೆಯುತ್ತಿಲ್ಲವೋ ಏನೋ ಎಂಬ ಸಂಶಯ ಕಾಡುತ್ತಿದೆ. ಹಾಗಾದರೇ ಸಂಶೋಧನೆಗಳ ಫಲಿತಾಂಶ ಏನು? ಒಂದೊಂದು ಬೆಳೆಯ ಸಂಶೋಧನೆಗೂ ಒಂದೊಂದು ವಿ.ವಿ. ಮಾಡಬೇಕಾಗುತ್ತದೆಯೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಉಪನಾಯಕ ಯು.ಟಿ.ಖಾದರ್ ಮಾತನಾಡಿ, ಎಲೆಚಿಕ್ಕಿ ರೋಗಕ್ಕೆ ಪರಿಹಾರ ಕಂಡುಕೊಳ್ಳುವ ಜತೆಗೆ ಬೆಳೆ ನಷ್ಟಕ್ಕೆ ತತ್ಕ್ಷಣವೇ ಬೆಳಗಾಗರರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.
ಸಚಿವ ಆರಗ ಜ್ಞಾನೇಂದ್ರ ಉತ್ತರಿಸಿ, ಅಡಿಕೆಗೆ ಸಂಬಂಧಿಸಿದಂತೆ ಹೊಸ ತೋಟ ಮಾಡುವುದು ಬೇಡವೇ ಬೇಡ. ಈಗ ಇರುವ ತೋಟವನ್ನು ಉಳಿಸಿಕೊಳ್ಳಬೇಕಾಗಿದೆ. ಅಲ್ಲದೆ, ಅಡಿ ಜಿಗಿದು ಉಗಿಯುವುದಕ್ಕೆ ಸೀಮಿತವಾಗಿದೆಯೇ ಹೊರತು, ಬೇರೆ ಯಾವುದೇ ಉದ್ದೇಶಕ್ಕೆ ವ್ಯಾಪಕವಾಗಿ ಬಳಸುವ ಬಗ್ಗೆ ಸಮಗ್ರ ಸಂಶೋಧನೆಯಾಗಿಲ್ಲ ಮತ್ತು ಬಳಕೆಯೂ ಆಗುತ್ತಿಲ್ಲ. 10 ನರ್ಸರಿಗಳು ಖಾಲಿಯಾಗುತ್ತಿವೆ. ಹೀಗಾಗಿ ಹೊಸತೋಟ ಮಾಡುವ ಬದಲು ಇರುವುದನ್ನು ಉಳಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.