ಸೇನಾ ನೇಮಕಾತಿ ರ್ಯಾಲಿಗೆ ಚಾಲನೆ

ಬೆಳಗಾವಿ ಸೇರಿ 6 ಜಿಲ್ಲೆ ಯುವಕರಿಗೆ ಅವಕಾಶ ! ಜಿಲ್ಲೆಯಿಂದ 51,423 ಯುವಕರು ಭಾಗಿ

Team Udayavani, Feb 5, 2021, 7:28 PM IST

army rally

ಬೆಳಗಾವಿ: ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಜ್ಞಾನಾರ್ಜನೆಯ ಕೇಂದ್ರವಾಗಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆವರಣ ಗುರುವಾರ ಭಾರತೀಯ ಸೇನೆಯ ಭಾವಿ ಯೋಧರ ಕಸರತ್ತಿನ ತಾಣವಾಗಿ ಬದಲಾಗಿತ್ತು. ಕೊರೊನಾ ಹಾವಳಿಯ ಮಧ್ಯೆ  ನಡೆಯುತ್ತಿರುವ ಮೊದಲ ದೊಡ್ಡ ಸೇನಾ ಭರ್ತಿ ರ್ಯಾಲಿಯಲ್ಲಿ ಉತ್ಸಾಹದಿಂದ ದಾಖಲೆಯ ಸಂಖ್ಯೆಯಲ್ಲಿ ಭಾಗವಹಿಸಿರುವ ಯುವಕರು ವಿವಿ ಆವರಣದ ಚಿತ್ರವನ್ನೇ ಬದಲಾಯಿಸಿದ್ದರು.

ಸೇನಾ ನೇಮಕಾತಿ ಪ್ರಧಾನ ಕಚೇರಿ ಆಶ್ರಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮೈದಾನದಲ್ಲಿ ಗುರುವಾರದಿಂದ ಆರಂಭವಾದ ಸೇನಾ ನೇಮಕಾತಿ ರ್ಯಾಲಿಯಲ್ಲಿ ಬೆಳಗಾವಿ, ಕಲಬುರಗಿ ಸೇರಿದಂತೆ ಆರು ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಮಹದಾಸೆಯಿಂದ ಪಾಲ್ಗೊಂಡಿದ್ದಾರೆ.

ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳ 62,217 ಅಭ್ಯರ್ಥಿಗಳು ಈ ರ್ಯಾಲಿಗೆ ತಮ್ಮ ಹೆಸರು ನೋಂದಾಯಿಸಿದ್ದಾರೆ. ಇದರಲ್ಲಿ ಬೆಳಗಾವಿ ಜಿಲ್ಲೆಯೊಂದರಿಂದಲೇ 51,423 ಅಭ್ಯರ್ಥಿಗಳು ಹೆಸರು ನೋಂದಣಿ ಮಾಡಿರುವುದು ವಿಶೇಷ. ಉಳಿದಂತೆ ಕಲಬುರಗಿ ಜಿಲ್ಲೆಯಿಂದ 3007, ಬೀದರ್‌ನಿಂದ 2709, ಕೊಪ್ಪಳದಿಂದ 2909, ರಾಯಚೂರು ಜಿಲ್ಲೆಯಿಂದ 1445 ಹಾಗೂ ಯಾದಗಿರಿಯಿಂದ 724 ಅಭ್ಯರ್ಥಿಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ.

ಫೆ.15ರವರೆಗೆ ನಡೆಯಲಿರುವ ನೇಮಕಾತಿ ರ್ಯಾಲಿಯಲ್ಲಿ ಪ್ರತಿ ದಿನ ಸುಮಾರು 4800 ಅಭ್ಯರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಕರ್ನಲ್‌ ರಾಹುಲ್‌ ಆರ್ಯ ಮತ್ತು ಬ್ರಿಗೇಡಿಯರ್‌ ಎ.ಎಸ್‌. ವಾಳಿಂಬೆ ಸೇನಾ ನೇಮಕಾತಿ ರ್ಯಾಲಿಗೆ ಹಸಿರು ನಿಶಾನೆ ತೋರಿಸಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಆರು ಜಿಲ್ಲೆಗಳಿಗೆ ಸಂಬಂಧಪಟ್ಟ ಈ ಸೇನಾ ಭರ್ತಿ ರ್ಯಾಲಿಯನ್ನು  ಅಚ್ಚುಕಟ್ಟಾಗಿ ನಡೆಸಲಾಗುತ್ತಿದ್ದು ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಡಳಿತದಿಂದ ಎಲ್ಲ ಸಹಾಯ,ಸಹಕಾರ ನೀಡಲಾಗಿದೆ. ಆನ್‌ಲೈನ್‌ ಮೂಲಕ ಒಟ್ಟು 62,217 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಅದರಲ್ಲಿ ಬಹುತೇಕ ಅಂದರೆ 51,423 ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಗೆ ಸೇರಿದವರಾಗಿದ್ದಾರೆ ಎಂದರು.

ಅಭ್ಯರ್ಥಿಗಳಿಗೆ ಪಾಲಿಕೆ ವತಿಯಿಂದ ಸಂಚಾರಿ ಶೌಚಾಲಯ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಿಂದ ವಿಶೇಷ ಬಸ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲಿ ಎಂಬ ಉದ್ದೇಶದಿಂದ ರ್ಯಾಲಿಗೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗಿದೆ. ವಿವಿಧ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಪೀರನವಾಡಿ ಗ್ರಾಮದ ಮೂರು ಕಲ್ಯಾಣ ಮಂಟಪಗಳಲ್ಲಿ ಊಟ, ವಸತಿ ಮತ್ತು ಅಲೊ³àಪಹಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

 ಇದನ್ನೂ ಓದಿ :ರೈತರ 12 ಸಾವಿರ ಕೋಟಿ ರೂ. ಸಾಲ ಮನ್ನಾ: ತಮಿಳುನಾಡು ಸರ್ಕಾರದಿಂದ ಘೋಷಣೆ

ಬ್ರಿಗೇಡಿಯರ್‌ ಎ.ಎಸ್‌.ವಾಳಿಂಬೆ ಮಾತನಾಡಿ, ಈ ರ್ಯಾಲಿಯಲ್ಲಿ ಸುಮಾರು 5500 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಆಯ್ಕೆ ಬಳಿಕ ರೆಜಿಮೆಂಟ್‌ನಲ್ಲಿ ಎರಡು ವರ್ಷ ತರಬೇತಿ ನಡೆಯಲಿದ್ದು ನಂತರ ಸೇವೆಗೆ ಸೇರ್ಪಡೆ ಮಾಡಿಕೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.