370 ಕಾಯ್ದೆ ರದ್ದು: ಕಾಂಗ್ರೆಸ್-ಪಾಕಿಸ್ತಾನ ನಿಲುವು ಒಂದೇ: ಸಚಿವ ಪ್ರಹ್ಲಾದ ಜೋಶಿ
Team Udayavani, Aug 31, 2019, 4:26 PM IST
ಬೆಳಗಾವಿ: ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಪಡಿಸಿದಾಗ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ಭಾಷೆ ಒಂದೇ ಆಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್‌ನ್ನು ಕಟುವಾಗಿ ಟೀಕಿಸಿದರು.
ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನ ವಾದ ಮಾಡುವುದನ್ನೇ ಕಾಂಗ್ರೆಸ್‌ನವರು ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್-ಪಾಕಿಸ್ತಾನದ ನಡುವಿನ ಹೇಳಿಕೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಭಾರತದ ವಿರುದ್ಧವೇ ಈ ಇಬ್ಬರ ಹೇಳಿಕೆ ಬರುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪಾಕಿಸ್ತಾನದವರು ಆಗಾಗ ಪ್ರಸ್ತಾಪಿಸುತ್ತಿದ್ದಾರೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ ಅವರ ನಿಲುವು ಏನೆಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತ ಬಂದಿದೆ. ಇನ್ನಾದರೂ ಬುದ್ದಿ ಕಲಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಜೋಶಿ ಕುಟುಕಿದರು.
ಕರ್ನಾಟಕ ಸೇರಿದಂತೆ ದೇಶದ 12ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭೀಕರ ನೆರೆ ಬಂದಿದೆ. ಜನರು ಇದರಿಂದ ನಲುಗಿದ್ದಾರೆ. ಈಗಾಗಲೇ ಅಧ್ಯಯನ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸುತ್ತಿವೆ. ಹಾನಿಯ ಸಂಪೂರ್ಣ ಸಮೀಕ್ಷೆ ಮುಗಿದ ಬಳಿಕ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಅಂದರೆ 3-4 ದಿನಗಳ ಅವಧಿಯಲ್ಲಿ ಪರಿಹಾರ ಘೋಷಣೆ ಮಾಡಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.