Assembly session ಸಚಿವರ “ಕಾರುಬಾರು’ಗೆ 9 ಕೋಟಿ
3,542 ಕೋಟಿ ಪೂರಕ ಅಂದಾಜು ಮಂಡನೆ
Team Udayavani, Dec 11, 2023, 8:49 PM IST
ಸುವರ್ಣ ವಿಧಾನಸೌಧ: 2023-24ನೇ ಸಾಲಿನಲ್ಲಿ ಅನುಮೋದನೆ ಪಡೆದಿದ್ದ ಬಜೆಟ್ ಮೊತ್ತಕ್ಕಿಂತ ಹೆಚ್ಚುವರಿಯಾಗಿ ಖರ್ಚು ಮಾಡಿದ ಮತ್ತು ಮಾಡಬೇಕಾದ 3,542.10 ಕೋಟಿ ರೂ. ಪೂರಕ ಅಂದಾಜನ್ನು ವಿಧಾನಸಭೆಯಲ್ಲಿ ಸೋಮವಾರ ಮಂಡಿಸಲಾಯಿತು.
ಒಟ್ಟಾರೆ 3,542 ಕೋಟಿಯಲ್ಲಿ 684.28 ಕೋಟಿ ರೂ. ಕೇಂದ್ರ ಸಹಾಯಕ್ಕೆ ಸಂಬಂಧಿಸಿದ್ದ ಯೋಜನೆಗಳಿಗೆ ನೀಡಲಾಗಿದೆ. ಜತೆಗೆ ವಿವಿಧ ಇಲಾಖೆಗಳಲ್ಲಿನ ಪ.ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್‌ಸಿಎಸ್‌ಪಿ-ಟಿಎಸ್‌ಪಿ) ಅಡಿ ಹೆಚ್ಚುವರಿ ಅನುದಾನ ಕಲ್ಪಿಸಲಾಗಿದೆ. ಇದಲ್ಲದೆ, ಕೃಷಿ ಮತ್ತು ತೋಟಗಾರಿಕೆ, ಶಿಕ್ಷಣ, ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್, ಪಶುಸಂಗೋಪನೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳಿಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳಿಗೆ ಹೆಚ್ಚುವರಿ ಮೊತ್ತ ನೀಡಲಾಗಿದೆ.
33 ಸಚಿವರು, ಮುಖ್ಯಮಂತ್ರಿ ದೆಹಲಿ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕೃತ ಉಪಯೋಗಕ್ಕಾಗಿ, ಶಾಸಕರು, ದೆಹಲಿಯ ಸರ್ಕಾರದ ವಿಶೇಷ ಪ್ರತಿನಿಧಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಮತ್ತು ಮುಖ್ಯ ಸಲಹೆಗಾರ, ಮೇಲ್ಮನೆ ಸದಸ್ಯರು ಸೇರಿ 38 ವಾಹನಗಳು ಸೇರಿ ಒಟ್ಟಾರೆ ವಾಹನಗಳ ಖರೀದಿಗೆ 9.10 ಕೋಟಿ ರೂ.
2022-23 ಮತ್ತು 2023-24ನೇ ಸಾಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ಪಾವತಿಸಲು 7.30 ಕೋಟಿ ರೂ.
ಧಾರವಾಡದ ಐಐಟಿ ಸಂಸ್ಥೆಗೆ ಭೂಸ್ವಾಧೀನ ಪ್ರಕ್ರಿಯೆಗೆ ತಗಲುವ ವೆಚ್ಚ ಮತ್ತು ಸೇವಾ ಶುಲ್ಕ ಸೇರಿ ಒಟ್ಟಾರೆ 4.72 ಕೋಟಿ ರೂ.
ವರ್ಲ್ಡ್ ಎಕನಾಮಿಕ್ ಫೋರಂನಲ್ಲಿ ಭಾಗವಹಿಸಲು ತೆರಳಿದ್ದ ಮುಖ್ಯಮಂತ್ರಿ ನೇತೃತ್ವದ ನಿಯೋಗದ ಅಮೆರಿಕದ ದಾವೋಸ್ ಪ್ರವಾಸಕ್ಕೆ 14.25 ಕೋಟಿ ರೂ.
ಮೈಸೂರು ದಸರಾ ಆಚರಣೆಗೆ ಹೆಚ್ಚುವರಿಯಾಗಿ ಒದಗಿಸಿದ್ದ 8.50 ಕೋಟಿ ರೂ.
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಬಾಕಿ ಬಿಲ್ಲುಗಳ ಪಾವತಿಗಾಗಿ 4.66 ಕೋಟಿ ರೂ.
ಕರ್ನಾಟಕ ಸಂಭ್ರಮ 50ರ ಆಚರಣೆಗಾಗಿ 5 ಕೋಟಿ ರೂ.
ವಿಧಾನಸಭಾ ಅಧ್ಯಕ್ಷರ ವಾಹನ ಖರೀದಿಗೆ ಹೆಚ್ಚುವರಿಯಾಗಿ 39 ಲಕ್ಷ ಹಾಗೂ ವಿಧಾನ ಪರಿಷತ್ತಿನ ಉಪ ಸಭಾಪತಿಗಳ ಹೊಸ ವಾಹನ ಖರೀದಿಗೆ ಹೆಚ್ಚುವರಿಯಾಗಿ 8 ಲಕ್ಷ ರೂ.
ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಹೆಚ್ಚುವರಿಯಾಗಿ 4.85 ಕೋಟಿ ರೂ.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರ ವೇತನ ಪಾವತಿಗೆ ಸಾಂಕೇತಿಕ ಅನುದಾನ 1 ಲಕ್ಷ ರೂ.
ರಾಜ್ಯದ ಕಾರಾಗೃಹಗಳಲ್ಲಿ ಅಸ್ವಾಭಾವಿಕ ಮರಣ ಹೊಂದಿದ ಬಂಧಿಗಳ ಪರಿಹಾರಕ್ಕೆ 1.50 ಕೋಟಿ ರೂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.