ಕೋವಿಡ್ ವಿರುದ್ಧ ಸಂಘಟಿತ ಹೋರಾಟ
Team Udayavani, May 4, 2020, 3:16 PM IST
ಸಾಂದರ್ಭಿಕ ಚಿತ್ರ
ಅಥಣಿ: ಸರ್ಕಾರದ ಮಾರ್ಗಸೂಚಿಯನ್ನು ಚಾಚು ತಪ್ಪದೆ ಪರಿಪಾಲನೆ ಮಾಡುತ್ತಿದ್ದೇವೆ. ಕೊರೊನಾ ತಡೆಗೆ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿಗೆ ತರಲಾಗಿದೆ. ಗ್ರಾಮದಲ್ಲಿ ಸದಸ್ಯರನ್ನೊಳಗೊಂಡ ತಂಡಗಳನ್ನು ರಚಿಸಲಾಗಿದ್ದು 60 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಜನರಿಗೆ ವಿಶೇಷ ಮಾರ್ಗದರ್ಶನದ ಮೂಲಕ ಕಾಳಜಿ ಮಾಡಲಾಗುತ್ತಿದೆ ಎಂದು ಸಂಕೋನಟ್ಟಿ ಪಿಡಿಒ ಸುರೇಶ ಮುಂಜೆ ಹೇಳಿದರು.
ಅವರು ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಗ್ರಾಮ ಪಂಚಾಯತ್ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ವೈರಸ್ ತಡೆಗಟ್ಟುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿದ್ದು, ಸಾರ್ವಜನಿಕರು, ರೈತರು ಸಹಕಾರ ನೀಡುತ್ತಿದ್ದಾರೆ. ಪ್ರತಿ ದಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಂಚರಿಸಿ ಅಗತ್ಯ ವಸ್ತುಗಳ ಅಂಗಡಿಗಳು, ನ್ಯಾಯಬೆಲೆ ಅಂಗಡಿ ಸೇರಿದಂತೆ ಎಲ್ಲೆಡೆ ಸುತ್ತಾಡಿ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು.
ಸಂಕೋನಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮಗಳಲ್ಲಿ ಟಿ.ಸಿ.ಎಲ್ ಪೌಡರ ಹಾಗೂ ಸ್ಯಾನಿಟೆ„ಸರ್ ದ್ರಾವಣ ಸಿಂಪರಣೆ ಮಾಡಲಾಗಿದೆ, ಚರಂಡಿ ಸ್ವತ್ಛತೆ ಮಾಡಲಾಗಿದೆ. ಬೇರೆ ಗ್ರಾಮಗಳಿಂದ ಹಾಗೂ ಹೊರ ರಾಜ್ಯಗಳಿಂದ ಜನ ಬರುವುದನ್ನು ನಿಷೇಧ ಮಾಡಲಾಗಿದ್ದು ಅದಕ್ಕಾಗಿಯೇ ಕಾವಲು ಪಡೆ ರಚಿಸಲಾಗಿದೆ ಎಂದರು.
ಪ್ರತಿಯೊಬ್ಬರು ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಹೊರ ಬರುವಂತೆ ಡಂಗುರ ಮೂಲಕ ತಿಳಿ ಹೇಳಲಾಗಿದೆ. ಮಾಸ್ಕ್ ಇಲ್ಲದೆ ಹೊರ ಬಂದವರಿಗೆ ದಂಡ ವಿಧಿಸುವ ಕಾರ್ಯ ಮಾಡಲಾಗಿದೆ. ಗ್ರಾ.ಪಂ ಕಾರ್ಯಾಲಯಕ್ಕೆ ಬರುವವರಿಗೆ ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸುರೇಶ ಮುಂಜೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.