ಆತ್ಮನಿರ್ಭರ ಭಾರತ ಸಂಕಲ್ಪ ಸಾಕಾರಗೊಳಿಸಿ: ಅಂಗಡಿ
Team Udayavani, Jul 11, 2020, 3:04 PM IST
ಬೆಳಗಾವಿ: ಕೋವಿಡ್ ಮಹಾ ಮಾರಿಯಿಂದಾಗಿ ದೇಶವು ಕಠಿಣ ಪರಿಸ್ಥಿತಿ ಎದುರಿಸುತ್ತಿರುವ ಈಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆತ್ಮನಿರ್ಭರ ಭಾರತಕ್ಕೆ ಪಣ ತೊಟ್ಟು ದೇಶದ ಜನರ ಎದುರು ಅವಕಾಶಗಳನ್ನು ತೆರೆದಿಟ್ಟಿದೆ. ಈ ಹಿನ್ನಲೆಯಲ್ಲಿ ದೇಶದ ಜನತೆ, ಅದರಲ್ಲೂ ಮುಖ್ಯವಾಗಿ ಯುವಜನತೆ ಆತ್ಮನಿರ್ಭರ ಭಾರತ ಸಂಕಲ್ಪವನ್ನು ಸಾಕಾರಗೊಳಿಸಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವೋಕಲ್ ಟು ಲೋಕಲ್, ಲೋಕಲ್ ಟು ಗ್ಲೋಬಲ್ ಎನ್ನುವ ಉದ್ದೇಶವನ್ನು ಸಾಕಾರಗೊಳಿಸಲು ಯುವಜನತೆ ಮುಂದೆ ಬರಬೇಕಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು 20 ಲಕ್ಷ ಕೋಟಿ ನೆರವು ಘೋಷಿಸಿದೆ. ರೈಲ್ವೆ, ಕೃಷಿ, ತೋಟಗಾರಿಕೆ, ಹೈನೋದ್ಯಮ, ಸಣ್ಣ ಕೈಗಾರಿಕೆ ಸೇರಿ ಹಲವು ವಲಯಗಳಲ್ಲಿ ಸ್ವಯಂ ಉದ್ಯೋಗಕ್ಕೆನ ಅವಕಾಶಗಳ ಬಾಗಿಲು ತೆರೆದಿದೆ. ಯುವಜನರು ಇದರ ಸದುಪಯೋಗ ಪಡೆಯಬೇಕು ಎಂದರು.
ಕೋವಿಡ್-19 ದಿಂದಾಗಿ ಭಾರತ ಈಗ ಹೊರಳು ಹಾದಿಯಲ್ಲಿದೆ. ಗ್ರಾಮ, ಬಡವ ಮತ್ತು ರೈತನನ್ನು ದೃಷ್ಟಿಯಲ್ಲಿಟ್ಟುಕೊಂಡು ಸುಮಾರು 80 ಕೋಟಿ ಜನರಿಗೆ ಕೋವಿಡ್ ಸಂಕಟದ ಸಮಯದಲ್ಲಿ ಉಚಿತವಾಗಿ ನವೆಂಬರ್‌ವರೆಗೆ ಅಕ್ಕಿ, ಬೇಳೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜನರು ಸ್ವಯಂ ಬದುಕು ಕಟ್ಟಿಕೊಳ್ಳುವ ಜತೆಗೆ ದೇಶದ ಅಭ್ಯುದಯಕ್ಕಾಗಿ ದುಡಿಯಬೇಕಾಗಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಅನಿಲ ಬೆನಕೆ, ಅಭಯ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.