ನಲುಗಿದ ಆರ್ಥಿಕತೆಗೆ ಆತ್ಮನಿರ್ಭರ ಭಾರತ ಸಂಜೀವಿನಿ
Team Udayavani, Jan 21, 2021, 3:41 PM IST
ಬೆಳಗಾವಿ: ಕೋವಿಡ್-19 ಭಾರತದ ಆರ್ಥಿಕತೆ ಮೇಲೆ ಗಂಭೀರ ಪರಿಣಾಮ ಬೀರಿದೆ. ಇದರಿಂದ ಬಡತನದ ಸಂಖ್ಯೆ 40 ದಶಲಕ್ಷದವರೆಗೆ ಹೆಚ್ಚಾಗಿದ್ದು, ಜತೆಗೆ ನಿರುದ್ಯೋಗವೂ ಹೆಚ್ಚಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೋ| ಎಸ್. ಆರ್. ಕೇಶವ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದಲ್ಲಿ ಭಾರತದ ಆರ್ಥಿಕತೆಯ ಮೇಲೆ ಕೋವಿಡ್ 19 ರ ಪರಿಣಾಮ ಕುರಿತು ಬುಧವಾರ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
2020ರ ಎರಡು ತ್ರೈಮಾಸಿಕಗಳಲ್ಲಿ ಬೆಳವಣಿಗೆ ದರ ನಕಾರಾತ್ಮಕವಾಗಿ ಇರುವುದರಿಂದ ತಾಂತ್ರಿಕವಾಗಿ ಆರ್ಥಿಕ ಹಿಂಜರಿತವನ್ನು ಅನುಭವಿಸುತ್ತಿದೆ. ಆದರೆ ಆತ್ಮನಿರ್ಭರ ಭಾರತ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಭಾರತದ ಆರ್ಥಿಕತೆ ಕ್ರಮೇಣ ಸಹಜ ಸ್ಥಿತಿಗೆ ಬರುತ್ತಿದೆ. ಆತ್ಮನಿರ್ಭರ ಭಾರತ ಉದ್ಯೋಗ ಸೃಷ್ಟಿಸುತ್ತಿದೆ. ಬೇಡಿಕೆ ಹೆಚ್ಚಿಸುವುದರ ಜೊತೆಗೆ ಬಡತನವನ್ನು ಹೋಗಲಾಡಿಸಿ ಭಾರತವನ್ನು ಆರ್ಥಿಕವಾಗಿ ಹೆಚ್ಚು ಬಲಪಡಿಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ನ್ಯಾಯಬೆಲೆ ಅಂಗಡಿಗೆ ಭೇಟಿ-ಪರಿಶೀಲನೆ
ಆತ್ಮನಿರ್ಭರ ಭಾರತ ಬೇಡಿಕೆಯನ್ನು ಸೃಷ್ಟಿಸುವುದರ ಜೊತೆಗೆ ಪೂರೈಕೆ ಸರಪಳಿಯಲ್ಲಿನ ಅಡೆತಡೆಗಳನ್ನು ಸರಿಪಡಿಸುವಲ್ಲಿ ಪರಿಣಾಮ ಬೀರುತ್ತಿದೆ. ಇದನ್ನು ಯಶಸ್ವಿಗೊಳಿಸಲು ಜನರ ಪಾತ್ರವೂ ಮುಖ್ಯವಾಗಿದೆ. ವಿದ್ಯಾವಂತರು ಆತ್ಮನಿರ್ಭರ ಭಾರತದ ಬಗ್ಗೆ ತಿಳಿದುಕೊಳ್ಳಬೇಕು. ಅನುಷ್ಠಾನದಲ್ಲಿ ಸಹವರ್ತಿ ಅಪಾಯಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಅದರ ಉಪಯೋಗವನ್ನು ಜನರಿಗೆ ತಲುಪಲು ಸಹಾಯ ಮಾಡಬೇಕೆಂದು ಹೇಳಿದರು.
ಅರ್ಥಶಾಸ್ತ್ರ ವಿಭಾಗದ ಅಧ್ಯಕ್ಷ ಪ್ರೋ. ಡಿ.ಎನ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕರಾದ ಡಾ. ಕಿರಣಕುಮಾರ ಪಿ., ಡಾ. ಅರ್ಜುನ ಜಂಬಗಿ ಇದ್ದರು. ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.